TSK

TSK · ಆದಿಕಾಂಡ 24:35

مراجع Treasury of Scripture Knowledge في ಕನ್ನಡ IRV.

العودة إلى المقطع

ಆಗ ಅಬ್ರಾಮನಿಗೆ ಕುರಿ, ಎತ್ತು, ಗಂಡು, ಹೆಣ್ಣು ಕತ್ತೆಗಳು, ದಾಸದಾಸಿಯರು, ಒಂಟೆಗಳು, ದೊರಕಿದವು.

¶ ಅಬ್ರಹಾಮನು ದಿನ ತುಂಬಿದ ವೃದ್ಧನಾಗಿದ್ದನು. ಯೆಹೋವನು ಅವನನ್ನು ಸಕಲ ವಿಷಯಗಳಲ್ಲಿ ಅಭಿವೃದ್ಧಿಪಡಿಸಿದ್ದನು.

¶ ಇಸಾಕನು ಆ ದೇಶದಲ್ಲಿ ಬೀಜವನ್ನು ಬಿತ್ತಿ ಅದೇ ವರ್ಷದಲ್ಲಿ ನೂರರಷ್ಟು ಬೆಳೆಯನ್ನು ಕೊಯ್ದನು; ಯೆಹೋವನು ಅವನನ್ನು ಅಭಿವೃದ್ಧಿಪಡಿಸಿದನು;

ಅವನಿಗೆ ಏಳು ಸಾವಿರ ಕುರಿಗಳೂ, ಮೂರು ಸಾವಿರ ಒಂಟೆಗಳೂ, ಐನೂರು ಜೋಡಿ ಎತ್ತುಗಳೂ, ಐನೂರು ಹೆಣ್ಣು ಕತ್ತೆಗಳೂ, ಬಹುಮಂದಿ ಸೇವಕರೂ ಇದ್ದುದರಿಂದ ಅವನು ಮೂಡಣ ದೇಶದವರಲ್ಲೆಲ್ಲಾ ಹೆಚ್ಚು ಸ್ವತ್ತುಳ್ಳವನಾಗಿದ್ದನು.

ನೀನೇ ನನಗೋಸ್ಕರ ಗುರಾಣಿಯನ್ನು ಹಿಡಿದು ರಕ್ಷಿಸಿದ್ದೀ. ನಿನ್ನ ಬಲಗೈ ನನಗೆ ಆಧಾರ; ನಿನ್ನ ಕೃಪಾಕಟಾಕ್ಷವು ನನಗೆ ದೊಡ್ಡಸ್ತಿಕೆಯನ್ನು ಉಂಟುಮಾಡಿದೆ.

ಅವನ ಮನೆಯಲ್ಲಿ ಸಿರಿಸಂಪತ್ತುಗಳು ಇರುವವು; ಅವನ ನೀತಿಯು ಸದಾಕಾಲವೂ ಫಲಿಸುತ್ತಿರುವುದು.

ದೇಹಸಾಧನೆಯು ಸ್ವಲ್ಪಮಟ್ಟಿಗೆ ಪ್ರಯೋಜನವಾಗಿದೆ, ಭಕ್ತಿಯಾದರೋ ಎಲ್ಲಾ ವಿಧದಲ್ಲಿ ಪ್ರಯೋಜನವಾದದ್ದು. ಅದಕ್ಕೆ ಇಹಪರಗಳಲ್ಲಿನ ಜೀವನಕ್ಕೆ ವಾಗ್ದಾನ ಉಂಟು.