TSK

TSK · ಆದಿಕಾಂಡ 2:23

مراجع Treasury of Scripture Knowledge في ಕನ್ನಡ IRV.

العودة إلى المقطع

“ನೀವು ದಯವಿಟ್ಟು ಶೆಕೆಮಿನ ಹಿರಿಯರನ್ನು ಮಾತನಾಡಿಸಿ, ‘ಯೆರುಬ್ಬಾಳನ ಎಪ್ಪತ್ತು ಮಂದಿ ಮಕ್ಕಳು ನಿಮ್ಮನ್ನು ಆಳ್ವಿಕೆ ಮಾಡುವುದು ಒಳ್ಳೆಯದೋ ಅಥವಾ ಒಬ್ಬನೇ ಆಳುವುದು ಮೇಲೋ?’ ಎಂದು ಅವರನ್ನು ಕೇಳಿ, ನಾನು ಅವರ ರಕ್ತಸಂಬಂಧಿಯಾಗಿದ್ದೇನೆ ಎಂಬುದನ್ನು ತಿಳಿಸಿರಿ” ಅಂದನು.

ಅಮಾಸನಿಗೆ, ‘ನೀನು ನನಗೆ ರಕ್ತಸಂಬಂಧಿಯಾಗಿದ್ದೀ. ನಾನು ಯೋವಾಬನ ಬದಲಿಗೆ ನಿನ್ನನ್ನೇ ನಿತ್ಯ ಸೇನಾಧಿಪತಿಯನ್ನಾಗಿ ಮಾಡದಿದ್ದರೆ ಯೆಹೋವನು ನನಗೆ ಬೇಕಾದದ್ದನ್ನು ಮಾಡಲಿ’ ಎಂಬುದಾಗಿಯೂ ತಿಳಿಸಿರಿ” ಎಂದು ಹೇಳಿ ಕಳುಹಿಸಿದನು.

ಹಾಗೆಯೇ ಗಂಡದಿರು ಸಹ ತಮ್ಮ ಸ್ವಂತ ಶರೀರವನ್ನು ಪ್ರೀತಿಸಿಕೊಳ್ಳುವ ಪ್ರಕಾರವೇ ತಮ್ಮ ಹೆಂಡತಿಯರನ್ನು ಪ್ರೀತಿಸುವ ಹಂಗಿನವರಾಗಿದ್ದಾರೆ. ತನ್ನ ಹೆಂಡತಿಯನ್ನು ಪ್ರೀತಿಸುವವನು ತನ್ನನ್ನೇ ಪ್ರೀತಿಸಿಕೊಳ್ಳುವವನಾಗಿದ್ದಾನೆ.