ಅಬ್ರಹಾಮನ ಸ್ವಂತ ಭೂಮಿಯೆಂದು ಹಿತ್ತಿಯರಾಗಿದ್ದ ಆ ಊರಿನವರೆಲ್ಲರ ಮುಂದೆ ತೀರ್ಮಾನವಾಯಿತು.
TSK
TSK · ಆದಿಕಾಂಡ 23:11
مراجع Treasury of Scripture Knowledge في ಕನ್ನಡ IRV.
ಒಬ್ಬನೇ ಒಬ್ಬನ ಸಾಕ್ಷಿಯ ಮಾತಿನ ಮೇಲೆ ಯಾರಿಗೂ ಮರಣಶಿಕ್ಷೆಯಾಗಬಾರದು. ಮರಣಶಿಕ್ಷೆಯನ್ನು ವಿಧಿಸುವುದಕ್ಕೆ ಇಬ್ಬರು ಇಲ್ಲವೆ ಮೂವರ ಸಾಕ್ಷಿಗಳು ಬೇಕು.
¶ ಬೋವಜನು ಊರಬಾಗಿಲಿನ ಬಳಿಗೆ ಹೋಗಿ ಅಲ್ಲಿ ಕುಳಿತುಕೊಂಡನು. ತಾನು ಹೇಳಿದ್ದ ಸಮೀಪಬಂಧುವು ಆ ಮಾರ್ಗವಾಗಿ ಹೋಗುತ್ತಿದ್ದುದನ್ನು ಕಂಡು, ಬೋವಜನು ಅವನಿಗೆ “ಬಾರಪ್ಪಾ, ಇಲ್ಲಿ ಬಂದು ಕುಳಿತುಕೋ” ಎಂದು ಕರೆಯಲು ಅವನು ಬಂದು ಕುಳಿತುಕೊಂಡನು.
¶ ಆಗ ಬೋವಜನು ಹಿರಿಯರಿಗೂ, ಎಲ್ಲಾ ಜನರಿಗೂ “ನಾನು ಎಲೀಮೆಲೆಕ್, ಕಿಲ್ಯೋನ್, ಮಹ್ಲೋನ್ ಎಂಬುವರಿಗಿದ್ದದ್ದನ್ನೆಲ್ಲಾ ನವೊಮಿಯಿಂದ ತೆಗೆದುಕೊಂಡಿದ್ದೇನೆ;
ದಾವೀದನೂ ಅವನ ಸೇವಕರೂ ತನ್ನ ಬಳಿಗೆ ಬರುವುದನ್ನು ಅರೌನನು ಕಂಡು ಅವರ ಮುಂದೆ ಹೋಗಿ ಅರಸನಿಗೆ ಸಾಷ್ಟಾಂಗ ನಮಸ್ಕಾರ ಮಾಡಿದನು.
ದಾವೀದನು ಅವನಿಗೆ, “ನಿನ್ನ ಕಣವನ್ನೂ ಮತ್ತು ಭೂಮಿಯನ್ನು ನನಗೆ ಕೊಡು, ವ್ಯಾಧಿಯು ಜನರನ್ನು ಬಿಟ್ಟು ಹೋಗುವಂತೆ ನಾನು ಅದರಲ್ಲಿ ಯೆಹೋವನಿಗೋಸ್ಕರ ಒಂದು ಯಜ್ಞವೇದಿಯನ್ನು ಕಟ್ಟಿಸುತ್ತೇನೆ. ಪೂರ್ಣಕ್ರಯ ತೆಗೆದುಕೊಂಡು ಅದನ್ನು ಕೊಡು” ಎಂದು ಹೇಳಿದನು.
ಇಗೋ, ನಿನ್ನ ಚಿಕ್ಕಪ್ಪನಾದ ಶಲ್ಲೂಮನ ಮಗನಾಗಿರುವ ಹನಮೇಲನು ನಿನ್ನ ಬಳಿಗೆ ಬಂದು ‘ಅನಾತೋತಿನಲ್ಲಿರುವ ನನ್ನ ಹೊಲವನ್ನು ಕೊಂಡುಕೋ; ಪರಾಧೀನವಾಗದಂತೆ ಅದನ್ನು ಕೊಂಡುಕೊಳ್ಳುವ ಹಕ್ಕು ನಿನ್ನದೇ ಎಂದು ಹೇಳುವನು’” ಎಂದು ತಿಳಿಸಿದನು.