ಆದರೆ ತೋಟದ ಮಧ್ಯದಲ್ಲಿರುವ ಆ ಮರದ ಹಣ್ಣಿನ ವಿಷಯವಾಗಿ, ‘ನೀವು ಇದನ್ನು ತಿನ್ನಲೂ ಬಾರದು, ಮುಟ್ಟಲೂ ಕೂಡದು, ತಿಂದರೆ ಸಾಯುವಿರಿ’ ಎಂದು ದೇವರು ಹೇಳಿದ್ದಾನೆ” ಅಂದಳು.
TSK
TSK · ಆದಿಕಾಂಡ 2:9
مراجع Treasury of Scripture Knowledge في ಕನ್ನಡ IRV.
¶ ಯೆಹೋವ ದೇವರು “ಈ ಮನುಷ್ಯನು ಒಳ್ಳೆಯದರ ಮತ್ತು ಕೆಟ್ಟದ್ದರ ಬೇಧವನ್ನರಿತು ನಮ್ಮಲ್ಲಿ ಒಬ್ಬನಂತಾದನಲ್ಲಾ? ಇದರಿಂದ ಇವನು ಕೈಚಾಚಿ ಜೀವವೃಕ್ಷದ ಫಲವನ್ನು ಸಹ ತಿಂದು ಶಾಶ್ವತವಾಗಿ ಬದುಕುವವನಾಗಬಾರದು” ಎಂದು ಆಜ್ಞಾಪಿಸಿದನು.
ಜ್ಞಾನವು ತನ್ನನ್ನು ಹಿಡಿದುಕೊಳ್ಳುವವರಿಗೆ ಜೀವವೃಕ್ಷವಾಗಿದೆ. ಅದನ್ನು ಅವಲಂಬಿಸುವ ಪ್ರತಿಯೊಬ್ಬನೂ ಧನ್ಯನು.
ನಾನು ಕೊಚ್ಚಿಕೊಳ್ಳುವವರ ಶಕುನಗಳನ್ನು ನಿರರ್ಥಕಪಡಿಸಿ, ಕಣಿಹೇಳುವವರನ್ನು ಮರುಳುಗೊಳಿಸಿ, ಜ್ಞಾನಿಗಳನ್ನು ಹಿಂದಕ್ಕೆ ತಳ್ಳಿ ಅವರ ತಿಳಿವಳಿಕೆಯನ್ನು ಹುಚ್ಚುತನವಾಗ ಮಾಡುವೆನು.
ದೇವರ ಉದ್ಯಾನವನದಲ್ಲಿನ ದೇವದಾರುಗಳು ಅದನ್ನು ಮರೆಮಾಡಲಿಲ್ಲ; ತುರಾಯಿ ಮರಗಳು ಅದರ ಕೊಂಬೆಗಳಿಗೆ ಸಮವಾಗಲಿಲ್ಲ; ಆಲದ ಮರಗಳು ಅದರ ಕೊಂಬೆಗಳಷ್ಟು ದಪ್ಪವಾಗಿರಲಿಲ್ಲ; ದೇವರ ವನದಲ್ಲಿನ ಯಾವ ಮರವೂ ಅದರಷ್ಟು ರಮಣೀಯವಾಗಿರಲಿಲ್ಲ.
¶ “ಇಂಥಾ ವೈಭವದಿಂದಲೂ, ಮಹಿಮೆಯಿಂದಲೂ ಕೂಡಿದ ನೀನು ಏದೆನಿನ ವೃಕ್ಷಗಳಲ್ಲಿ ಯಾವುದಕ್ಕಿಂತ ಕಡಿಮೆಯಾಗಿರುವೆ? ಆದರೂ ನೀನು ಏದೆನಿನ ವೃಕ್ಷಗಳೊಂದಿಗೆ ಅಧೋಲೋಕಕ್ಕೆ ತಳ್ಳಲ್ಪಟ್ಟು, ಸುನ್ನತಿಹೀನರ ನಡುವೆ ಖಡ್ಗದಿಂದ ಹತರಾದವರ ಸಂಗಡ ಮಲಗುವಿ. ಫರೋಹನೂ, ಅವನ ಎಲ್ಲಾ ಪ್ರಜೆಗಳೂ ಇದೇ ಗತಿಯನ್ನು ಹೊಂದುವರು ಎಂಬುದು ಕರ್ತನಾದ ಯೆಹೋವನ ನುಡಿ.”
‹ನಾನೇ ಜೀವದ ರೊಟ್ಟಿ›
‹ದೇವರಾತ್ಮನು ಸಭೆಗಳಿಗೆ ಹೇಳುವುದನ್ನು›‹ಕಿವಿಯುಳ್ಳವನು ಕೇಳಲಿ.›‹ಯಾವನು ಜಯಹೊಂದುತ್ತಾನೋ ಅವನಿಗೆ›‹ದೇವರ ಪರದೈಸಿನಲ್ಲಿರುವ›‹ಜೀವದಾಯಕ ವೃಕ್ಷದ ಹಣ್ಣನ್ನು ತಿನ್ನುವುದಕ್ಕೆ ಅನುಮತಿ ಕೊಡುವೆನು.›
¶ ‹“ತಮ್ಮ ನಿಲುವಂಗಿಗಳನ್ನು ತೊಳೆದುಕೊಂಡು ಶುದ್ಧರಾಗಿರುವವರು ಧನ್ಯರು. ಅವರಿಗೆ›‹ಜೀವವೃಕ್ಷದ ಹಕ್ಕು ಇರುವುದು.›‹ಅವರು ಬಾಗಿಲುಗಳ ಮೂಲಕ ಆ ಪಟ್ಟಣದೊಳಗೆ ಬಂದು ಸೇರುವರು.›