TSK

TSK · ಆದಿಕಾಂಡ 17:21

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಅದಕ್ಕೆ ಆತನು, “ಬರುವ ವರ್ಷ ಇದೇ ವೇಳೆಗೆ ನಾನು ತಪ್ಪದೆ ತಿರುಗಿ ನಿನ್ನ ಬಳಿಗೆ ಬರುತ್ತೇನೆ; ಬಂದಾಗ ನಿನ್ನ ಪತ್ನಿಯಾದ ಸಾರಳಿಗೆ ಮಗನಿರುವನು” ಎಂದನು. ಆ ಮಾತು ಹಿಂದೆ ಗುಡಾರದ ಬಾಗಿಲಲ್ಲಿ ನಿಂತಿದ್ದ ಸಾರಳ ಕಿವಿಗೆ ಬಿತ್ತು.

ಅದರಂತೆ ಸಾರಳು ಬಸುರಾಗಿ, ದೇವರು ಮೊದಲು ಸೂಚಿಸಿದ ಕಾಲದಲ್ಲಿ ಅಬ್ರಹಾಮನಿಂದ ಅವನ ಮುಪ್ಪಿನಲ್ಲೇ ಅವನಿಗೆ ಒಬ್ಬ ಮಗನನ್ನು ಹೆತ್ತಳು.

ಅಲ್ಲಿ ಯೆಹೋವನು ಇಸಾಕನಿಗೆ ದರ್ಶನಕೊಟ್ಟು, “ನೀನು ಐಗುಪ್ತ ದೇಶಕ್ಕೆ ಇಳಿದು ಹೋಗಬೇಡ; ನಾನು ಹೇಳುವ ದೇಶದಲ್ಲಿ ನೀನು ವಾಸಮಾಡಬೇಕು.

¶ ನಂತರ ಅವನು ಯೋಸೇಫನನ್ನು, ಆಶೀರ್ವದಿಸಿ, “ನನ್ನ ಪೂರ್ವಿಕರಾದ ಅಬ್ರಹಾಮ ಇಸಾಕರು ಸೇವಿಸಿದ ದೇವರೇ, ನನ್ನನ್ನು ಚಿಕ್ಕಂದಿನಿಂದ ಈ ದಿನದ ವರೆಗೂ ಪರಾಂಬರಿಸುತ್ತಾ ಬಂದ ದೇವರು,

ಇದಲ್ಲದೆ ಆತನು ಅವನಿಗೆ, “ನಾನು ನಿನ್ನ ತಂದೆಯಾದ, ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರೂ ಆಗಿದ್ದೇನೆ” ಎಂದು ಹೇಳಿದನು. ಮೋಶೆಯು ದೇವರನ್ನು ನೋಡುವುದಕ್ಕೆ ಭಯಪಟ್ಟು ಮುಖವನ್ನು ಮುಚ್ಚಿಕೊಂಡನು.

ಆತನು ಅವರಿಗೆ, ‹“ತಂದೆಯು ತನ್ನ ಅಧಿಕಾರದಲ್ಲಿಟ್ಟುಕೊಂಡಿರುವ ಕಾಲಗಳನ್ನೂ, ಸಮಯಗಳನ್ನೂ ತಿಳಿದುಕೊಳ್ಳುವುದು ನಿಮ್ಮ ಕಾರ್ಯವಲ್ಲ.›

“ಮುಂದಿನ ವರ್ಷದಲ್ಲಿ ಇದೇ ಕಾಲದಲ್ಲಿ ನಾನು ಬರುವೆನು ಆಗ ಸಾರಳಿಗೆ ಮಗನು ಇರುವನು” ಎಂಬ ವಾಗ್ದಾನವಾಗಿದೆ.

ನಂಬಿಕೆಯಿಂದಲೇ ಅವನು ವಾಗ್ದಾನದ ದೇಶಕ್ಕೆ ಬಂದಾಗ, ಅಲ್ಲಿ ಅನ್ಯ ದೇಶದವನಂತೆ ಗುಡಾರಗಳಲ್ಲಿ ಇದ್ದುಕೊಂಡು ಪ್ರವಾಸಿಯಾಗಿ ಬದುಕಿದನು. ಅದೇ ವಾಗ್ದಾನಕ್ಕೆ ಸಹಭಾಧ್ಯರಾಗಿದ್ದ ಇಸಾಕನೂ, ಯಾಕೋಬನೂ ಅವನಂತೆಯೇ ಗುಡಾರಗಳಲ್ಲಿ ವಾಸಿಸಿದರು.