TSK

TSK · ಆದಿಕಾಂಡ 20:17

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಆದರೆ ಯೆಹೋವನು ಫರೋಹನಿಗೂ ಅವನ ಮನೆಯವರಿಗೂ ಅಬ್ರಾಮನ ಹೆಂಡತಿಯಾದ ಸಾರಯಳ ನಿಮಿತ್ತ ಬಹಳ ಉಪದ್ರವಗಳಿಂದ ಬಾಧಿಸಿದನು.

¶ ಲೇಯಳು ಯಾಕೋಬನಿಗೆ ಅಲಕ್ಷ್ಯವಾಗಿದ್ದಾಳೆಂಬುದನ್ನು ಯೆಹೋವನು ನೋಡಿ, ಆಕೆಯು ಗರ್ಭಧರಿಸುವಂತೆ ಅನುಗ್ರಹಿಸಿದನು; ಆದರೆ ರಾಹೇಲಳು ಬಂಜೆಯಾಗಿದ್ದಳು.

ಅವರಾದರೋ ಪರಲೋಕದೇವರಿಗೆ ಸುಗಂಧಹೋಮಗಳನ್ನು ಸಮರ್ಪಿಸಿ, ರಾಜನ ಮತ್ತು ರಾಜಪುತ್ರರ ದೀರ್ಘಾಯಷ್ಯಕ್ಕಾಗಿ ಪ್ರಾರ್ಥನೆಮಾಡಲಿ.

ಆದರೂ ಇಸ್ರಾಯೇಲರ ಸದಮಲಸ್ವಾಮಿಯೂ, ಸೃಷ್ಟಿಕರ್ತನೂ ಆದ ಯೆಹೋವನ ಮಾತನ್ನು ಕೇಳಿರಿ, ‘ಭವಿಷ್ಯತ್ತಿನ ವಿಷಯವಾಗಿ ನನ್ನನ್ನು ವಿಚಾರಿಸಿರಿ. ನಾನೇ ನಿರ್ಮಿಸಿದ ನನ್ನ ಮಕ್ಕಳ ವಿಷಯದಲ್ಲಿ ನನಗೆ ಏನನ್ನು ವಿಧಿಸಿದರೂ ವಿಧಿಸಿರಿ.

‹ನೀವು ನಂಬಿಕೊಂಡು ಪ್ರಾರ್ಥನೆಯಲ್ಲಿ ಏನೇನು ಬೇಡಿಕೊಳ್ಳುವಿರೋ ಅದನ್ನೆಲ್ಲಾ ಹೊಂದುವಿರಿ”› ಅಂದನು.

ಯಾವ ಸಂಬಂಧವಾಗಿಯೂ ಚಿಂತೆಮಾಡದೆ ಸರ್ವವಿಷಯಗಳಲ್ಲಿ ದೇವರ ಮುಂದೆ ಕೃತಜ್ಞತಾಸ್ತುತಿಯನ್ನೂ ಪ್ರಾರ್ಥನೆ ವಿಜ್ಞಾಪನೆಗಳನ್ನೂ ಮಾಡುತ್ತಾ ನಿಮಗೆ ಬೇಕಾದದ್ದನ್ನು ಕರ್ತನಿಗೆ ತಿಳಿಯಪಡಿಸಿರಿ.

ಹೀಗಿರಲು ನೀವು ಸ್ವಸ್ಥವಾಗಬೇಕಾದರೆ ನಿಮ್ಮ ಪಾಪಗಳನ್ನು ಒಬ್ಬರಿಗೊಬ್ಬರು ಅರಿಕೆ ಮಾಡಿ,, ಒಬ್ಬರಿಗೋಸ್ಕರ ಒಬ್ಬರು ಪ್ರಾರ್ಥಿಸಿರಿ. ನೀತಿವಂತನ ಅತ್ಯಾಸಕ್ತಿಯುಳ್ಳ ಪ್ರಾರ್ಥನೆಯು ಬಹು ಸಾಮರ್ಥ್ಯವುಳ್ಳದಾಗಿರುತ್ತದೆ.