ಅಬ್ರಹಾಮನು, “ಮಗನೇ, ಹೋಮಕ್ಕೆ ಬೇಕಾದ ಕುರಿಮರಿಯನ್ನು ದೇವರೇ ಒದಗಿಸುವನು” ಎಂದನು.
TSK
TSK · ಆದಿಕಾಂಡ 22:14
مراجع Treasury of Scripture Knowledge في ಕನ್ನಡ IRV.
ಇದಲ್ಲದೆ ಅವನು ಆ ಸ್ಥಳಕ್ಕೆ “ಬೇತೇಲ್” ಎಂದು ಹೆಸರಿಟ್ಟನು. ಅದಕ್ಕಿಂತ ಮೊದಲು ಆ ಪಟ್ಟಣಕ್ಕೆ “ಲೂಜ್” ಎಂದು ಹೆಸರಿತ್ತು.
¶ ಆ ಸ್ಥಳದಲ್ಲಿ ಮೋಶೆಯು ಯಜ್ಞವೇದಿಯನ್ನು ಕಟ್ಟಿಸಿ ಅದಕ್ಕೆ “ಯೆಹೋವ ನಿಸ್ಸಿ” ಎಂದು ಹೆಸರಿಟ್ಟನು.
ಗಿದ್ಯೋನನು ಅಲ್ಲಿ ಯೆಹೋವನಿಗೋಸ್ಕರ ಒಂದು ಯಜ್ಞವೇದಿಯನ್ನು ಕಟ್ಟಿ ಅದಕ್ಕೆ ಯೆಹೋವ ಷಾಲೋಮ್ ಎಂದು ಹೆಸರಿಟ್ಟನು; ಅದು ಈ ವರೆಗೂ ಅಬೀಯೆಜೆರನ ಗೋತ್ರದವರ ಒಫ್ರದಲ್ಲಿರುತ್ತದೆ.
ಆದುದ್ದರಿಂದ ನೀನೂ, ನಿನ್ನ ಸಂಗಡ ಬಂದ ನಿನ್ನ ಒಡೆಯನ ಸೇವಕರೂ, ನಾಳೆ ಬೆಳಿಗ್ಗೆ ಎದ್ದು ಹೊತ್ತು ಮೂಡಿದ ಕೂಡಲೆ ಹಿಂದಿರುಗಿ ಹೋಗಿರಿ” ಎಂದು ಹೇಳಿದನು.
ನಮ್ಮ ಪೂರ್ವಿಕರು ನಿನ್ನಲ್ಲಿ ಭರವಸವಿಟ್ಟರು; ನಿನ್ನನ್ನು ನಂಬಿ ಉದ್ಧಾರವಾದರು.
‘ಅರಸನೇ, ನಾವು ಆರಾಧಿಸುವ ದೇವರಿಗೆ ಚಿತ್ತವಿದ್ದರೆ ಆತನು ಧಗಧಗನೆ ಉರಿಯುವ ಬೆಂಕಿಯೊಳಗಿಂದ ನಮ್ಮನ್ನು ಬಿಡಿಸಬಲ್ಲನು; ಹೇಗೂ ನಿನ್ನ ಕೈಯಿಂದ ನಮ್ಮನ್ನು ಬಿಡಿಸುವನು.
¶ ಆ ವಾಕ್ಯವೆಂಬುವವನು ಮನುಷ್ಯನಾಗಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. ನಾವು ಆತನ ಮಹಿಮೆಯನ್ನು ನೋಡಿದೆವು. ಆ ಮಹಿಮೆಯು ತಂದೆಯ ಬಳಿಯಿಂದ ಬಂದ ಒಬ್ಬನೇ ಮಗನಿಗೆ ಇರತಕ್ಕ ಮಹಿಮೆ. ಆತನು ಕೃಪೆಯಿಂದಲೂ, ಸತ್ಯದಿಂದಲೂ ತುಂಬಿದವನಾಗಿದ್ದನು.
¶ ದೇವಭಕ್ತಿಗೆ ಆಧಾರವಾಗಿರುವ ಸತ್ಯಾರ್ಥದ ರಹಸ್ಯವು ಗಂಭೀರವಾದದ್ದೆಂಬುದನ್ನು ನಾವೆಲ್ಲರೂ ಒಪ್ಪಿಕೊಳ್ಳುತ್ತೇವೆ, ಅದೇನಂದರೆ, ಕ್ರಿಸ್ತನು ಶರೀರಧಾರಿಯಾಗಿ ಪ್ರತ್ಯಕ್ಷನಾದನು, ಆತ್ಮಸಂಬಂಧವಾಗಿ ಕ್ರಿಸ್ತನೇ ನೀತಿವಂತನೆಂದು ಪರಿಗಣಿಸಲ್ಪಟ್ಟನು, ದೇವದೂತರಿಗೆ ಕಾಣಿಸಿಕೊಂಡನು, ಅನ್ಯಜನರ ಮಧ್ಯದಲ್ಲಿ ಸಾರಲ್ಪಟ್ಟನು, ಲೋಕದಲ್ಲಿ ನಂಬಲ್ಪಟ್ಟನು, ಮಹಿಮೆಯೊಂದಿಗೆ ಪರಲೋಕಕ್ಕೆ ಎತ್ತಲ್ಪಟ್ಟನು.