¶ ಅದೇ ದಿನದಲ್ಲಿ ಅಬ್ರಹಾಮನು ತನ್ನ ಮಗನಾದ ಇಷ್ಮಾಯೇಲನಿಗೂ ತನ್ನ ಮನೆಯಲ್ಲಿದ್ದ ಎಲ್ಲಾ ಗಂಡಸರಿಗೂ, ಅಂದರೆ ಮನೆಯಲ್ಲಿ ಹುಟ್ಟಿದವರಿಗೆ ಮಾತ್ರವಲ್ಲದೆ, ತಾನು ಕ್ರಯಕ್ಕೆ ತೆಗೆದುಕೊಂಡವರಿಗೂ ದೇವರ ಅಪ್ಪಣೆಯಂತೆ ಸುನ್ನತಿಮಾಡಿಸಿದನು.
TSK
TSK · ಆದಿಕಾಂಡ 26:5
مراجع Treasury of Scripture Knowledge في ಕನ್ನಡ IRV.
“ನೀನು ನಿನ್ನ ಒಬ್ಬನೇ ಮಗನನ್ನು ಸಮರ್ಪಿಸುವುದಕ್ಕೆ ಹಿಂದೆಗೆಯದೆ ಹೋದುದರಿಂದ, ಯೆಹೋವನಾದ ನಾನು ನಿನಗೆ ಪ್ರಮಾಣವಾಗಿ ಹೇಳುವುದೇನಂದರೆ
ಯೆಹೋವನಿಗೆ ಸ್ತೋತ್ರ! ಯಾರು ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿ, ಆತನ ಆಜ್ಞೆಗಳಲ್ಲಿ ಅತ್ಯಾನಂದಪಡುವನೋ ಅವನೇ ಧನ್ಯನು.
‹ಆದುದರಿಂದ ಈ ಸಣ್ಣ ಆಜ್ಞೆಗಳಲ್ಲಿ ಒಂದನ್ನು ಮೀರಿ ನಡೆದು ಜನರಿಗೂ ಹಾಗೆ ಮಾಡುವುದಕ್ಕೆ ಬೋಧಿಸುವವನು ಪರಲೋಕ ರಾಜ್ಯದಲ್ಲಿ ಬಹಳ ಕನಿಷ್ಠನೆನ್ನಿಸಿಕೊಳ್ಳುವನು; ಆದರೆ ತಾನೇ ಸ್ವತಃ ಆ ಆಜ್ಞೆಗಳಂತೆ ನಡೆದುಕೊಂಡು ಜನರಿಗೂ ಹಾಗೆ ನಡೆಯಬೇಕೆಂದು ಬೋಧಿಸುವವನು ಪರಲೋಕ ರಾಜ್ಯದಲ್ಲಿ ಶ್ರೇಷ್ಠನೆನಿಸಿಕೊಳ್ಳುವನು.›
ಆದ್ದರಿಂದ, ನನ್ನ ಸಹೋದರರೇ, ಸ್ಥಿರಚಿತ್ತರಾಗಿಯೂ, ನಿಶ್ಚಲರಾಗಿರಿ. ಯಾಕೆಂದರೆ ನೀವು ಕರ್ತನ ಸೇವೆಯಲ್ಲಿ ಪಡುವ ಪ್ರಯಾಸವು ನಿಷ್ಫಲವಾಗುವುದಿಲ್ಲ. ಅದನ್ನು ತಿಳಿದು ಕರ್ತನ ಕೆಲಸವನ್ನು ಸದಾ ಅತ್ಯಾಸಕ್ತಿಯಿಂದಲೂ ಮತ್ತು ನಿರಂತರ ಶ್ರದ್ಧೆಯುಳ್ಳವರಾಗಿಯೂ ಮಾಡುವವರಾಗಿರಿ.
¶ ನಂಬಿಕೆಯಿಂದಲೇ ಅಬ್ರಹಾಮನು ಕರೆಯಲ್ಪಟ್ಟಾಗ ವಿಧೇಯನಾಗಿ ತಾನು ಬಾಧ್ಯವಾಗಿ ಹೊಂದಬೇಕಾಗಿದ್ದ ಸ್ಥಳಕ್ಕೆ ಹೊರಟು ಹೋದನು. ತಾನು ಹೋಗುವುದು ಎಲ್ಲಿಗೆ ಎಂದು ತಿಳಿಯದೆ ಹೊರಟನು.