ಇದಲ್ಲದೆ ಆತನು ಅವನಿಗೆ, “ನಾನು ನಿನ್ನ ತಂದೆಯಾದ, ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರೂ ಆಗಿದ್ದೇನೆ” ಎಂದು ಹೇಳಿದನು. ಮೋಶೆಯು ದೇವರನ್ನು ನೋಡುವುದಕ್ಕೆ ಭಯಪಟ್ಟು ಮುಖವನ್ನು ಮುಚ್ಚಿಕೊಂಡನು.
TSK
TSK · ಆದಿಕಾಂಡ 17:3
مراجع Treasury of Scripture Knowledge في ಕನ್ನಡ IRV.
¶ ಆಗ ಮೋಶೆ ಮತ್ತು ಆರೋನರು ಇಸ್ರಾಯೇಲರ ಸರ್ವಸಮೂಹದವರ ಮುಂದೆ ಅಡ್ಡಬಿದ್ದರು.
“ನೀವಿಬ್ಬರೂ ಸಮೂಹದವರಲ್ಲಿ ಇರದೆ ಬೇರೆ ನಿಲ್ಲಬೇಕು. ನಾನು ಒಂದು ಕ್ಷಣಮಾತ್ರದಲ್ಲಿ ಅವರನ್ನು ದಹಿಸಿಬಿಡುತ್ತೇನೆ” ಎಂದು ಹೇಳಿದನು. ಆಗ ಮೋಶೆ ಮತ್ತು ಆರೋನರು ಬೋರಲುಬಿದ್ದರು.
ಏನೆಂದರೆ ಅವನು ಯಜ್ಞವೇದಿಯಿಂದ ಆಕಾಶಕ್ಕೆ ಹೋಗುತ್ತಿರುವ ಅಗ್ನಿಜ್ವಾಲೆಯೊಳಗೆ ಮೇಲಕ್ಕೇರಿ ಹೋದನು. ಅವರು ಇದನ್ನು ನೋಡುತ್ತಲೆ ನೆಲದ ಮೇಲೆ ಬೋರಲುಬಿದ್ದರು.
¶ ಮಳೆಗಾಲದಲ್ಲಿ ಮೇಘಮಂಡಲದೊಳಗೆ ಕಾಮನ ಬಿಲ್ಲು ಹೊಳೆಯುವಂತೆ ಆತನ ಸುತ್ತಲೂ ಪ್ರಕಾಶವು ಹೊಳೆಯುತ್ತಿತ್ತು. ಹೀಗೆ ಯೆಹೋವನ ಮಹಿಮಾದ್ಭುತ ದರ್ಶನವು ಆಯಿತು. ಇದನ್ನು ಕಂಡಾಗ ನಾನು ಅಡ್ಡಬಿದ್ದೆ; ಮಾತನಾಡುವಾತನ ವಾಣಿಯನ್ನು ಕೇಳಿದೆ.
ಅವರು ಹತಿಸುತ್ತಿರುವಾಗ ಅಲ್ಲಿ ಒಂಟಿಗನಾಗಿ ಉಳಿದ ನಾನು ಅಡ್ಡಬಿದ್ದು, “ಅಯ್ಯೋ, ಕರ್ತನಾದ ಯೆಹೋವನೇ, ನೀನು ಯೆರೂಸಲೇಮಿನ ಮೇಲೆ ನಿನ್ನ ಕೋಪಾಗ್ನಿಯನ್ನು ಹೊಯ್ದು, ಇಸ್ರಾಯೇಲರಲ್ಲಿ ಉಳಿದವರನ್ನೆಲ್ಲಾ ನಾಶಮಾಡುವಿಯಾ?” ಎಂದು ಮೊರೆಯಿಟ್ಟೆನು.
ಆದರೂ ಅವನು ಮಾತನಾಡುವ ಶಬ್ದವನ್ನು ಕೇಳಿದೆನು; ಅವನ ಮಾತಿನ ಶಬ್ದವು ನನ್ನ ಕಿವಿಗೆ ಬಿದ್ದಾಗ ನಾನು ಮೈಮರೆತು ಬೋರಲು ಬಿದ್ದಿದ್ದೆನು.
ನಾನು ಆತನನ್ನು ಕಂಡಾಗ ಸತ್ತವನ ಹಾಗೆ ಆತನ ಪಾದಗಳ ಮುಂದೆ ಬಿದ್ದೆನು. ಆತನು ತನ್ನ ಬಲಗೈಯನ್ನು ನನ್ನ ಮೇಲಿಟ್ಟು, ‹“ಹೆದರಬೇಡ,›‹ನಾನು ಮೊದಲನೆಯವನೂ, ಕಡೆಯವನೂ,›