¶ ಕೂಡಲೆ ಅವರಿಬ್ಬರ ಕಣ್ಣುಗಳು ತೆರೆದವು. ತಾವು ಬೆತ್ತಲೆಯಾಗಿದ್ದೇವೆಂದು ತಿಳಿದು ಅಂಜೂರದ ಎಲೆಗಳನ್ನು ಜೋಡಿಸಿ ಉಟ್ಟುಕೊಂಡರು.
TSK
TSK · ಆದಿಕಾಂಡ 2:25
مراجع Treasury of Scripture Knowledge في ಕನ್ನಡ IRV.
¶ ಮೋಶೆಯು ಜನರು ಅಂಕೆ ತಪ್ಪಿ ತಮ್ಮ ಇಷ್ಟಬಂದಂತೆ ಮಾಡುವುದಕ್ಕೆ ಆರೋನನು ಅವರನ್ನು ಸಡಿಲವಾಗಿ ಬಿಟ್ಟಿದ್ದರಿಂದ ಅವನ ವಿರೋಧಿಗಳು ಅಪಹಾಸ್ಯಮಾಡುವುದಕ್ಕೆ ಆಸ್ಪದವಾಯಿತು,
ಯೆಹೋವನೇ, ಮೊರೆಯಿಟ್ಟಿದ್ದೇನೆ; ನನ್ನನ್ನು ನಿರಾಶೆಪಡಿಸಬೇಡ. ದುಷ್ಟರಿಗೇ ಆಶಾಭಂಗವಾಗಲಿ; ಅವರು ಸ್ತಬ್ಧರಾಗಿ ಪಾತಾಳಕ್ಕೆ ಬೀಳಲಿ.
ನಿನ್ನ ಬೆತ್ತಲೆತನವು ಬಯಲಿಗೆ ಬಂದು, ನೀನು ನಾಚಿಕೆಗೀಡಾಗುವಿ, ನಾನು ಯಾರನ್ನೂ ಕರುಣಿಸದೆ ಮುಯ್ಯಿತೀರಿಸುವೆನು.
ಅಸಹ್ಯಕಾರ್ಯಗಳನ್ನು ಮಾಡಿ ಅವಮಾನಕ್ಕೆ ಗುರಿಯಾದರೂ ಎಳ್ಳಷ್ಟೂ ನಾಚಿಕೆಪಡಲಿಲ್ಲ, ಲಜ್ಜೆಯ ಗಂಧವನ್ನೂ ತಿಳಿಯಲಿಲ್ಲ. ಆದಕಾರಣ ನಾನು ದಂಡಿಸುವ ಸಮಯದಲ್ಲಿ ಅವರು ಮುಗ್ಗರಿಸುವರು, ಬೀಳುವವರ ಸಂಗಡ ಬಿದ್ದೇ ಹೋಗುವರು” ಎಂದು ಯೆಹೋವನು ನುಡಿಯುತ್ತಾನೆ.
ಇದಕ್ಕನುಸಾರ ನಾನು ಕುಮಾರ್ತೆಯರನ್ನೋ ಎಂಬಂತೆ ನಿನಗೆ ದಯಪಾಲಿಸುವ ನಿನ್ನ ಅಕ್ಕಂದಿರೂ ಮತ್ತು ತಂಗಿಯರೂ ನಿನ್ನಲ್ಲಿ ಸೇರಿಕೊಳ್ಳುವಾಗ ನೀನು ನಿನ್ನ ದುರ್ಮಾರ್ಗಗಳನ್ನು ನೆನಪಿಸಿಕೊಂಡು ನಾಚಿಕೆಪಡುವಿ; ಈ ನನ್ನ ದಯೆ ನಿನ್ನ ಹಿಂದಿನ ಒಡಂಬಡಿಕೆಯ ಫಲವಲ್ಲ.
‹ವ್ಯಭಿಚಾರಿಣಿಯಂತಿರುವ ಈ ಪಾಪಿಷ್ಠ ಪೀಳಿಗೆಯವರಲ್ಲಿ ಯಾರು ನನ್ನನ್ನೂ, ನನ್ನ ಮಾತುಗಳನ್ನೂ ಕುರಿತು ನಾಚಿಕೆಪಡುವರೋ, ಅಂಥವರನ್ನು ಕುರಿತು ಮನುಷ್ಯಕುಮಾರನು, ತಾನು ತನ್ನ ತಂದೆಯ ಪ್ರಭಾವದೊಡನೆ ಪರಿಶುದ್ಧ ದೇವದೂತರ ಸಮೇತವಾಗಿ ಬರುವಾಗ, ನಾಚಿಕೆಪಡುವನು”› ಎಂದನು.
“ಆತನ ಮೇಲೆ ನಂಬಿಕೆಯಿಡುವ ಒಬ್ಬನಾದರೂ ಆಶಾಭಂಗಪಡುವುದಿಲ್ಲವೆಂದು” ಧರ್ಮಶಾಸ್ತ್ರವು ಹೇಳುತ್ತದೆ.