ಗಿದ್ಯೋನನು ಮನೆಗೆ ಹೋಗಿ ಒಂದು ಆಡಿನ ಮರಿಯನ್ನು ತೆಗೆದುಕೊಂಡು, ಒಂದು ಏಫಾ ಅಂದರೆ ಸುಮಾರು ಮೂವ್ವತ್ತು ಸೇರು ಹಿಟ್ಟಿನಿಂದ ಹುಳಿಯಿಲ್ಲದ ರೊಟ್ಟಿಗಳನ್ನು ಸುಟ್ಟು, ಮಾಂಸವನ್ನು ಸಿದ್ಧಮಾಡಿ, ಪುಟ್ಟಿಯಲ್ಲಿಟ್ಟು ಅದರ ರಸವನ್ನು ಬಟ್ಟಲಿನಲ್ಲಿ ಹೊಯ್ದು, ಎಲ್ಲವನ್ನೂ ಏಲಾ ಮರದ ಕೆಳಗೆ ಆತನ ಮುಂದೆ ತಂದಿಟ್ಟನು.
TSK
TSK · ಆದಿಕಾಂಡ 18:6
مراجع Treasury of Scripture Knowledge في ಕನ್ನಡ IRV.
2 ಸಮುವೇಲನು 13:6
TSK
¶ ಅಮ್ನೋನನು ಅಸ್ವಸ್ಥನಾದವನಂತೆ ಮಲಗಿಕೊಂಡನು. ಅರಸನು ಅವನನ್ನು ನೋಡುವುದಕ್ಕೆ ಬಂದಾಗ ಅವನು ಅರಸನಿಗೆ, “ದಯವಿಟ್ಟು ನನ್ನ ತಂಗಿಯಾದ ತಾಮಾರಳನ್ನು ನನ್ನ ಬಳಿಗೆ ಕಳುಹಿಸು. ಆಕೆ ನನಗೋಸ್ಕರ ನನ್ನ ಕಣ್ಣ ಮುಂದೆಯೇ ಆಹಾರವನ್ನು ಸಿದ್ಧಮಾಡಿಕೊಡುವುದಾದರೆ ಊಟಮಾಡುವೆನು” ಎಂದು ಹೇಳಿದನು.
ಯೆಶಾಯ 32:8
TSK
ಘನವಂತನಾದರೋ ಘನಕಾರ್ಯಗಳನ್ನು ಕಲ್ಪಿಸುವನು. ಘನವಾದವುಗಳಲ್ಲಿಯೇ ನಿರತನಾಗಿರುವನು.
ಲೂಕನು 10:38
TSK
¶ ಅವರು ಸಂಚಾರಮಾಡುತ್ತಿರುವಾಗ ಆತನು ಒಂದು ಹಳ್ಳಿಗೆ ಬಂದನು. ಅಲ್ಲಿ ಮಾರ್ಥಳೆಂಬ ಒಬ್ಬ ಸ್ತ್ರೀಯು ಆತನನ್ನು ತನ್ನ ಮನೆಯಲ್ಲಿ ಉಳಿಸಿಕೊಂಡಳು.
ದೇವಜನರಿಗೆ ಕೊರತೆ ಬಂದಾಗ ಸಹಾಯ ಮಾಡಿರಿ. ಅತಿಥಿಸತ್ಕಾರವನ್ನು ಆಚರಿಸಿರಿ.
ಇಬ್ರಿಯರಿಗೆ 13:2
TSK
ಅತಿಥಿ ಸತ್ಕಾರಮಾಡುವುದನ್ನು ಅಲಕ್ಷ್ಯಮಾಡಬೇಡಿರಿ. ಏಕೆಂದರೆ ಅದನ್ನು ಮಾಡುವುದರಲ್ಲಿ ಕೆಲವರು ತಿಳಿಯದೆ ದೇವದೂತರನ್ನೂ ಸತ್ಕರಿಸಿದ್ದಾರೆ.