¶ ಆ ದಿನದಲ್ಲಿ ಯೆಹೋವನು ಅಬ್ರಾಮನ ಸಂಗಡ ಒಡಂಬಡಿಕೆ ಮಾಡಿಕೊಂಡು, “ಐಗುಪ್ತ ದೇಶದ ನದಿಯಿಂದ ಯೂಫ್ರೆಟಿಸ್ ಮಹಾ ನದಿಯವರೆಗೂ ಇರುವ ಈ ದೇಶವನ್ನೆಲ್ಲಾ ನಿನ್ನ ಸಂತತಿಯವರಿಗೆ ಕೊಟ್ಟಿದ್ದೇನೆ.
TSK
TSK · ಆದಿಕಾಂಡ 17:7
مراجع Treasury of Scripture Knowledge في ಕನ್ನಡ IRV.
ಇದಲ್ಲದೆ ಯೆಹೋವನು ಅದರ ಮೇಲೆ ನಿಂತುಕೊಂಡು, “ನಿನ್ನ ತಂದೆಯಾದ ಅಬ್ರಹಾಮನ ದೇವರೂ, ಇಸಾಕನ ದೇವರೂ ಆಗಿರುವ ಯೆಹೋವನು ನಾನೇ. ನೀನು ಮಲಗಿರುವ ಭೂಮಿಯನ್ನು ನಿನಗೂ, ನಿನ್ನ ಸಂತತಿಗೂ ಕೊಡುವೆನು.
¶ ದೇವರು ಪುನಃ ಮೋಶೆಗೆ ಹೇಳಿದ್ದೇನೆಂದರೆ, “ನೀನು ಇಸ್ರಾಯೇಲರಿಗೆ, ನಿಮ್ಮ ಪೂರ್ವಿಕರಾದ ಅಬ್ರಹಾಮ್, ಇಸಾಕ್, ಯಾಕೋಬರ ದೇವರಾಗಿರುವ ಯೆಹೋವನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ” ಎಂದು ಹೇಳಬೇಕು. ಇದು ಸದಾಕಾಲಕ್ಕೂ ಇರುವ ನನ್ನ ಹೆಸರು. ಇದು ತಲಾಂತರಕ್ಕೂ ನನ್ನನ್ನು ಸ್ಮರಿಸಬೇಕಾದ ನಾಮ.
ಆದ್ದರಿಂದ ನೀವು ನನ್ನ ಮಾತುಗಳನ್ನು ಶ್ರದ್ಧೆಯಿಂದ ಕೇಳಿ, ನನ್ನ ಒಡಂಬಡಿಕೆಯನ್ನು ಕಾಪಾಡಿಕೊಂಡರೆ, ನೀವು ಎಲ್ಲಾ ಜನಾಂಗಗಳಲ್ಲಿ ನನಗೆ ಸ್ವಕೀಯ ಜನರಾಗಿರುವಿರಿ. ಸಮಸ್ತ ಭೂಮಿಯು ನನ್ನದೇ.
ಆದರೂ ಅವರು ಶತ್ರುಗಳ ದೇಶದಲ್ಲಿರುವಾಗಲೂ ನಾನು ಅವರನ್ನು ಬೇಡವೆನ್ನುವುದಿಲ್ಲ, ತಾತ್ಸಾರಮಾಡುವುದಿಲ್ಲ; ನಾನು ಅವರಿಗೆ ಮಾಡಿದ ಒಡಂಬಡಿಕೆಯನ್ನು ಮೀರುವುದಿಲ್ಲ, ಅವರನ್ನು ಇಲ್ಲದಂತೆ ಮಾಡುವುದಿಲ್ಲ; ನಾನು ಅವರ ದೇವರಾದ ಯೆಹೋವನಲ್ಲವೇ.
ಇಸ್ರಾಯೇಲರು ಸದಾಕಾಲವೂ ನಿನ್ನ ಪ್ರಜೆಯಾಗಿರಬೇಕೆಂದು ನಿರ್ಣಯಿಸಿದ ಯೆಹೋವನೇ, ನೀನು ಅವರಿಗೆ ದೇವರಾದಿ.
ಯೆಹೋವನೆಂಬಾತನು ನಮ್ಮ ದೇವರು, ಆತನ ನ್ಯಾಯವಿಧಿಗಳು ಭೂಲೋಕದಲ್ಲೆಲ್ಲಾ ಇವೆ.
ಆತನು ತನ್ನ ವಾಗ್ದಾನವನ್ನು ಸಾವಿರ ತಲೆಗಳವರೆಗೂ, ತನ್ನ ಒಡಂಬಡಿಕೆಯನ್ನು ನಿತ್ಯವೂ ನೆನಪಿನಲ್ಲಿಟ್ಟುಕೊಳ್ಳುತ್ತಾನೆ.
