ನಿನ್ನ ಸಂತಾನದವರನ್ನು ಭೂಮಿಯ ಧೂಳಿನಷ್ಟು ಅಸಂಖ್ಯವಾಗಿ ಮಾಡುವೆನು. ಭೂಮಿಯಲ್ಲಿರುವ ಧೂಳನ್ನು ಲೆಕ್ಕಮಾಡುವುದಾದರೆ ನಿನ್ನ ಸಂತಾನವನ್ನೂ ಲೆಕ್ಕಿಸಬಹುದು.
TSK
TSK · ಆದಿಕಾಂಡ 22:17
مراجع Treasury of Scripture Knowledge في ಕನ್ನಡ IRV.
ನಿನಗೆ ಅತ್ಯಧಿಕವಾದ ಸಂತಾನವನ್ನು ಕೊಡುವೆನು ನಿನ್ನಿಂದ ಜನಾಂಗಗಳು ಉತ್ಪತ್ತಿಯಾಗಿ ಅರಸರು ಹುಟ್ಟುವರು.
ನಿನ್ನ ಸಂತತಿಯವರನ್ನು ಆಕಾಶದಲ್ಲಿರುವ ನಕ್ಷತ್ರಗಳಂತೆ ಹೆಚ್ಚಿಸುವೆನು. ನಿನ್ನ ಸಂತತಿಗೆ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ನಿನ್ನ ಸಂತತಿಯ ಮೂಲಕ ಭೂಮಿಯ ಎಲ್ಲಾ ಜನಾಂಗಗಳಿಗೂ ಆಶೀರ್ವಾದವುಂಟಾಗುವುದು.
ಜನಗಳು ನಿನ್ನನ್ನು ಆರಾಧಿಸಲಿ, ಜನಾಂಗಗಳು ನಿನಗೆ ಅಧೀನವಾಗಲಿ. ನಿನ್ನ ಅಣ್ಣತಮ್ಮಂದಿರಿಗೆ ನೀನು ದೊರೆಯಾಗಿರು, ನಿನ್ನ ತಾಯಿಯ ಮಕ್ಕಳು ನಿನಗೆ ಅಡ್ಡಬೀಳಲಿ. ನಿನ್ನನ್ನು ಶಪಿಸುವವರಿಗೆ ಶಾಪವೂ, ನಿನ್ನನ್ನು ಆಶೀರ್ವದಿಸುವವರಿಗೆ ಆಶೀರ್ವಾದವೂ ಉಂಟಾಗಲಿ” ಎಂದನು.
ನಿನ್ನ ಸಂತತಿಯು ಭೂಮಿಯ ಧೂಳಿನಷ್ಟು ಅಸಂಖ್ಯವಾಗುವುದು. ನೀನು ಪೂರ್ವ, ಪಶ್ಚಿಮ, ದಕ್ಷಿಣ ಉತ್ತರ ದಿಕ್ಕುಗಳಿಗೆ ಹರಡಿಕೊಳ್ಳುವಿ. ನಿನ್ನಿಂದಲೂ, ನಿನ್ನ ಸಂತತಿಯಿಂದಲೂ, ಭೂಮಿಯ ಎಲ್ಲಾ ಕುಲದವರು ಆಶೀರ್ವಾದ ಹೊಂದುವರು.
¶ ಯಾಕೋಬನು ಆ ರಾತ್ರಿ ಅಲ್ಲೇ ತಂಗಿದನು. ತಾನು ತಂದದ್ದರಲ್ಲಿ ಕೆಲವನ್ನು ಸಹೋದರನಾದ ಏಸಾವನಿಗೆ ಕಾಣಿಕೆಯಾಗಿ ತೆಗೆದುಕೊಂಡನು.
