TSK

TSK · ಆದಿಕಾಂಡ 25:28

مراجع Treasury of Scripture Knowledge في ಕನ್ನಡ IRV.

العودة إلى المقطع

ಕಾಡಿಗೆ ಹೋಗಿ ಬೇಟೆಯಾಡಿ ಬೇಟೆ ಮಾಂಸದಿಂದ ನನಗೆ ಇಷ್ಟವಾಗಿರುವ ರುಚಿಪದಾರ್ಥವನ್ನು ನನ್ನ ಊಟಕ್ಕೆ ಸಿದ್ಧಪಡಿಸು, ಸಾವು ಬರುವುದಕ್ಕಿಂತ ಮೊದಲು ನಾನು ಅದನ್ನು ತಿಂದು ನಿನ್ನನ್ನು ಆಶೀರ್ವದಿಸುತ್ತೇನೆ” ಎಂದು ಹೇಳಿದನು.

ಆಡಿನ ಹಿಂಡಿನೊಳಗೆ ಹೋಗಿ ಎರಡು ಒಳ್ಳೆ ಆಡಿನ ಮರಿಗಳನ್ನು ಬೇಗ ತೆಗೆದುಕೊಂಡು ಬಾ; ಅವುಗಳಿಂದ ನಿನ್ನ ತಂದೆಗೆ ಇಷ್ಟವಾಗಿರುವ ರುಚಿಪದಾರ್ಥವನ್ನು ನಾನೇ ಸಿದ್ಧಮಾಡುತ್ತೇನೆ.

¶ ಯಾಕೋಬನು ಅವನಿಗೆ, “ನಾನು ನಿನ್ನ ಹಿರೀಮಗನಾದ ಏಸಾವನು; ನಿನ್ನ ಅಪ್ಪಣೆಯಂತೆ ಊಟ ಸಿದ್ಧಪಡಿಸಿಕೊಂಡು ತಂದಿದ್ದೇನೆ. ಎದ್ದು, ಕುಳಿತುಕೊಂಡು ನಾನು ತಂದಿರುವ ಬೇಟೆ ಮಾಂಸವನ್ನು ಊಟಮಾಡಿ ನನ್ನನ್ನು ಆಶೀರ್ವದಿಸು” ಎಂದು ಹೇಳಲು,

ಅವನೂ ಸವಿಯೂಟವನ್ನು ಸಿದ್ಧಮಾಡಿ ತನ್ನ ತಂದೆಯ ಬಳಿಗೆ ತಂದು ಅವನಿಗೆ, “ಅಪ್ಪಾ, ನೀನು ಎದ್ದು ನಿನ್ನ ಮಗನಾದ ನಾನು ಬೇಟೆಯಿಂದ ತಂದಿರುವ ಮಾಂಸವನ್ನು ಊಟಮಾಡಿ ನನ್ನನ್ನು ಆಶೀರ್ವದಿಸು” ಎಂದು ಹೇಳಿದನು.