TSK

TSK · ಆದಿಕಾಂಡ 24:45

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಅವನು ಹೀಗೆ ಅಂದುಕೊಳ್ಳುತ್ತಿರುವಾಗಲೇ ಅಬ್ರಹಾಮನ ತಮ್ಮನಾದ ನಾಹೋರನ ಹೆಂಡತಿಯಾಗಿರುವ ಮಿಲ್ಕಳ ಮಗನಾದ ಬೆತೂವೇಲನಿಗೆ ಹುಟ್ಟಿದ ರೆಬೆಕ್ಕಳು ಹೆಗಲಿನ ಮೇಲೆ ಕೊಡವನ್ನಿಟ್ಟುಕೊಂಡು ಊರ ಹೊರಗೆ ಬರುವುದನ್ನು ಕಂಡನು.

ಆಕೆ ತನ್ನ ಹೃದಯದಲ್ಲಿ ಪ್ರಾರ್ಥಿಸುತ್ತಿದ್ದರಿಂದ ತುಟಿಗಳು ಮಾತ್ರ ಅಲ್ಲಾಡುತ್ತಿದ್ದವು; ಶಬ್ದ ಕೇಳಿಸುತ್ತಿರಲಿಲ್ಲ. ಆದ್ದರಿಂದ ಆಕೆಯು ಮದ್ಯಪಾನಮಾಡಿದ್ದಾಳೆಂದು ತಿಳಿದು

ಆಗ ಅರಸನು, “ನಿನ್ನ ಅಪೇಕ್ಷೆಯೇನು” ಎಂದು ನನ್ನನ್ನು ಕೇಳಿದನು. ಆಗ ನಾನು ಪರಲೋಕದ ದೇವರನ್ನು ಪ್ರಾರ್ಥಿಸಿ,

ಆಗ ಅವರು ಬೇಡುವುದರೊಳಗೆ ಸದುತ್ತರವನ್ನು ದಯಪಾಲಿಸುವೆನು; ಅವರು ಹೇಳುತ್ತಿರುವಾಗಲೇ ಕೇಳುವೆನು.

ನಿನ್ನ ವಿಜ್ಞಾಪನೆಯ ಆರಂಭದಲ್ಲಿಯೇ ದೇವರ ಅಪ್ಪಣೆಯಾಯಿತು; ಅದನ್ನು ನಿನಗೆ ತಿಳಿಸಲು ಇಲ್ಲಿಗೆ ಬಂದಿದ್ದೇನೆ; ನೀನು ದೇವರಿಗೆ ಅತಿಪ್ರಿಯನು. ಈ ದೈವೋಕ್ತಿಯನ್ನು ಯೋಚಿಸು, ಈ ದರ್ಶನವನ್ನು ಗ್ರಹಿಸಿಕೋ.

ಅವರು ಕೇಳಿ ಏಕಮನಸ್ಸು ಉಳ್ಳವರಾಗಿ ದೇವರನ್ನು ಗಟ್ಟಿಯಾದ ಧ್ವನಿಯಿಂದ ಹೀಗೆ ಪ್ರಾರ್ಥಿಸಿದರು;, “ಕರ್ತನೇ, ಭೂಮ್ಯಾಕಾಶಗಳನ್ನೂ, ಸಮುದ್ರಗಳನ್ನೂ, ಅವುಗಳಲ್ಲಿರುವ ಸಮಸ್ತವನ್ನೂ ಉಂಟುಮಾಡಿದಾತನೇ,

ಆತನು ಇದನ್ನು ತಿಳಿದುಕೊಂಡ ತರುವಾಯ, ಅವನು ಮಾರ್ಕನೆನಿಸಿಕೊಳ್ಳುವ ಯೋಹಾನನ ತಾಯಿಯಾದ ಮರಿಯಳ ಮನೆಗೆ ಬಂದನು. ಅಲ್ಲಿ ಅನೇಕರು ಕೂಡಿಬಂದು ಪ್ರಾರ್ಥನೆಮಾಡುತ್ತಿದ್ದರು.