ನಿನ್ನ ಸೇವಕರಾದ ಅಬ್ರಹಾಮ್, ಇಸಾಕ್ ಹಾಗು ಯಾಕೋಬರನ್ನು ನೆನಪಿಗೆ ತಂದುಕೋ. ನೀನು ನಿನ್ನ ಜೀವದಾಣೆ ಪ್ರಮಾಣ ಮಾಡಿ ಅವರಿಗೆ, ‘ನಾನು ನಿಮ್ಮ ಸಂತತಿಯನ್ನು ಹೆಚ್ಚಿಸಿ ಆಕಾಶದ ನಕ್ಷತ್ರಗಳಷ್ಟು ಅಸಂಖ್ಯವಾಗಿ ಈ ಪ್ರದೇಶವನ್ನೆಲ್ಲಾ ನಿಮ್ಮ ಸಂತತಿಯವರಿಗೆ ಕೊಡುವೆನೆಂದೂ ಇಸ್ರಾಯೇಲರು ಈ ದೇಶವನ್ನು ಶಾಶ್ವತವಾಗಿ ಸ್ವಾಧೀನ ಮಾಡಿಕೊಳ್ಳುವರೆಂದೂ ಮಾತುಕೊಡಲಿಲ್ಲವೇ’” ಅಂದನು.
ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಅಧಿಕ ಸಂಖ್ಯೆಯಲ್ಲಿ ಹೆಚ್ಚಿಸಿದ್ದರಿಂದ ನೀವು ಈಗ ಆಕಾಶದ ನಕ್ಷತ್ರಗಳಷ್ಟು ಅಸಂಖ್ಯರಾಗಿದ್ದೀರಿ.
ನೀವು ಹೀಗೆ ನಡೆದು ನಿಮ್ಮ ದೇವರಾದ ಯೆಹೋವನ ಮಾತಿಗೆ ಕಿವಿಗೊಟ್ಟರೆ, ಆಗ ಆತನು ತನ್ನ ರೋಷಾಗ್ನಿಯನ್ನು ಬಿಟ್ಟು ನಿಮಗೆ ದಯೆಯನ್ನು ತೋರಿಸಿ, ನಿಮ್ಮನ್ನು ಕರುಣಿಸಿ, ತಾನು ನಿಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿದಂತೆ ನಿಮ್ಮ ಸಂತತಿಯನ್ನು ಹೆಚ್ಚಿಸುವನು.
ನಿಮ್ಮ ದೇವರಾದ ಯೆಹೋವನ ಮಾತಿಗೆ ಕಿವಿಗೊಟ್ಟು ನಡೆದರೆ ಈ ಶುಭಗಳೆಲ್ಲಾ ನಿಮಗೆ ಪ್ರಾಪ್ತವಾಗುವವು. ಅವು ಯಾವುವೆಂದರೆ:
¶ ಅನಂತರ ದಾವೀದನು ಹೋಗಿ ಫಿಲಿಷ್ಟಿಯರ ಮೇಲೆ ಮುತ್ತಿಗೆ ಹಾಕಿ, ಅವರನ್ನು ಸೋಲಿಸಿ, ಅವರ ರಾಜಧಾನಿಯನ್ನು ವಶಪಡಿಸಿಕೊಂಡು, ಆಡಳಿತವನ್ನು ತನ್ನ ಸ್ವಾಧೀನದಲ್ಲಿಟ್ಟುಕೊಂಡನು.
ಹೀಗಿರುವುದರಿಂದ ನನ್ನ ಆಲೋಚನೆಯನ್ನು ಕೇಳು. ದಾನಿನಿಂದ ಬೇರ್ಷೆಬದ ವರೆಗೆ ವಾಸವಾಗಿರುವ ಇಸ್ರಾಯೇಲರೊಳಗಿನಿಂದ ಸಮುದ್ರದ ಮರಳಿನಷ್ಟು ಅಸಂಖ್ಯವಾದ ಸೈನ್ಯವನ್ನು ಕೂಡಿಸಿ, ನೀನೂ ಅವರ ಜೊತೆಯಲ್ಲಿ ಯುದ್ಧಕ್ಕೆ ಹೋಗಬೇಕು.