ನೀನು ಪುರಾತನ ಕಾಲದಿಂದಲೂ ನಮ್ಮ ಪೂರ್ವಿಕರಿಗೆ ಪ್ರಮಾಣಮಾಡಿರುವಂತೆ ಯಾಕೋಬನ ವಂಶದವರಿಗೆ ಸತ್ಯಪರನಾಗಿಯೂ, ಅಬ್ರಹಾಮನ ವಂಶದವರಿಗೆ ಪ್ರೀತಿಪರನಾಗಿಯೂ ನಡೆಯುವಿ.
ಆದರೆ ಯೇಸು ಅದನ್ನು ಕಂಡು ಕೋಪಗೊಂಡು ಅವರಿಗೆ, ‹“ಚಿಕ್ಕ ಮಕ್ಕಳನ್ನು ನನ್ನ ಹತ್ತಿರಕ್ಕೆ ಬರಗೊಡಿಸಿರಿ; ಅವುಗಳಿಗೆ ಅಡ್ಡಿಮಾಡಬೇಡಿರಿ; ಏಕೆಂದರೆ ದೇವರ ರಾಜ್ಯವು ಇಂಥವರದೇ.›
ಆತನು ನಮ್ಮ ಪೂರ್ವಿಕರಿಗೆ ದಯೆಯನ್ನು ತೋರಿಸುವುದರ ಮೂಲಕ ನಮ್ಮ ಮೂಲಪಿತೃವಾದ ಅಬ್ರಹಾಮನಿಗೆ ಪ್ರಮಾಣಮಾಡಿ ಕೊಟ್ಟ ತನ್ನ ಪರಿಶುದ್ಧವಾದ ಒಡಂಬಡಿಕೆಯನ್ನು ನೆನಪಿಸಿಕೊಳ್ಳುವವನಾಗಿದ್ದಾನೆ.
ಅವರು ಇಸ್ರಾಯೇಲಿನ ವಂಶದವರು. ದೇವರು ಇವರನ್ನು ಮಕ್ಕಳನ್ನಾಗಿ ಆರಿಸಿಕೊಂಡನು; ಇವರಿಗೆ ತನ್ನ ಮಹಿಮೆಯನ್ನು ವ್ಯಕ್ತಪಡಿಸಿದನು; ಅವರ ಸಂಗಡ ದೇವರು ಒಡಂಬಡಿಕೆಗಳನ್ನು ಮಾಡಿಕೊಂಡಿದ್ದಾನೆ ಅವರಿಗೆ ಧರ್ಮಶಾಸ್ತ್ರವು, ದೇವಾಲಯದಲ್ಲಿ ನಡೆಯುವ ಆರಾಧನೆಯೂ, ವಾಗ್ದಾನಗಳೂ ಕೊಡಲ್ಪಟ್ಟವು.
ಹಾಗೆಯೇ, ದೇವರು ಅಬ್ರಹಾಮನಿಗೆ ಮತ್ತು ಅವನಿಂದ ಬರುವ ಪೀಳಿಗೆಗೆ ವಾಗ್ದಾನ ಮಾಡಿದನು. ಆದರೆ “ಪೀಳಿಗೆ” ಎಂದು ಹೇಳಿದಾಗ, ಅದು ವಂಶದಲ್ಲಿ ಇರುವ ಎಲ್ಲರಿಗೂ ಅನ್ವಯಿಸದೇ, ಅಬ್ರಹಾಮನ ವಂಶಕ್ಕೆ ಸೇರಿದ ಒಬ್ಬ ವ್ಯಕ್ತಿಯನ್ನೇ ಸೂಚಿಸುತ್ತದೆ. ಆ ಒಬ್ಬನು ಕ್ರಿಸ್ತನೇ.
‘ಆ ದಿನಗಳ ತರುವಾಯ ನಾನು ಇಸ್ರಾಯೇಲ್ ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು’ ಹೀಗಿರುವುದು, ‘ನಾನು ನನ್ನ ಆಜ್ಞೆಗಳನ್ನು ಅವರ ಮನಸ್ಸಿನಲ್ಲಿ ಇಡುವೆನು. ನಾನು ಅವರ ಹೃದಯಗಳ ಮೇಲೆ ಅವುಗಳನ್ನು ಬರೆಯುವೆನು. ನಾನು ಅವರಿಗೆ ದೇವರಾಗಿರುವೆನು. ಅವರು ನನ್ನ ಜನರಾಗಿರುವರು.