ಮತ್ತು ರೆಬೆಕ್ಕಳಿಗೆ, “ತಂಗಿ, ನಿನ್ನಿಂದ ಸಾವಿರ, ಹತ್ತು ಸಾವಿರ ಸಂತಾನವಾಗಲಿ; ನಿನ್ನ ಸಂತಾನದವರು ತಮ್ಮ ವೈರಿಗಳ ಸ್ವತ್ತನ್ನು ಸ್ವಾಧೀನಮಾಡಿಕೊಳ್ಳಲಿ” ಎಂದು ಹೇಳಿ ಹರಸಿದರು.
TSK
TSK · ಆದಿಕಾಂಡ 27:4
مراجع Treasury of Scripture Knowledge في ಕನ್ನಡ IRV.
¶ ಅವನು ಹೋಗಿ ಅವುಗಳನ್ನು ತಂದು ತಾಯಿಗೆ ಕೊಟ್ಟನು. ರೆಬೆಕ್ಕಳು ಅವನ ತಂದೆಗೆ ಇಷ್ಟವಾಗಿದ್ದ ಸವಿಯೂಟವನ್ನು ಸಿದ್ಧಪಡಿಸಿದಳು.
¶ ಇಸಾಕನು, “ಆ ಪದಾರ್ಥವನ್ನು ಹತ್ತಿರಕ್ಕೆ ತೆಗೆದುಕೊಂಡು ಬಾ; ನೀನು ತಂದ ಬೇಟೆ ಮಾಂಸವನ್ನು ನಾನು ಊಟಮಾಡಿದ ಮೇಲೆ ನಿನ್ನನ್ನು ಆಶೀರ್ವದಿಸುವೆನು” ಎಂದು ಹೇಳಿದನು. ಯಾಕೋಬನು ಅದನ್ನು ಅವನ ಹತ್ತಿರಕ್ಕೆ ತೆಗೆದುಕೊಂಡು ಬರಲು ಅವನು ತಿಂದನು; ದ್ರಾಕ್ಷಾರಸವನ್ನು ಕುಡಿದನು.
ಅವನೂ ಸವಿಯೂಟವನ್ನು ಸಿದ್ಧಮಾಡಿ ತನ್ನ ತಂದೆಯ ಬಳಿಗೆ ತಂದು ಅವನಿಗೆ, “ಅಪ್ಪಾ, ನೀನು ಎದ್ದು ನಿನ್ನ ಮಗನಾದ ನಾನು ಬೇಟೆಯಿಂದ ತಂದಿರುವ ಮಾಂಸವನ್ನು ಊಟಮಾಡಿ ನನ್ನನ್ನು ಆಶೀರ್ವದಿಸು” ಎಂದು ಹೇಳಿದನು.
¶ ಯೋಸೇಫನು ತನ್ನ ತಂದೆಗೆ, “ಇವರು ಈ ದೇಶದಲ್ಲಿ ನನಗೆ ದೇವರು ಅನುಗ್ರಹಿಸಿದ ಮಕ್ಕಳು” ಎಂದು ಹೇಳಿದನು. ಅದಕ್ಕವನು, “ನಾನು ಇವರನ್ನು ಆಶೀರ್ವದಿಸುತ್ತೇನೆ. ನನ್ನ ಹತ್ತಿರ ಕರೆದುಕೊಂಡು ಬಾ” ಎಂದನು.
ಇವರೆಲ್ಲರೂ ಇಸ್ರಾಯೇಲನಿಂದುಂಟಾದ ಹನ್ನೆರಡು ಕುಲಗಳು. ಅವರ ತಂದೆ ಅವರನ್ನು ಆಶೀರ್ವದಿಸಿ ಹೇಳಿದ ನುಡಿಗಳು ಇವುಗಳೇ. ಅವನು ಪ್ರತಿಯೊಬ್ಬನಿಗೂ ಅವನವನಿಗೆ ತಕ್ಕ ಆಶೀರ್ವಾದದ ಪ್ರಕಾರ ಆಶೀರ್ವಚನಗಳನ್ನು ನುಡಿದನು.
¶ ದೇವಪುರುಷನಾದ ಮೋಶೆ ದೇಹವನ್ನು ಬಿಡುವುದಕ್ಕಿಂತ ಮುಂಚೆ ಇಸ್ರಾಯೇಲರ ವಿಷಯವಾಗಿ ಹೇಳಿದ ಆಶೀರ್ವಾದವು:
ಅವರನ್ನು ಆಶೀರ್ವದಿಸಿ ಕಳುಹಿಸಿದನು. ಅವರು ತಮ್ಮ ನಿವಾಸಗಳಿಗೆ ಹೋದರು.
ಆಶೀರ್ವದಿಸುತ್ತಿರುವಾಗ ಆತನು ಅವರನ್ನು ಬಿಟ್ಟು ಪರಲೋಕಕ್ಕೆ ಒಯ್ಯಲ್ಪಟ್ಟನು.