¶ ಅವನು ಹೀಗೆ ಅಂದುಕೊಳ್ಳುತ್ತಿರುವಾಗಲೇ ಅಬ್ರಹಾಮನ ತಮ್ಮನಾದ ನಾಹೋರನ ಹೆಂಡತಿಯಾಗಿರುವ ಮಿಲ್ಕಳ ಮಗನಾದ ಬೆತೂವೇಲನಿಗೆ ಹುಟ್ಟಿದ ರೆಬೆಕ್ಕಳು ಹೆಗಲಿನ ಮೇಲೆ ಕೊಡವನ್ನಿಟ್ಟುಕೊಂಡು ಊರ ಹೊರಗೆ ಬರುವುದನ್ನು ಕಂಡನು.
TSK
TSK · ಆದಿಕಾಂಡ 24:50
مراجع Treasury of Scripture Knowledge في ಕನ್ನಡ IRV.
ಆ ಮೇಲೆ ತಾನು ತಂದಿದ್ದ ಬೆಳ್ಳಿ ಬಂಗಾರದ ಒಡವೆಗಳನ್ನೂ, ವಸ್ತ್ರಗಳನ್ನೂ ತೆಗೆದು ರೆಬೆಕ್ಕಳಿಗೆ ಕೊಟ್ಟನು. ಆಕೆಯ ಅಣ್ಣನಿಗೂ ತಾಯಿಗೂ ಸಹ ಬೆಲೆಯುಳ್ಳ ವಸ್ತುಗಳನ್ನು ಕೊಟ್ಟನು.
ಮತ್ತು ರೆಬೆಕ್ಕಳಿಗೆ, “ತಂಗಿ, ನಿನ್ನಿಂದ ಸಾವಿರ, ಹತ್ತು ಸಾವಿರ ಸಂತಾನವಾಗಲಿ; ನಿನ್ನ ಸಂತಾನದವರು ತಮ್ಮ ವೈರಿಗಳ ಸ್ವತ್ತನ್ನು ಸ್ವಾಧೀನಮಾಡಿಕೊಳ್ಳಲಿ” ಎಂದು ಹೇಳಿ ಹರಸಿದರು.
ನಿಮಗೆ ಕೇಡುಮಾಡುವುದಕ್ಕೆ ನನ್ನಲ್ಲಿ ಸಾಮರ್ಥ್ಯ ಇದೆ. ಆದರೆ ಕಳೆದ ರಾತ್ರಿಯಲ್ಲಿ ನಿಮ್ಮ ತಂದೆಯ ದೇವರು, ‘ಯಾಕೋಬನಿಗೆ ಒಳ್ಳೆಯದನ್ನಾಗಲೀ, ಕೆಟ್ಟದನ್ನಾಗಲಿ ಹೇಳದ ಹಾಗೆ ಎಚ್ಚರವಾಗಿರು’ ಎಂದು ಹೇಳಿದನು.
ಅವನು ಜನರ ಮಾತನ್ನು ಕೇಳದೇ ಹೋದದ್ದು ಯೆಹೋವನಿಂದಲೇ. ಈ ಪ್ರಕಾರ ಯೆಹೋವನು ಶಿಲೋವಿನವನಾದ ಅಹೀಯನ ಮುಖಾಂತರವಾಗಿ ನೆಬಾಟನ ಮಗನಾದ ಯಾರೊಬ್ಬಾಮನಿಗೆ ಹೇಳಿಸಿದ ಮಾತು ನೆರವೇರಿತು.
ಇದು ಯೆಹೋವನಿಂದಲೇ ಆಯಿತು; ನಮಗೆ ಆಶ್ಚರ್ಯವಾಗಿ ತೋರುತ್ತದೆ.
‹ಇದು ಕರ್ತನಿಂದಲೇ ಆಯಿತು,› ‹ಇದು ನಮ್ಮ ಕಣ್ಣುಗಳಿಗೆ ಆಶ್ಚರ್ಯವಾಗಿ ತೋರುತ್ತದೆ ಎಂಬ ಶಾಸ್ತ್ರವಚನಗಳನ್ನೂ ನೀವು ಓದಲಿಲ್ಲವೇ?’”› ಎಂದನು.