¶ ಅವರು ಮಲಗುವುದಕ್ಕಿಂತ ಮುಂಚೆ ಹುಡುಗರು ಮುದುಕರು ಸಹಿತವಾಗಿ ಸೊದೋಮಿನ ಪಟ್ಟಣದವರೆಲ್ಲರೂ ಒಗ್ಗಟ್ಟಾಗಿ ಮನೆಯನ್ನು ಮುತ್ತಿಗೆ ಹಾಕಿ,
TSK
TSK · ಆದಿಕಾಂಡ 19:7
مراجع Treasury of Scripture Knowledge في ಕನ್ನಡ IRV.
ಯಾವನಾದರೂ ಸ್ತ್ರೀಯನ್ನು ಸಂಗಮಿಸುವಂತೆ ಪುರುಷನನ್ನು ಸಂಗಮಿಸಿದರೆ ಅವರಿಬ್ಬರೂ ಅಸಹ್ಯವಾದ ಕೆಲಸವನ್ನು ಮಾಡಿದ್ದರಿಂದ ಅವರಿಗೆ ಮರಣಶಿಕ್ಷೆಯಾಗಬೇಕು; ಆ ಶಿಕ್ಷೆಗೆ ಅವರೇ ಕಾರಣರು.
¶ ಅದೇ ಸಮಯದಲ್ಲಿ ಎಬೆದನ ಮಗನಾದ ಗಾಳನೆಂಬುವನು ತನ್ನ ಬಂಧುಗಳೊಡನೆ ಶೆಕೆಮಿಗೆ ಬಂದನು. ಶೆಕೆಮಿನ ಹಿರಿಯರು ಅವನಲ್ಲಿ ಭರವಸವಿಟ್ಟರು.
ಆಗ ದಾವೀದನು ಅವರಿಗೆ, “ಸಹೋದರರೇ, ಯೆಹೋವನು ನಮ್ಮನ್ನು ಕಾಪಾಡಿ ನಮಗೆ ವಿರೋಧವಾಗಿ ಬಂದಿದ್ದ ಶತ್ರುಗಳ ಗುಂಪನ್ನು ನಮ್ಮ ಕೈಗೆ ಒಪ್ಪಿಸಿ ನಮಗೆ ಇಷ್ಟನ್ನೆಲ್ಲಾ ಕೊಟ್ಟ ಮೇಲೆ ನೀವು ಹೀಗೆ ಮಾಡಬಾರದು.
¶ ಆದಕಾರಣ ಅವರು ಮನಸ್ಸಿನ ದುರಾಶೆಗಳಂತೆ ನಡೆದು ತಮ್ಮ ತಮ್ಮ ದೇಹಗಳನ್ನು ತಮ್ಮೊಳಗೆ ಮಾನಹೀನಮಾಡಿಕೊಳ್ಳಲಿ ಎಂದು ದೇವರು ಅವರನ್ನು ಹೊಲಸಾದ ಕೆಟ್ಟ ನಡತೆಗಳಿಗೆ ಒಪ್ಪಿಸಿಬಿಟ್ಟನು.
ಸೊದೋಮ್ ಗೊಮೋರ ಪಟ್ಟಣಗಳವರೂ, ಅವುಗಳ ಸುತ್ತಮುತ್ತಲಿನ ಪಟ್ಟಣಗಳವರೂ ಆ ದೂತರಂತೆ ನಡೆದುಕೊಂಡು ತಮ್ಮನ್ನು ಜಾರತ್ವಕ್ಕೆ ಒಪ್ಪಿಸಿಬಿಟ್ಟು, ಅಸ್ವಾಭಾವಿಕವಾದ ಕಾರ್ಯಗಳನ್ನು ಅನುಸರಿಸಿದ್ದರಿಂದ ಅವರು ನಿತ್ಯವಾದ ಅಗ್ನಿಯಲ್ಲಿ ದಂಡನೆಯನ್ನು ಅನುಭವಿಸುತ್ತಾ, ದುರ್ಮಾರ್ಗಿಗಳಿಗೆ ಆಗುವ ದುರ್ಗತಿಗೆ ಉದಾಹರಣೆಯಾಗಿ ಇಡಲ್ಪಟ್ಟಿದ್ದಾರೆ.