ಅವನ ಮಕ್ಕಳಾದ ಇಸಾಕ್, ಇಷ್ಮಾಯೇಲರು ಹಿತ್ತಿಯನಾದ ಚೋಹರನ ಮಗ ಎಫ್ರೋನನ ಭೂಮಿಯಲ್ಲಿರುವ ಮಕ್ಪೇಲದ ಗವಿಯಲ್ಲಿ ಅವನನ್ನು ಸಮಾಧಿಮಾಡಿದರು. ಅದು ಮಮ್ರೆಯ ತೋಪಿನ ಪೂರ್ವದಿಕ್ಕಿನಲ್ಲಿದೆ.
TSK
TSK · ಆದಿಕಾಂಡ 23:20
مراجع Treasury of Scripture Knowledge في ಕನ್ನಡ IRV.
¶ ಇಸ್ರಾಯೇಲನು ತನ್ನ ಮಕ್ಕಳಿಗೆ ಆಜ್ಞಾಪಿಸಿ ಹೇಳಿದ್ದೇನಂದರೆ, “ನಾನು ನನ್ನ ಪೂರ್ವಿಕರ ಬಳಿಗೆ ಸೇರಬೇಕಾದ ಕಾಲವು ಸಮೀಪಿಸಿತು. ಹಿತ್ತಿಯನಾದ ಎಫ್ರೋನನ ಭೂಮಿಯಲ್ಲಿರುವ ಗವಿಯೊಳಗೆ ನನ್ನನ್ನು ನನ್ನ ಪೂರ್ವಿಕರ ಬಳಿಯಲ್ಲಿ ಸಮಾಧಿಮಾಡಬೇಕು.
‘ನನ್ನ ತಂದೆಯು, ತಾನು ಕಾನಾನ್ ದೇಶದಲ್ಲಿ ಸಿದ್ಧ ಮಾಡಿಕೊಂಡಿರುವ ಸ್ಥಳದಲ್ಲಿಯೇ ತನಗೆ ಸಮಾಧಿ ಮಾಡಬೇಕೆಂದು ಸಾಯುವುದಕ್ಕಿಂತ ಮೊದಲು ನನ್ನಿಂದ ಪ್ರಮಾಣ ಮಾಡಿಸಿದನು. ಆದ್ದರಿಂದ ನನ್ನ ಮೇಲೆ ಕಟಾಕ್ಷವಿದ್ದರೆ ನೀವು ಈ ಸಂಗತಿಯನ್ನು ಫರೋಹನಿಗೆ ತಿಳಿಸಿ ನಾನು ಹೋಗಿ ತಂದೆಗೆ ಸಮಾಧಿ ಮಾಡಿ ಬರುವುದಕ್ಕೆ ಅಪ್ಪಣೆ ಕೊಡಿಸಬೇಕೆಂದು ಬೇಡಿಕೊಳ್ಳುತ್ತೇನೆ’” ಎಂದನು.
¶ ಯೋಸೇಫನು ತನ್ನ ಅಣ್ಣತಮ್ಮಂದಿರಿಗೆ, “ನನಗೆ ಅವಸಾನಕಾಲ ಸಮೀಪಿಸಿತು. ಆದರೆ ದೇವರು ನಿಶ್ಚಯವಾಗಿ ನಿಮ್ಮನ್ನು ಪರಾಂಬರಿಸಿ ತಾನು ಅಬ್ರಹಾಮ, ಇಸಾಕ್, ಯಾಕೋಬರಿಗೆ ಕೊಡುತ್ತೇನೆಂದು ಪ್ರಮಾಣಮಾಡಿ ಹೇಳಿದ ದೇಶಕ್ಕೆ ನೀವು ಹೋಗಿ ಸೇರುವಂತೆ ಮಾಡುವನು” ಎಂದು ತಿಳಿದುಕೊಳ್ಳಿರಿ.
ಅರಸನು ಅರೌನನಿಗೆ, “ಹಾಗಲ್ಲ, ನಾನು ಅವುಗಳನ್ನು ನಿನ್ನಿಂದ ಕ್ರಯಕ್ಕೆ ತೆಗೆದುಕೊಳ್ಳುತ್ತೇನೆ. ನನ್ನ ದೇವರಾದ ಯೆಹೋವನಿಗೆ ಉಚಿತವಾಗಿ ಸಿಕ್ಕಿದ್ದನ್ನು ಯಜ್ಞವಾಗಿ ಅರ್ಪಿಸಲಾರೆ” ಎಂದು ಹೇಳಿ ಆ ಕಣವನ್ನೂ ಮತ್ತು ಹೋರಿಗಳನ್ನೂ ಐವತ್ತು ಶೆಕಲ್ ಬೆಳ್ಳಿಗೆ ಕೊಂಡುಕೊಂಡನು.
ಪತ್ರಕ್ಕೆ ಸಹಿ ಹಾಕಿ ಮುಚ್ಚಿ ಆ ಮುಚ್ಚಳಕ್ಕೆ ಸಾಕ್ಷಿಗಳನ್ನು ಹಾಕಿಸಿ, ತಕ್ಕಡಿಯಲ್ಲಿ ಆ ಬೆಳ್ಳಿಯನ್ನು ತೂಗಿ ಅವನಿಗೆ ಕೊಟ್ಟೆನು.