TSK

TSK · ಆದಿಕಾಂಡ 22:9

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಆಗ ನೋಹನು ಯೆಹೋವನಿಗೋಸ್ಕರ ಯಜ್ಞವೇದಿಯನ್ನು ಕಟ್ಟಿ, ಅದರ ಮೇಲೆ ಶುದ್ಧವಾದ ಪ್ರತಿ ಪಶು ಪಕ್ಷಿಗಳಿಂದ ಆಯ್ದುಕೊಂಡು ಸರ್ವಾಂಗಹೋಮ ಮಾಡಿದನು.

ಹೇಗೆಂದರೆ ಆತನು ಅವನನ್ನು, “ಅಬ್ರಹಾಮನೇ” ಎಂದು ಕರೆಯಲು ಅವನು, “ಇಗೋ, ಇದ್ದೇನೆ” ಎಂದನು. ಆಗ ಆತನು, “ನಿನಗೆ ಪ್ರಿಯನಾಗಿರುವ ಒಬ್ಬನೇ ಮಗನಾದ ಇಸಾಕನನ್ನು ಕರೆದುಕೊಂಡು ಮೊರೀಯ ದೇಶಕ್ಕೆ ಹೋಗಿ ಅಲ್ಲಿ ಅವನನ್ನು ನಾನು ಹೇಳುವ ಒಂದು ಬೆಟ್ಟದ ಮೇಲೆ ಸರ್ವಾಂಗಹೋಮವಾಗಿ ಅರ್ಪಿಸಬೇಕು” ಎಂದನು.

ನಿಜವಾಗಿಯೂ ನಮ್ಮ ವ್ಯಾಧಿಗಳನ್ನು ಸಂಕಷ್ಟವನ್ನು ಅನುಭವಿಸಿದನು; ಅವನು ಹೊತ್ತ ಹೊರೆಯು ನಮ್ಮ ಸಂಕಟವೇ ಹೌದು, ನಾವಾದರೋ ಅವನು ದೇವರಿಂದ ಬಾಧಿತನು, ಪೆಟ್ಟು ತಿಂದವನು, ಕುಗ್ಗಿಸಲ್ಪಟ್ಟವನು ಎಂದು ಭಾವಿಸಿಕೊಂಡೆವು.

¶ ಯೇಸು ಈ ಮಾತುಗಳನ್ನೆಲ್ಲಾ ಹೇಳಿ ಮುಗಿಸಿದ ನಂತರ ತನ್ನ ಶಿಷ್ಯರಿಗೆ, ‹“ಎರಡು ದಿನಗಳಾದ ಮೇಲೆ ಪಸ್ಕಹಬ್ಬ ಬರುತ್ತದೆಂದು ನೀವು ಬಲ್ಲಿರಿ;›

¶ ಬೆಳಗಾದ ಕೂಡಲೆ ಮುಖ್ಯಯಾಜಕರೂ, ಹಿರಿಯರೂ, ಶಾಸ್ತ್ರಿಗಳೂ, ಹಿರೀಸಭೆಯ ಸದಸ್ಯರೆಲ್ಲರೂ ಒಟ್ಟುಗೂಡಿ ಆಲೋಚನೆ ಮಾಡಿಕೊಂಡು ಯೇಸುವನ್ನು ಕಟ್ಟಿಸಿ ಕರೆದುಕೊಂಡು ಹೋಗಿ ಪಿಲಾತನಿಗೆ ಒಪ್ಪಿಸಿದರು.

ಅವನು ಓದುತ್ತಿದ್ದ ಶಾಸ್ತ್ರವಚನವು ಯಾವುದೆಂದರೆ, “ವಧಿಸುವಸ್ಥಾನಕ್ಕೆ ಒಯ್ಯಲ್ಪಡುವ ಕುರಿಮರಿಯಂತೆ ಆತನು ಒಯ್ಯಲ್ಪಟ್ಟನು; ಮತ್ತು ಕುರಿಮರಿಯು ಉಣ್ಣೆ ಕತ್ತರಿಸುವವನ ಮುಂದೆ ಮೌನವಾಗಿರುವಂತೆ ಆತನು ಬಾಯಿ ತೆರೆಯದೆ ಮೌನವಾಗಿದ್ದನು.

ಕ್ರಿಸ್ತನು ನಮ್ಮನ್ನು ಪ್ರೀತಿಸಿ ನಮ್ಮೆಲ್ಲರಿಗೋಸ್ಕರ ತನ್ನನ್ನೇ ದೇವರಿಗೆ ಸುವಾಸನೆಯಾದ ಕಾಣಿಕೆಯಾಗಿಯೂ, ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ ನೀವೂ ಪ್ರೀತಿಯಲ್ಲಿ ನಡೆದುಕೊಳ್ಳಿರಿ.

ಹಾಗೆಯೇ ಕ್ರಿಸ್ತನು ಸಹ ಬಹು ಜನರ ಪಾಪಗಳನ್ನು ಹೊತ್ತು ಕೊಳ್ಳುವುದಕ್ಕೊಸ್ಕರ ಒಂದೇ ಸಾರಿ ಸಮರ್ಪಿತನಾದನು. ಆತನು ಎರಡನೆಯ ಸಾರಿ ಪ್ರತ್ಯಕ್ಷನಾಗುವಂಥದ್ದು ಪಾಪವನ್ನು ಪರಿಹರಿಸುವುದಕ್ಕಾಗಿಯಲ್ಲ ತನ್ನನ್ನು ನಿರೀಕ್ಷಿಸಿಕೊಂಡಿರುವವರಿಗೆ ರಕ್ಷಣೆಯನ್ನು ಉಂಟುಮಾಡುವುದಕ್ಕಾಗಿಯೇ.

ನಮ್ಮ ಪಿತೃವಾದ ಅಬ್ರಹಾಮನು ತನ್ನ ಮಗನಾದ ಇಸಾಕನನ್ನು ಯಜ್ಞವೇದಿಯ ಮೇಲೆ ಅರ್ಪಿಸಿದಾಗ ನೀತಿವಂತನೆಂಬ ನಿರ್ಣಯವನ್ನು ಹೊಂದಿದ್ದು ನಂಬಿಕೆಯ ಕ್ರಿಯೆಗಳಿಂದಲ್ಲವೇ?