ಹೀಗಿರಲಾಗಿ ಸಾರಳು, “ನನ್ನಂಥ ಮುದುಕಿಗೆ ಭೋಗವಾದೀತೇ?” ನನ್ನ ಯಜಮಾನನೂ ಮುದುಕನಲ್ಲವೇ ಎಂದು ತನ್ನೊಳಗೆ ನಕ್ಕಳು.
TSK
TSK · ಆದಿಕಾಂಡ 21:6
مراجع Treasury of Scripture Knowledge في ಕನ್ನಡ IRV.
ಬಂಜೆಯು ಮಕ್ಕಳೊಂದಿಗೆ, ಸಂತೋಷದಿಂದ ಮನೆಯಲ್ಲಿ ವಾಸಿಸುವ ಹಾಗೆ ಮಾಡುತ್ತಾನೆ. ಯೆಹೋವನಿಗೆ ಸ್ತೋತ್ರ!
ಒಬ್ಬ ಹೆಂಗಸು ತಾನು ಹೆತ್ತ ಮಗುವಿನ ಮೇಲೆ ಕರುಣೆಯಿಡದೆ ತನ್ನ ಮೊಲೆಕೂಸನ್ನು ಮರೆತಾಳೇ? ಒಂದು ವೇಳೆ ಮರೆತರು ಮರೆತಾಳು, ಆದರೆ ನಾನು ನಿನ್ನನ್ನು ಮರೆಯುವುದಿಲ್ಲ.
“ಹೆರದವಳೇ, ಬಂಜೆಯೇ, ಹರ್ಷಧ್ವನಿಗೈ! ಪ್ರಸವ ವೇದನೆಯನ್ನು ಅನುಭವಿಸದವಳೇ, ಆನಂದ ಸ್ವರವೆತ್ತಿ ಕೂಗು! ಗಂಡನುಳ್ಳವಳಿಗಿಂತ ಗಂಡಬಿಟ್ಟವಳಿಗೆ ಮಕ್ಕಳು ಹೆಚ್ಚು” ಎಂದು ಯೆಹೋವನು ಹೇಳುತ್ತಾನೆ.
¶ ಆಗ ಮರಿಯಳು, “ನನ್ನ ಪ್ರಾಣವು ಕರ್ತನನ್ನು ಕೊಂಡಾಡುತ್ತದೆ,
‹ಒಬ್ಬ ಸ್ತ್ರೀ ಹೆರುವಾಗ ತನ್ನ ಬೇನೆಯ ಕಾಲವು ಬಂದಿತೆಂದು ತಿಳಿದು ಆಕೆಗೆ ದುಃಖವಾಗುತ್ತದೆ, ಆದರೆ ಆಕೆಯು ಕೂಸನ್ನು ಹೆತ್ತ ಮೇಲೆ, ಲೋಕದಲ್ಲಿ ಒಂದು ಮಗು ಹುಟ್ಟಿತೆಂದು ಆನಂದದಿಂದ ಆ ವೇದನೆಯನ್ನು ಪುನಃ ನೆನಸಿಕೊಳ್ಳುವುದಿಲ್ಲ.›
“ಹೆರದ ಬಂಜೆಯೇ, ಆನಂದಿಸು. ಪ್ರಸವವೇದನೆಯಿಲ್ಲದವಳೇ, ಹರ್ಷೋದ್ಗಾರಮಾಡು, ಗಂಡನುಳ್ಳವಳಿಗಿಂತ ಗಂಡಬಿಟ್ಟವಳಿಗೆ ಮಕ್ಕಳು ಹೆಚ್ಚು” ಎಂದು ಬರೆದಿದೆಯಲ್ಲಾ.