TSK

TSK · ಆದಿಕಾಂಡ 17:1

مراجع Treasury of Scripture Knowledge في ಕನ್ನಡ IRV.

العودة إلى المقطع

ಮೆತೂಷೆಲಹನು ಹುಟ್ಟಿದ ಮೇಲೆ ಹನೋಕನು ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ದೇವರ ಅನ್ಯೋನ್ಯತೆಯಲ್ಲಿ ಮುನ್ನೂರು ವರ್ಷ ಬದುಕಿದನು.

¶ ನೋಹನ ಚರಿತ್ರೆ: ನೋಹನು ಸತ್ಯವಂತನೂ ಎಲ್ಲಾ ಜನರಲ್ಲಿ ನೀತಿವಂತನು ಆಗಿದ್ದನು; ಅವನು ದೇವರೊಂದಿಗೆ ಅನ್ಯೋನ್ಯವಾಗಿ ನಡೆದುಕೊಂಡನು.

ಅಲ್ಲಿ ಯೆಹೋವನು ಅಬ್ರಾಮನಿಗೆ ದರ್ಶನದಲ್ಲಿ, “ನಾನು ಈ ದೇಶವನ್ನು ನಿನ್ನ ಸಂತಾನಕ್ಕೆ ಕೊಡುವೆನು” ಅಂದನು. ತನಗೆ ದರ್ಶನಕೊಟ್ಟ ಯೆಹೋವನಿಗೆ ಅಬ್ರಾಮನು ಯಜ್ಞವೇದಿಯನ್ನು ಕಟ್ಟಿಸಿದನು.

¶ ಅಬ್ರಹಾಮನು ಬಿಸಿಲೇರಿದಾಗ ಮಮ್ರೆಯ ಮೋರೆ ತೋಪಿನ ತನ್ನ ಗುಡಾರದ ಬಾಗಿಲಲ್ಲಿ ಕುಳಿತಿರುವಾಗ ಯೆಹೋವನು ಅವನಿಗೆ ಪ್ರತ್ಯಕ್ಷನಾದನು.

¶ ಅವನು ನನಗೆ, “ನಾನು ಆರಾಧನೆ ಮಾಡುತ್ತಾ ಬಂದಿರುವ ನನ್ನ ದೇವರಾದ ಆ ಯೆಹೋವನು ತನ್ನ ದೂತನನ್ನು ನಿನ್ನೊಂದಿಗೆ ಕಳುಹಿಸಿ ನೀನು ನನ್ನ ತಂದೆಯ ಮನೆತನಕ್ಕೆ ಸೇರಿರುವ ಬಂಧುಗಳಲ್ಲಿ ನನ್ನ ಮಗನಿಗೆ ಹೆಣ್ಣು ತೆಗೆದುಕೊಳ್ಳುವಂತೆ ಅನುಕೂಲ ಮಾಡುವನು.

¶ ದೇವರು ಅವನಿಗೆ, “ನಾನೇ ಸರ್ವಶಕ್ತನಾದ ದೇವರು, ನೀನು ಬಹು ಸಂತಾನವುಳ್ಳವನಾಗಿ ಹೆಚ್ಚುವೆ, ನಿನ್ನಿಂದ ಜನಾಂಗವೂ, ಜನಾಂಗಗಳ ಗುಂಪು ಉಂಟಾಗುವುದು. ಅನೇಕ ಜನಾಂಗಗಳ ಅರಸರು ನಿನ್ನಿಂದ ಹುಟ್ಟುವರು.

¶ ಯಾಕೋಬನು, ಯೋಸೇಫನಿಗೆ, “ಸರ್ವಶಕ್ತನಾದ ದೇವರು ಕಾನಾನ್ ದೇಶದ ಲೂಜ್ ಎಂಬಲ್ಲಿ ನನಗೆ ದರ್ಶನ ಕೊಟ್ಟು ಆಶೀರ್ವದಿಸಿದನು.

ನಾನು ಅಬ್ರಹಾಮನಿಗೂ, ಇಸಾಕನಿಗೂ, ಯಾಕೋಬನಿಗೂ ಸರ್ವಶಕ್ತನಾದ ದೇವರಾಗಿ ಕಾಣಿಸಿಕೊಂಡಿದ್ದೆನು. ಆದರೆ ಯೆಹೋವನೆಂಬ ನನ್ನ ಹೆಸರಿನಲ್ಲಿ ಅವರಿಗೆ ಗೋಚರವಾಗಿರಲಿಲ್ಲ.

ದೇವರ ಮಾತುಗಳನ್ನು ಕೇಳುವವನೂ, ಪರಾತ್ಪರನಾದ ದೇವರ ಜ್ಞಾನವನ್ನು ಪಡೆದವನೂ, ಪರವಶವಾಗಿ ಕಣ್ಣುತೆರೆದು, ಸರ್ವಶಕ್ತನ ದರ್ಶನವನ್ನು ಹೊಂದುವವನೂ ಆಗಿರುವ ಪುರುಷನು ನುಡಿದದ್ದು.