¶ ಇದಲ್ಲದೆ ಅರಸನಾದ ಸೊಲೊಮೋನನು ಎದೋಮ್ ದೇಶದಲ್ಲಿ ಏಲೋತಿನ ಹತ್ತಿರ ಕೆಂಪುಸಮುದ್ರದ ತೀರದಲ್ಲಿರುವ ಎಚ್ಯೋನ್ಗೆಬೆರಿನಲ್ಲಿ ಹಡಗುಗಳನ್ನು ಕಟ್ಟಿಸಿದನು.
ಅವರ ಮಕ್ಕಳನ್ನು ಆಕಾಶದ ನಕ್ಷತ್ರಗಳಂತೆ ಹೆಚ್ಚಿಸಿ, ನೀವು ಈ ದೇಶದೊಳಕ್ಕೆ ಪ್ರವೇಶಿಸಿ ಅದನ್ನು ಸ್ವಾಧೀನಮಾಡಿಕೊಳ್ಳುವಿರಿ ಎಂದು ಅವರ ಪೂರ್ವಿಕರಿಗೆ ವಾಗ್ದಾನಮಾಡಿದ್ದ ದೇಶಕ್ಕೆ ಅವರನ್ನು ಬರಮಾಡಿದೆ.
ಅವನು ಸಮುದ್ರದಿಂದ ಸಮುದ್ರದ ವರೆಗೂ, ಯೂಫ್ರೆಟಿಸ್ ನದಿಯಿಂದ ಭೂಮಿಯ ಕಟ್ಟಕಡೆಯವರೆಗೂ ಆಳಲಿ.
ಅವರ ಪೂರ್ವಿಕರಿಗೆ ವಾಗ್ದಾನಮಾಡಿದ ಪ್ರಕಾರ ಹಾಲೂ ಮತ್ತು ಜೇನೂ ಹರಿಯುವ ಈ ದೇಶವನ್ನು ಅವರಿಗೆ ಅನುಗ್ರಹಿಸಿದಿ.
¶ “ಆ ರಾಜರ ಕಾಲದಲ್ಲಿ ಪರಲೋಕದೇವರು ಒಂದು ರಾಜ್ಯವನ್ನು ಸ್ಥಾಪಿಸುವನು; ಅದು ಎಂದಿಗೂ ಅಳಿಯದು, ಅದರ ಪ್ರಾಬಲ್ಯವು ಬೇರೆ ಜನಾಂಗಕ್ಕೆ ಕದಲಿಹೋಗದು. ಆ ರಾಜ್ಯಗಳನ್ನೆಲ್ಲಾ ಭಂಗಪಡಿಸಿ ನಿರ್ನಾಮಮಾಡಿ ಶಾಶ್ವತವಾಗಿ ನಿಲ್ಲುವುದು.
ಸಮಾರ್ಯಕ್ಕೆ ಬಿದ್ದ ಪೆಟ್ಟು ಗುಣಪಡಿಸಲಾಗದು. ಅದು ಯೆಹೂದಕ್ಕೂ ತಾಕಿದೆ. ನನ್ನ ಜನರ ಆಲೋಚನಾಸ್ಥಾನವಾದ ಯೆರೂಸಲೇಮಿಗೆ ಮುಟ್ಟಿದೆ.
ಆದರೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನಮಗೆ ಜಯವನ್ನು ಕೊಡುವ ದೇವರಿಗೆ ಸದಾಕಾಲ ಮಹಿಮೆಯುಂಟಾಗಲಿ.
¶ ಏಳನೆಯ ದೇವದೂತನು ತುತ್ತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳುಂಟಾಗಿ, “ಲೋಕದ ರಾಜ್ಯಾಧಿಕಾರವು ನಮ್ಮ ಕರ್ತನಿಗೂ ಆತನ ಕ್ರಿಸ್ತನಿಗೂ ಬಂದಿದೆ, ಆತನು ಯುಗಯುಗಾಂತರಗಳಲ್ಲಿಯೂ ರಾಜ್ಯವನ್ನಾಳುವನು” ಎಂಬ ಮಹಾಘೋಷಣೆಯಾಯಿತು.