TSK

TSK · ಆದಿಕಾಂಡ 16:5

مراجع Treasury of Scripture Knowledge في ಕನ್ನಡ IRV.

العودة إلى المقطع

ಅಬ್ರಹಾಮನ ದೇವರು, ನಾಹೋರನ ದೇವರು, ಅವರ ತಂದೆಯ ದೇವರು ನಿನಗೂ ನನಗೂ ನ್ಯಾಯತೀರಿಸಲಿ” ಎಂದನು. ಅದೇ ಪ್ರಕಾರ ಯಾಕೋಬನು ತನ್ನ ತಂದೆಯಾದ ಇಸಾಕನು ಭಯಭಕ್ತಿಯಿಂದ ಆರಾಧಿಸುವ ದೇವರ ಮೇಲೆ ಆಣೆಯಿಟ್ಟು ಪ್ರಮಾಣ ಮಾಡಿದನು.

ನಾನು ನಿನಗೆ ಯಾವ ಅನ್ಯಾಯವನ್ನೂ ಮಾಡಲಿಲ್ಲ. ನೀನು ಈಗ ನನಗೆ ವಿರೋಧವಾಗಿ ಯುದ್ಧಕ್ಕೆ ಬಂದದ್ದರಿಂದ ನೀನೇ ಅನ್ಯಾಯ ಮಾಡಿದ ಹಾಗಾಯಿತು. ನ್ಯಾಯಸ್ಥಾಪಕನಾದ ಯೆಹೋವನೇ ಈ ಹೊತ್ತು ಇಸ್ರಾಯೇಲರ ಮತ್ತು ಅಮ್ಮೋನಿಯರ ಮಧ್ಯದಲ್ಲಿ ನ್ಯಾಯತೀರಿಸಲಿ” ಎಂದು ಹೇಳಿಸಿದನು.

‘ಕೆಟ್ಟವರಿಂದಲೇ ಕೆಡುಕು’ ಎಂಬುದಾಗಿ ಹಿರಿಯರ ಗಾದೆಯುಂಟಷ್ಟೆ. ನಾನು ನಿನಗೆ ವಿರೋಧವಾಗಿ ಕೈಯೆತ್ತುವುದಿಲ್ಲ.

ಯೆಹೋವಾಷನು ಜೆಕರೀಯನ ತಂದೆಯಾದ ಯೆಹೋಯಾದನಿಂದ ತನಗಾದ ಕೃಪೆಯನ್ನು ಮರೆತು ಅವನ ಮಗನನ್ನು ಕೊಲ್ಲಿಸಿದನು. ಜೆಕರೀಯನು ಸಾಯುವಾಗ, “ಯೆಹೋವನೇ ಇದನ್ನು ನೋಡಿ, ತಕ್ಕ ಶಿಕ್ಷೆಯನ್ನು ವಿಧಿಸಲಿ” ಎಂದನು.

ನನ್ನ ದೇವರೇ, ಎದ್ದು ನನಗಾಗಿ ನ್ಯಾಯವನ್ನು ನಿರ್ಣಯಿಸು; ನನ್ನ ಕರ್ತನೇ, ಎಚ್ಚೆತ್ತು ನನ್ನ ವಿವಾದವನ್ನು ವಿಚಾರಿಸು.

ಆದರೆ ಮಾರ್ಥಳು ಉಪಚಾರ ಸೇವೆಯ ವಿಷಯವಾಗಿ ಬಹಳ ಬೇಸತ್ತು ಯೇಸುವಿನ ಬಳಿಗೆ ಬಂದು, “ಕರ್ತನೇ, ನನ್ನ ತಂಗಿಯು ಸೇವೆಗೆ ನನ್ನೊಬ್ಬಳನ್ನೇ ಬಿಟ್ಟಿದ್ದಾಳೆ, ಇದಕ್ಕೆ ನಿನಗೆ ಚಿಂತೆಯಿಲ್ಲವೋ? ನನಗೆ ನೆರವಾಗಬೇಕೆಂದು ಆಕೆಗೆ ಹೇಳು” ಅಂದಳು.