“ನಿನಗೆ ನಂಬಿಗಸ್ತನಾಗಿಯೂ, ನೀತಿಯಿಂದಲೂ ಯಥಾರ್ಥಚಿತ್ತದಿಂದಲೂ ನಡೆದುಕೊಂಡ ನಿನ್ನ ಸೇವಕನೂ, ನನ್ನ ತಂದೆಯೂ ಆದ ದಾವೀದನಿಗೆ ನೀನು ಮಹಾ ಕೃಪೆಯನ್ನು ತೋರಿಸಿದ್ದೀ. ಅವನ ಮೇಲೆ ಬಹಳವಾಗಿ ಕೃಪೆಯಿಟ್ಟು ಈಹೊತ್ತು ಅವನ ಸಿಂಹಾಸನಕ್ಕೆ ಒಬ್ಬ ಮಗನನ್ನು ಅನುಗ್ರಹಿಸಿದ್ದರಲ್ಲಿ ಅದನ್ನು ಸಂಪೂರ್ಣಗೊಳಿಸಿರುವೆ.

“ಯೆಹೋವನೇ, ದಯವಿಟ್ಟು ನಾನು ನಂಬಿಗಸ್ತನಾಗಿಯೂ ನಿನಗೆ, ಪ್ರಾಮಾಣಿಕನಾಗಿಯೂ ಶ್ರದ್ಧೆಯಿಂದಲೂ ನಡೆದುಕೊಂಡು ನಿನ್ನ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದುದನ್ನು ನೆನಪುಮಾಡಿಕೋ” ಎಂದು ಹೇಳಿ ಹಿಜ್ಕೀಯನು ಬಹಳವಾಗಿ ಕಣ್ಣೀರಿಟ್ಟು ಪ್ರಾರ್ಥಿಸಿದನು.

ದೇವರ ಅಗಾಧಗಳನ್ನು ಕಂಡುಕೊಳ್ಳಬಲ್ಲೆಯಾ? ಸರ್ವಶಕ್ತನಾದ ದೇವರನ್ನು ಸಂಪೂರ್ಣವಾಗಿ ಗ್ರಹಿಸಿಕೊಳ್ಳಬಹುದೋ?

ನೀನು ನನ್ನ ಪ್ರಾಣವನ್ನು ಮರಣದಿಂದ ತಪ್ಪಿಸಿ, ಕಣ್ಣೀರನ್ನು ನಿಲ್ಲಿಸಿ, ನನ್ನ ಪಾದಗಳನ್ನು ಎಡವದಂತೆ ಕಾದಿದ್ದೀ.

ಹಿಜ್ಕೀಯನು, “ಯೆಹೋವನೇ, ನಾನು ನಂಬಿಗಸ್ತನಾಗಿಯೂ, ಯಥಾರ್ಥಚಿತ್ತನಾಗಿಯೂ ನಿನಗೆ ನಡೆದುಕೊಂಡು ನಿನ್ನ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದನ್ನು ನೆನಪುಮಾಡಿಕೋ” ಎಂದು ಪ್ರಾರ್ಥಿಸಿ ಬಹಳವಾಗಿ ಅತ್ತನು.

ಭೂನಿವಾಸಿಗಳೆಲ್ಲರೂ ಆತನ ದೃಷ್ಟಿಯಲ್ಲಿ ಶೂನ್ಯರಾಗಿ ಪರಲೋಕ ಸೈನ್ಯದವರಲ್ಲಿಯೂ, ಭೂಲೋಕದವರಲ್ಲಿಯೂ ತನ್ನ ಚಿತ್ತದ ಪ್ರಕಾರ ಮಾಡುತ್ತಾನೆ; ಆತನ ಶಕ್ತಿಯುತ ಕೈಯನ್ನು ತಡೆಹಿಡಿಯಲು ಸಾಧ್ಯವಿಲ್ಲ ‘ನೀನು ಏನು ಮಾಡುತ್ತೀ?’” ಎಂದು ಯಾರೂ ಕೇಳಲಾರರು.

‹ಆದುದರಿಂದ ಪರಲೋಕದಲ್ಲಿರುವ ನಿಮ್ಮ ತಂದೆಯು ಪರಿಪೂರ್ಣನಾಗಿರುವ ಹಾಗೆಯೇ ನೀವೂ ಪರಿಪೂರ್ಣರಾಗಿರಿ.›

ಅವರಿಬ್ಬರೂ ಕರ್ತನ ಎಲ್ಲಾ ಆಜ್ಞೆಗಳನ್ನೂ, ನೇಮನಿಷ್ಠೆಗಳನ್ನೂ ಕೈಕೊಂಡು ತಪ್ಪಿಲ್ಲದೆ ನಡೆದುಕೊಳ್ಳುತ್ತಾ ದೇವರ ದೃಷ್ಟಿಯಲ್ಲಿ ನೀತಿವಂತರಾಗಿದ್ದರು.

ಇದರ ದೆಸೆಯಿಂದ ದೇವರ ಮುಂದೆಯೂ, ಮನುಷ್ಯರ ಮುಂದೆಯೂ ನಿರ್ದೋಷವಾದ ಮನಸ್ಸಾಕ್ಷಿಯುಳ್ಳವನಾಗಿರಬೇಕೆಂದು ನಾನು ಯಾವಾಗಲೂ ಪ್ರಯತ್ನಿಸುತ್ತೇನೆ.

ಆದ್ದರಿಂದ ಯಾರೂ ಕದಲಿಸಲಾರದ ರಾಜ್ಯವನ್ನು ಪಡೆದುಕೊಳ್ಳುವವರಾದ ನಾವು ಕೃತಜ್ಞತೆಯುಳ್ಳವರಾಗಿ, ಆತನಿಗೆ ಸಮರ್ಪಕವಾದ ಆರಾಧನೆಯನ್ನು ಭಕ್ತಿಯಿಂದಲೂ ಮತ್ತು ಭಯದಿಂದಲೂ ಮಾಡೋಣ.