TSK

TSK · ಆದಿಕಾಂಡ 25:5

مراجع Treasury of Scripture Knowledge في ಕನ್ನಡ IRV.

العودة إلى المقطع

ನನ್ನ ದಣಿಯ ಪತ್ನಿಯಾದ ಸಾರಳು ವೃದ್ಧಾಪ್ಯದಲ್ಲಿ ಅವನಿಗೆ ಮಗನನ್ನು ಹೆತ್ತಳು; ಆ ಮಗನಿಗೆ ನನ್ನ ದಣಿಯು ತನಗಿರುವುದನ್ನೆಲ್ಲಾ ಕೊಟ್ಟಿದ್ದಾನೆ.

‹ನನ್ನ ತಂದೆಯು ಎಲ್ಲವನ್ನು ನನಗೆ ಒಪ್ಪಿಸಿದ್ದಾನೆ. ತಂದೆಯ ಹೊರತು ಇನ್ನಾವನೂ ಮಗನನ್ನು ತಿಳಿದವನಲ್ಲ. ಮಗನ ಹೊರತು ಇನ್ನಾವನೂ ತಂದೆಯನ್ನು ತಿಳಿದವನಲ್ಲ. ಮತ್ತು ಮಗನು ತಂದೆಯನ್ನು ಯಾರಿಗೆ ಪ್ರಕಟಪಡಿಸುವುದಕ್ಕೆ ಇಚ್ಛಿಸುತ್ತಾನೋ ಅವನು ಆತನನ್ನು ತಿಳಿದವನಾಗಿದ್ದಾನೆ.›

ತಂದೆಯಾದ ದೇವರು ತನ್ನ ಮಗನನ್ನು ಪ್ರೀತಿಸಿ ಎಲ್ಲವನ್ನೂ ಆತನ ಕೈಯಲ್ಲಿ ಕೊಟ್ಟಿದ್ದಾನೆ.

ಮಕ್ಕಳಾಗಿದ್ದರೆ ಬಾಧ್ಯಸ್ಥರೂ ಆಗಿದ್ದೇವೆ; ದೇವರಿಗೆ ಬಾಧ್ಯಸ್ಥರೂ ಹಾಗೂ ಕ್ರಿಸ್ತನೊಂದಿಗೆ ಸಹಾ ಬಾಧ್ಯರು ಆಗಿದ್ದೇವೆ. ಹೇಗೆಂದರೆ ಕ್ರಿಸ್ತನ ಕಷ್ಟಗಳಲ್ಲಿ ನಾವು ಪಾಲುಗಾರರಾಗುವುದಾದರೆ ಆತನ ಮಹಿಮೆಯಲ್ಲಿಯೂ ಪಾಲುಗಾರರಾಗುವೆವು.

ಹಾಗೆಯೇ ಅಬ್ರಹಾಮನ ವಂಶದಲ್ಲಿ ಹುಟ್ಟಿದ ಮಾತ್ರಕ್ಕೆ ಅವರೆಲ್ಲರೂ ಮಕ್ಕಳೆಂದು ಎಣಿಸಲ್ಪಡುವುದಿಲ್ಲ. ಆದರೆ “ಇಸಾಕನಿಂದ ಹುಟ್ಟುವವರೇ ನಿನ್ನ ಸಂತತಿ ಅನ್ನಿಸಿಕೊಳ್ಳುವರು.” ಎಂದು ದೇವರು ಹೇಳಿದನು.

ನೀವು ಕ್ರಿಸ್ತನವರಾಗಿದ್ದರೆ ಅಬ್ರಹಾಮನ ವಂಶದವರಾಗಿ ಹಾಗೂ ದೇವರ ವಾಗ್ದಾನಕ್ಕನುಸಾರವಾಗಿ ಬಾಧ್ಯರೂ ಆಗಿದ್ದೀರಿ.