TSK

TSK · ಆದಿಕಾಂಡ 20:1

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಕಾನಾನ್ಯರ ಸೀಮೆಯು ಸೀದೋನ್ ಪಟ್ಟಣದಿಂದ ಗೆರಾರಿಗೆ ಹೋಗುವ ದಾರಿಯಲ್ಲಿರುವ ಗಾಜಾ ಪಟ್ಟಣದ ವರೆಗೂ ಮತ್ತು ಸೊದೋಮ್, ಗೊಮೋರ, ಅದ್ಮಾ, ಚೆಬೋಯಿಮ್ ಎಂಬ ಪಟ್ಟಣಗಳಿಗೆ ಹೋಗುವ ದಾರಿಯಲ್ಲಿರುವ ಲೆಷಾ ಊರಿನವರೆಗೂ ಇರುತ್ತದೆ.

¶ ಹೀಗೆ ಅಬ್ರಾಮನು ತನ್ನದನ್ನೆಲ್ಲಾ ತೆಗೆದುಕೊಂಡು ಹೆಂಡತಿಯನ್ನೂ, ಲೋಟನನ್ನೂ ಸಂಗಡ ಕರೆದುಕೊಂಡು ಐಗುಪ್ತದೇಶವನ್ನು ಬಿಟ್ಟು ಕಾನಾನ್ ದೇಶದ ದಕ್ಷಿಣ ಪ್ರಾಂತ್ಯಕ್ಕೆ ಬಂದನು.

¶ ಅಬ್ರಾಮನ ಹೆಂಡತಿಯಾದ ಸಾರಯಳಿಗೆ ಮಕ್ಕಳಿರಲಿಲ್ಲ. ಆಕೆಗೆ ಐಗುಪ್ತ ದೇಶದವಳಾದ ಹಾಗರಳೆಂಬ ದಾಸಿಯಿದ್ದಳು.

ಈ ಸಂಗತಿಯಿಂದ ಅಲ್ಲಿರುವ ಬಾವಿಗೆ “ಬೆರ್ ಲಹೈರೋಯಿ” ಎಂದು ಹೆಸರಾಯಿತು. ಅದು ಕಾದೇಶಿಗೂ ಬೆರೆದಿಗೂ ಮಧ್ಯದಲ್ಲಿ ಇದೆ.

ಅಬ್ರಹಾಮನು ಫಿಲಿಷ್ಟಿಯರ ದೇಶದಲ್ಲಿ ಬಹಳ ದಿನಗಳ ಕಾಲ ವಾಸವಾಗಿದ್ದನು.

¶ ಅಬ್ರಹಾಮನ ಕಾಲದಲ್ಲಿ ಬಂದ ಮೊದಲನೆಯ ಬರಗಾಲವಲ್ಲದೆ ಇನ್ನೊಂದು ಬರಗಾಲವು ಕಾನಾನ್ ದೇಶಕ್ಕೆ ಬಂದಿತು. ಆಗ ಇಸಾಕನು ಫಿಲಿಷ್ಟಿಯರ ಅರಸನಾದ ಅಬೀಮೆಲೆಕನ ಬಳಿಗೆ ಗೆರಾರಿಗೆ ಹೋದನು.

ಗೆರಾರಿನ ದನ ಕಾಯುವವರು ಬಂದು ಆ ನೀರು ತಮ್ಮದು ಎಂದು ಹೇಳಿ ಇಸಾಕನ ದನ ಕಾಯುವವರ ಸಂಗಡ ಜಗಳವಾಡಿದ್ದರಿಂದ ಇಸಾಕನು ಆ ಬಾವಿಗೆ “ಏಸೆಕ್” ಎಂದು ಹೆಸರಿಟ್ಟನು.

ಆ ಮೇಲೆ ಪಾರಾನ್ ಅರಣ್ಯದಲ್ಲಿದ್ದ ಮೋಶೆ, ಆರೋನರು ಮತ್ತು ಇಸ್ರಾಯೇಲರ ಸರ್ವಸಮೂಹದವರ ಬಳಿಗೆ ಕಾದೇಶಿಗೆ ಬಂದು ಅವರಿಗೆ ಸಮಾಚಾರವನ್ನು ತಿಳಿಸಿ ಆ ದೇಶದ ಹಣ್ಣುಗಳನ್ನು ತೋರಿಸಿದರು.

¶ ನಾವು ಹೋರೇಬಿನಿಂದ ಹೊರಟು ನಮ್ಮ ದೇವರಾದ ಯೆಹೋವನು ಆಜ್ಞಾಪಿಸಿದಂತೆ ಅಮೋರಿಯರ ಬೆಟ್ಟದ ಸೀಮೆಯ ಮಾರ್ಗವನ್ನು ಹಿಡಿದು ನೀವು ನೋಡಿದ ಆ ಘೋರವಾದ ಮಹಾ ಅರಣ್ಯದಲ್ಲಿ ನಡೆದು ಕಾದೇಶ್‌ಬರ್ನೇಯಕ್ಕೆ ಸೇರಿದೆವು.

ಆಗ ಸೌಲನು ಅಮಾಲೇಕ್ಯರನ್ನು ಹವೀಲಾ ಪ್ರಾಂತ್ಯದಿಂದ ಐಗುಪ್ತದ ಪೂರ್ವದಿಕ್ಕಿನಲ್ಲಿರುವ ಶೂರಿನವರೆಗೆ ಅವರನ್ನು ಸಂಹರಿಸುತ್ತಾ ಹೋದನು.

ಯೆಹೋವನ ಗರ್ಜನೆಗೆ ಕಾಡು ಹೊರಳಾಡುತ್ತದೆ; ಕಾದೇಶ್ ಅರಣ್ಯವು ಕಂಪಿಸುತ್ತದೆ.