ಹಿತ್ತಿಯರು ಆ ಭೂಮಿಯನ್ನೂ ಅದರಲ್ಲಿರುವ ಗವಿಯನ್ನೂ ಸ್ವಂತವಾದ ಸ್ಮಶಾನ ಭೂಮಿಯನ್ನಾಗಿ ಅಬ್ರಹಾಮನಿಗೆ ಕೊಟ್ಟು ದೃಢಪಡಿಸಿದರು.
TSK
TSK · ಆದಿಕಾಂಡ 23:17
مراجع Treasury of Scripture Knowledge في ಕನ್ನಡ IRV.
ಅಬ್ರಹಾಮನು ಅದನ್ನು ಹಿತ್ತಿಯರಿಂದ ಕೊಂಡುಕೊಂಡಿದ್ದನು. ಅದರಲ್ಲಿ ಅಬ್ರಹಾಮನಿಗೂ, ಅವನ ಹೆಂಡತಿಯಾದ ಸಾರಳಿಗೂ ಸಮಾಧಿ ಆಯಿತು.
ಆ ಗವಿಯು ಕಾನಾನ್ ದೇಶದ ಮಮ್ರೆಗೆದುರಾಗಿರುವ ಮಕ್ಪೇಲ ಎಂಬ ಬಯಲಿನಲ್ಲಿ ಇದೆ. ಅದನ್ನು ಅಬ್ರಹಾಮನು ಅದರ ಸುತ್ತಲಿರುವ ಭೂಮಿ ಸಹಿತವಾಗಿ ಹಿತ್ತಿಯನಾದ ಎಫ್ರೋನನಿಂದ ಸ್ವಂತ ಸ್ಮಶಾನ ಭೂಮಿಗಾಗಿ ಕೊಂಡುಕೊಂಡನು.
ಅವನ ಶವವನ್ನು ಕಾನಾನ್ ದೇಶಕ್ಕೆ ಹೊತ್ತುಕೊಂಡು ಹೋಗಿ ಮಕ್ಪೇಲ ಎಂಬ ಬಯಲಿನಲ್ಲಿರುವ ಗುಹೆಯೊಳಗೆ ಸಮಾಧಿಮಾಡಿದರು. ಅಬ್ರಹಾಮನು ಹಿತ್ತಿಯನಾದ ಎಫ್ರೋನನಿಂದ ಮಮ್ರೆಗೆದುರಿನಲ್ಲಿರುವ ಆ ಗವಿಯನ್ನು ಸುತ್ತಲಿರುವ ಭೂಮಿ ಸಹಿತ ಸ್ವಂತ ಸ್ಮಶಾನ ಭೂಮಿಯನ್ನಾಗಿ ಕೊಂಡುಕೊಂಡಿದ್ದನು.
ನೀನು ಆ ಒಂದೊಂದನ್ನೂ ಅದರದರ ಪ್ರಾಂತ್ಯಕ್ಕೆ ಕರೆದುಕೊಂಡು ಹೋಗಿ, ಅವುಗಳ ಮನೆಯ ಹಾದಿಗಳನ್ನು ಕಂಡುಕೊಳ್ಳಬಲ್ಲೆಯಾ?
ಇಗೋ, ನಿನ್ನ ಚಿಕ್ಕಪ್ಪನಾದ ಶಲ್ಲೂಮನ ಮಗನಾಗಿರುವ ಹನಮೇಲನು ನಿನ್ನ ಬಳಿಗೆ ಬಂದು ‘ಅನಾತೋತಿನಲ್ಲಿರುವ ನನ್ನ ಹೊಲವನ್ನು ಕೊಂಡುಕೋ; ಪರಾಧೀನವಾಗದಂತೆ ಅದನ್ನು ಕೊಂಡುಕೊಳ್ಳುವ ಹಕ್ಕು ನಿನ್ನದೇ ಎಂದು ಹೇಳುವನು’” ಎಂದು ತಿಳಿಸಿದನು.
ಅವರನ್ನು ಶೇಕೆಮಿಗೆ ತೆಗೆದುಕೊಂಡು ಹೋಗಿ ಅಲ್ಲಿ ಹಮೋರನ ಮಕ್ಕಳಿಂದ ಅಬ್ರಹಾಮನು ಬೆಳ್ಳಿಯನ್ನು ಕೊಟ್ಟು ಕೊಂಡುಕೊಂಡಿದ್ದ ಸಮಾಧಿಯೊಳಗೆ ಇಟ್ಟರು.
ಸಮಯವನ್ನು ಸದುಪಯೋಗಿಸಿಕೊಂಡು ಹೊರಗಿನವರೊಂದಿಗೆ ಜ್ಞಾನವುಳ್ಳವರಾಗಿ ನಡೆದುಕೊಳ್ಳಿರಿ.