¶ ತರುವಾಯ ಅಬ್ರಹಾಮನು ದೇವರನ್ನು ಬೇಡಿಕೊಳ್ಳಲು ದೇವರು ಅಬೀಮೆಲೆಕನನ್ನೂ, ಅವನ ಪತ್ನಿಯನ್ನೂ ಮತ್ತು ದಾಸಿಯರನ್ನೂ ವಾಸಿಮಾಡಿದ್ದರಿಂದ ಅವರಿಗೆ ಮಕ್ಕಳಾದರು.
TSK
TSK · ಆದಿಕಾಂಡ 21:22
مراجع Treasury of Scripture Knowledge في ಕನ್ನಡ IRV.
“ಯೆಹೋವನು ನಿನ್ನ ಸಂಗಡ ಇದ್ದಾನೆ ಎಂದು ನಮಗೆ ಸ್ಪಷ್ಟವಾಗಿ ಕಂಡು ಬಂದುದರಿಂದ ನೀನೂ, ನಾವೂ ಒಬ್ಬರಿಗೊಬ್ಬರು ಪ್ರಮಾಣಪೂರ್ವಕವಾಗಿ ಒಡಂಬಡಿಕೆ ಮಾಡಿಕೊಳ್ಳೋಣವೆಂದು ಆಲೋಚಿಸಿದೆವು.
ನಾನು ನಿನಗೆ ಮಾಡಿದ ಸೇವೆಯನ್ನು ನೀನು ಬಲ್ಲವನಾಗಿರುವೆ” ಎಂದು ಹೇಳಲು ಲಾಬಾನನು ಅವನಿಗೆ, “ನನ್ನ ಮೇಲೆ ದಯೆ ಇಟ್ಟು ನನ್ನ ಬಳಿಯಲ್ಲೇ ಇರು. ಯೆಹೋವನು ನಿನ್ನ ನಿಮಿತ್ತ ನನ್ನನ್ನು ಅಭಿವೃದ್ಧಿಪಡಿಸಿದ್ದಾನೆಂದು ಚೆನ್ನಾಗಿ ತಿಳಿದುಕೊಂಡಿದ್ದೇನೆ.
ಯೆಹೋವನು ಯೋಸೇಫನ ಸಂಡಗವಿದ್ದು ಅವನು ಮಾಡುವ ಕೆಲಸವನ್ನೆಲ್ಲಾ ಸಫಲವಾಗುವಂತೆ ಮಾಡುತ್ತಾನೆಂದು ಅವನ ದಣಿಯು ತಿಳಿದನು.
ಅನಂತರ ಸೌಲನು ತನ್ನ ಮನೆಗೆ ಹೊರಟನು. ದಾವೀದನು ತನ್ನ ಜನರೊಡನೆ ಆಶ್ರಯಗಿರಿಗೆ ಹೋದನು.
ಆಲೋಚನೆ ಮಾಡಿಕೊಳ್ಳಿರಿ, ಅದು ಮುರಿದುಹೋಗುವುದು. ಅಪ್ಪಣೆ ಮಾಡಿರಿ, ಅದು ನಿಲ್ಲುವುದಿಲ್ಲ. ಏಕೆಂದರೆ ದೇವರು ನಮ್ಮ ಕೂಡ ಇದ್ದಾನಷ್ಟೆ.
¶ ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಆ ಕಾಲದಲ್ಲಿ ಜನಾಂಗಗಳ ವಿವಿಧ ಭಾಷೆಗಳವರಾದ ಹತ್ತು ಜನರು ಯೆಹೂದ್ಯನೊಬ್ಬನ ಸೆರಗನ್ನು ಹಿಡಿದುಕೊಂಡು, ‘ನಾವು ನಿಮ್ಮೊಂದಿಗೆ ಬರುವೆವು, ಏಕೆಂದರೆ ದೇವರು ನಿಮ್ಮ ಸಂಗಡ ಇದ್ದಾನೆಂಬ ಸುದ್ದಿಯು ನಮ್ಮ ಕಿವಿಗೆ ಬಿದ್ದಿದೆ’” ಎಂದು ಹೇಳುವರು.
¶ ಹಾಗಾದರೆ ಈ ವಿಷಯಗಳಲ್ಲಿ ನಾವು ಏನು ಹೇಳೋಣ? ದೇವರು ನಮ್ಮ ಜೊತೆಯಲ್ಲಿ ಇದ್ದರೆ ನಮ್ಮನ್ನು ಎದುರಿಸುವವರು ಯಾರು?
ಹಣದಾಸೆಯಿಂದ ದೂರವಿರಿ. ನಿಮಗಿರುವವುಗಳಲ್ಲಿ ತೃಪ್ತರಾಗಿರಿ. “ನಾನು ನಿಮ್ಮನ್ನು ಎಂದಿಗೂ ಕೈಬಿಡುವುದಿಲ್ಲ, ಎಂದಿಗೂ ತೊರೆಯುವುದಿಲ್ಲ” ಎಂದು ದೇವರು ತಾನೇ ಹೇಳಿದ್ದಾನೆ.