TSK

TSK · ಆದಿಕಾಂಡ 21:31

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಇಸಾಕನು ಅಲ್ಲಿಂದ ಹೊರಟು ಗಟ್ಟಾ ಹತ್ತಿ ಬೇರ್ಷೆಬಕ್ಕೆ ಬಂದನು.

¶ ಇಸ್ರಾಯೇಲನು ತನಗಿದ್ದ ಸರ್ವಸ್ವವನ್ನು ತೆಗೆದುಕೊಂಡು, ಪ್ರಯಾಣ ಮಾಡಿ ಬೇರ್ಷೆಬಕ್ಕೆ ಬಂದು ತನ್ನ ತಂದೆಯಾದ ಇಸಾಕನ ದೇವರಿಗೆ ಯಜ್ಞಗಳನ್ನು ಅರ್ಪಿಸಿದನು.

¶ ದಾನ್ ಪಟ್ಟಣದಿಂದ ಬೇರ್ಷೆಬದವರೆಗಿರುವ ಪ್ರಾಂತ್ಯಗಳಲ್ಲಿಯೂ, ಗಿಲ್ಯಾದಿನಲ್ಲಿಯೂ ಇರುವ ಇಸ್ರಾಯೇಲರೆಲ್ಲರೂ ಏಕಮನಸ್ಸಿನಿಂದ ಹೊರಟು ಮಿಚ್ಪೆಗೆ ಬಂದು ಯೆಹೋವನ ಸನ್ನಿಧಿಯಲ್ಲಿ ಸಭೆ ಸೇರಿದರು.

ಅಲ್ಲಿಂದ ಚೀದೋನ್ ತೂರ್ ಕೋಟೆ, ಹಿವ್ವಿಯರ ಮತ್ತು ಕಾನಾನ್ಯರ ಪಟ್ಟಣಗಳು, ಇವುಗಳ ಮೇಲೆ ಯೆಹೂದ ಪ್ರಾಂತ್ಯದ ದಕ್ಷಿಣದಿಕ್ಕಿನಲ್ಲಿರುವ ಬೇರ್ಷೆಬಕ್ಕೆ ಬಂದರು.

ಅವನು ಇದನ್ನು ಕೇಳಿದೊಡನೆ ತನ್ನ ಪ್ರಾಣ ರಕ್ಷಣೆಗಾಗಿ ಅಲ್ಲಿಂದ ಹೊರಟು ಯೆಹೂದದ ಬೇರ್ಷೆಬಕ್ಕೆ ಬಂದು ಅಲ್ಲಿ ತನ್ನ ಸೇವಕನನ್ನು ಬಿಟ್ಟನು.