ನೀನಂತೂ ಸಮಾಧಾನದೊಡನೆ ಪೂರ್ವಿಕರ ಬಳಿಗೆ ಸೇರುವಿ, ಬಹಳ ವೃದ್ಧನಾಗಿ ಉತ್ತರಕ್ರಿಯೆಯನ್ನು ಹೊಂದುವಿ.
TSK
TSK · ಆದಿಕಾಂಡ 25:8
مراجع Treasury of Scripture Knowledge في ಕನ್ನಡ IRV.
¶ ಇಷ್ಮಾಯೇಲನು ನೂರಮೂವತ್ತೇಳು ವರ್ಷ ಬದುಕಿದನು. ನಂತರ ಅವನು ಪ್ರಾಣ ಬಿಟ್ಟು ತನ್ನ ಪೂರ್ವಿಕರ ಬಳಿಗೆ ಸೇರಿದನು.
¶ ಇಸಾಕನು ದಿನತುಂಬಿದ ಮುದುಕನಾಗಿದ್ದು ನೂರ ಎಂಭತ್ತನೆಯ ವರ್ಷದಲ್ಲಿ ಪ್ರಾಣಬಿಟ್ಟು ತನ್ನ ಪೂರ್ವಿಕರ ಬಳಿಗೆ ಸೇರಿದನು.
ಫರೋಹನು, “ನಿನಗೆ ಈಗ ಎಷ್ಟು ವರ್ಷ?” ಎಂದು ಕೇಳಿದನು.
¶ ಯಾಕೋಬನು ತನ್ನ ಮಕ್ಕಳಿಗೆ ಅಪ್ಪಣೆ ಕೊಡುವುದನ್ನು ಮುಗಿಸಿದ ನಂತರ ಹಾಸಿಗೆಯ ಮೇಲೆ ತನ್ನ ಕಾಲುಗಳನ್ನು ಮಡಚಿಕೊಂಡು ಪ್ರಾಣಬಿಟ್ಟು ಪೂರ್ವಿಕರ ಬಳಿಗೆ ಸೇರಿದನು.
“ಆರೋನನು ತನ್ನ ಪೂರ್ವಿಕರ ಬಳಿಗೆ ಸೇರುವನು. ನೀವಿಬ್ಬರೂ ಮೆರೀಬಾ ಪ್ರವಾಹದ ಹತ್ತಿರ ನನ್ನ ಮಾತಿಗೆ ವಿರುದ್ಧವಾಗಿ ತಿರುಗಿಬಿದ್ದುದರಿಂದ ನಾನು ಇಸ್ರಾಯೇಲರಿಗೆ ವಾಗ್ದಾನಮಾಡಿದ ದೇಶದೊಳಗೆ ಆರೋನನು ಸೇರಬಾರದು.
ಅವನ ಕಾಲದವರೆಲ್ಲರೂ ಪೂರ್ವಿಕರ ಬಳಿಗೆ ಸೇರಿದರು. ಆನಂತರ ಯೆಹೋವನನ್ನೂ, ಆತನು ಇಸ್ರಾಯೇಲರಿಗೋಸ್ಕರ ಮಾಡಿದ ಮಹತ್ಕಾರ್ಯಗಳನ್ನೂ ಅರಿಯದಿದ್ದ ಬೇರೊಂದು ಸಂತಾನವು ಹುಟ್ಟಿತು.
¶ ದಾವೀದನು ವಯೋವೃದ್ಧನಾಗಿ ತನ್ನ ಜೀವಮಾನದ ಕೊನೆಯ ದಿನಗಳಲ್ಲಿ ತನ್ನ ಮಗನಾದ ಸೊಲೊಮೋನನನ್ನು ಇಸ್ರಾಯೇಲರ ಅರಸನನ್ನಾಗಿ ನೇಮಿಸಿದನು.
¶ ಯೆಹೋಯಾದನು ಮುಪ್ಪಿನ ಮುದುಕನಾಗಿ ಮರಣ ಹೊಂದಿದನು; ಅವನು ಸಾಯುವಾಗ ನೂರಮೂವತ್ತು ವರ್ಷದವನಾಗಿದ್ದನು.
ಸಾಗರಕ್ಕೆ ನರೆ ಬಂತೋ ಎಂಬಂತೆ ತಾನು ಬಂದ ದಾರಿಯನ್ನು ಶುಭ್ರಗೊಳಿಸುವುದು.
ಯುವಕರಿಗೆ ಬಲವು ಭೂಷಣ, ಮುದುಕರಿಗೆ ನರೆಯು ಒಡವೆ.
ಈ ಮಾತುಗಳನ್ನು ಅನನೀಯನು ಕೇಳಿದ ತಕ್ಷಣವೇ ಬಿದ್ದು ಪ್ರಾಣಬಿಟ್ಟನು; ಕೇಳಿದವರೆಲ್ಲರಿಗೂ ಮಹಾ ಭಯ ಉಂಟಾಯಿತು.
ಆ ಘನತೆಯನ್ನು ಅವನು ದೇವರಿಗೆ ಸಲ್ಲಿಸದೆ, ಹೋದುದರಿಂದ ಕರ್ತನ ದೂತನು ಆ ಕ್ಷಣದಲ್ಲೇ ಅವನನ್ನು ಬಡಿದನು; ಅವನು ಹುಳಬಿದ್ದು ಸತ್ತನು.