TSK

TSK · ಆದಿಕಾಂಡ 26:31

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಮಾರನೆಯ ದಿನ ಬೆಳಗ್ಗೆ ಅಬ್ರಹಾಮನು ಎದ್ದು, ಹಾಗರಳಿಗೆ ಬುತ್ತಿಯನ್ನೂ, ಒಂದು ತಿತ್ತಿ ತಣ್ಣೀರನ್ನೂ ಅವಳ ಹೆಗಲಿನ ಮೇಲೆ ಇಟ್ಟು, ಮಗುವನ್ನು ಒಪ್ಪಿಸಿ ಅವಳನ್ನು ಕಳುಹಿಸಿಬಿಟ್ಟನು. ಅವಳು ಹೊರಟು ಬೇರ್ಷೆಬದ ಕಾಡಿನಲ್ಲಿ ಅಲೆಯುತ್ತಿದ್ದಳು.

¶ ಆ ನಂತರ ಅಬ್ರಹಾಮನು ಕುರಿದನಗಳನ್ನು ಅಬೀಮೆಲೆಕನಿಗೆ ದಾನ ಮಾಡಿದನು.

ಅದರಂತೆ ಮುಂಜಾನೆಯೇ ಎದ್ದು ಅಬ್ರಹಾಮನು ಕತ್ತೆಗೆ ತಡಿ ಹಾಕಿಸಿ, ಯಜ್ಞಕ್ಕೆ ಬೇಕಾದ ಕಟ್ಟಿಗೆಯನ್ನು ಒಡೆಸಿ ಅದನ್ನು ತೆಗೆದುಕೊಂಡು ತನ್ನ ಸೇವಕರಲ್ಲಿ ಇಬ್ಬರನ್ನೂ, ತನ್ನ ಮಗನಾದ ಇಸಾಕನನ್ನೂ ಕರೆದುಕೊಂಡು ದೇವರು ಹೇಳಿದ ಸ್ಥಳಕ್ಕೆ ಹೊರಟನು.

ಆದುದರಿಂದ ನಾವಿಬ್ಬರು ಸೇರಿ ಒಂದು ಒಡಂಬಡಿಕೆಯನ್ನು ಮಾಡಿಕೊಳ್ಳೋಣ ಬಾ, ಅದು ನನಗೂ ನಿನಗೂ ಮಧ್ಯದಲ್ಲಿ ಸಾಕ್ಷಿಯಾಗಿರಲಿ” ಎಂದು ಹೇಳಿದನು.

¶ ಆ ದಿನ ಸೌಲನು ಇಸ್ರಾಯೇಲರನ್ನು ಕುರಿತು, “ಶತ್ರುಗಳಿಗೆ ಮುಯ್ಯಿತೀರಿಸುವುದಕ್ಕೋಸ್ಕರ ನಿಮ್ಮಲ್ಲಿ ಒಬ್ಬನಾದರೂ ಸಾಯಂಕಾಲದವರೆಗೆ ಊಟಮಾಡಬಾರದು; ಮಾಡಿದವನು ಶಾಪಗ್ರಸ್ತನಾಗಲಿ” ಎಂದು ಆಣೆಯಿಟ್ಟಿದ್ದರಿಂದ ಅಂದು ಅವರೆಲ್ಲರೂ ಬಹುವಾಗಿ ಬಳಲಿಹೋಗಿದ್ದರೂ ಒಬ್ಬನಾದರೂ ಆಹಾರ ಪಧಾರ್ಥವನ್ನು ರುಚಿಸಿ ನೋಡಿರಲಿಲ್ಲ.

ಅಗಲಿದರೆ ಯೆಹೋವನೇ ಶತ್ರುಗಳ ಕೈಯಿಂದ ದಾವೀದನಿಗೆ ಮುಯ್ಯಿ ತೀರಿಸಲಿ” ಎಂದು ಹೇಳಿ ಅವರ ಮನೆಯವರೊಡನೆ ಒಡಂಬಡಿಕೆ ಮಾಡಿಕೊಂಡು,

ಮನುಷ್ಯರು ತಮಗಿಂತಲೂ ಹೆಚ್ಚಿನವನ ಮೇಲೆ ಆಣೆಯಿಡುತ್ತಾರಷ್ಟೆ, ಆಣೆಯನ್ನು ದೃಢಪಡಿಸಿದ ಮೇಲೆ ವಿವಾದವು ಅಂತ್ಯವಾಗುವುದು.