TSK

TSK · ಆದಿಕಾಂಡ 27:41

مراجع Treasury of Scripture Knowledge في ಕನ್ನಡ IRV.

العودة إلى المقطع

¶ ತರುವಾಯ ಆ ಸೇವಕರು ಯಾಕೋಬನ ಬಳಿಗೆ ಹಿಂತಿರುಗಿ ಬಂದು, “ನಾವು ನಿನ್ನ ಅಣ್ಣನಾದ ಏಸಾವನ ಹತ್ತಿರಕ್ಕೆ ಹೋಗಿ ಬಂದಿದ್ದೇವೆ, ಅವನು ನಾನೂರು ಜನರ ಸಮೇತ ನಿನ್ನನ್ನು ಎದುರುಗೊಳ್ಳುವುದಕ್ಕೆ ಬರುತ್ತಾನೆ” ಎಂದು ಹೇಳಿದಾಗ,

¶ ಇಸಾಕನ ಮಕ್ಕಳಾದ ಏಸಾವ, ಯಾಕೋಬರು ಅವನನ್ನು ಸಮಾಧಿಮಾಡಿದರು.

¶ ಅದಕ್ಕೆ ಅವನ ಅಣ್ಣಂದಿರು ಅವನಿಗೆ, “ನೀನು ನಿಜವಾಗಿ ನಮ್ಮನ್ನು ಆಳುವಿಯಾ? ನೀನು ನಮ್ಮ ಮೇಲೆ ದೊರೆತನ ಮಾಡುವಿಯಾ?” ಎಂದು ಹೇಳಿ ಅವನ ಕನಸುಗಳಿಗಾಗಿಯೂ, ಅದನ್ನು ಅವನು ಅವರಿಗೆ ತಿಳಿಸಿದ್ದಕ್ಕಾಗಿಯು ಮತ್ತಷ್ಟು ಅವನನ್ನು ದ್ವೇಷಿಸಿದರು.

ನಲ್ವತ್ತು ದಿನಗಳು ಸುಗಂಧದ್ರವ್ಯಗಳನ್ನು ತುಂಬುವ ಪದ್ಧತಿಯಿರುವುದರಿಂದ ಅಷ್ಟು ದಿನ ಸಿದ್ಧಪಡಿಸುತ್ತಾ ಇದ್ದರು. ಐಗುಪ್ತರು ಅವನಿಗೋಸ್ಕರ ಎಪ್ಪತ್ತು ದಿನ ಶೋಕಾಚರಣೆಯಲ್ಲಿದ್ದರು.

¶ ಯೋಸೇಫನ ಅಣ್ಣತಮ್ಮಂದಿರು ತಂದೆ ಸತ್ತದ್ದನ್ನು ಕಂಡು, “ಒಂದು ವೇಳೆ ಯೋಸೇಫನು ನಮ್ಮನ್ನು ದ್ವೇಷಿಸಿ ನಾವು ಅವನಿಗೆ ಮಾಡಿದ ಎಲ್ಲಾ ಕೇಡಿಗೆ ಪ್ರತಿಯಾಗಿ ನಮಗೆ ಶಿಕ್ಷೆಯನ್ನು ಕೊಡಬಹುದು” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.

ಇದಕ್ಕೆ ಮೊದಲೇ ಅಬ್ಷಾಲೋಮನು ತನ್ನ ಆಳುಗಳಿಗೆ, “ಕೇಳಿರಿ, ಅಮ್ನೋನನು ದ್ರಾಕ್ಷಾರಸ ಕುಡಿದು ಮತ್ತನಾಗಿರುವಾಗ ನಾನು ಹೊಡೆಯಬೇಕೆಂದು ಹೇಳಿದ ಕೂಡಲೆ ಅವನನ್ನು ಹೊಡೆದು ಕೊಂದುಹಾಕಿರಿ. ಹೆದರಬೇಡಿರಿ, ನಿಮಗೆ ಆಜ್ಞಾಪಿಸಿದವನು ನಾನಲ್ಲವೇ? ಧೈರ್ಯದಿಂದಿರಿ ಮತ್ತು ಶೂರರಾಗಿರಿ” ಎಂದು ಹೇಳಿದನು.

ಅಸ್ವಸ್ಥನಾದವನನ್ನು ಸ್ನೇಹಿತನೋ, ಅಣ್ಣನೋ ಎಂದು ಭಾವಿಸಿ ನಡೆದುಕೊಂಡೆನು; ತಾಯಿ ಸತ್ತದ್ದಕ್ಕಾಗಿ ದುಃಖಿಸುವವನಂತೆ ನಾನು ತಲೆಬಾಗಿ ಅಳುತ್ತಿದ್ದೆನು.

ನನ್ನ ಆತ್ಮವು ಕುಂದಿಹೋದಾಗ, ನೀನು ನನ್ನ ಮಾರ್ಗವನ್ನು ಬಲ್ಲವನಾಗಿರುತ್ತಿ, ನಾನು ಹೋಗಬೇಕಾದ ದಾರಿಯಲ್ಲಿ ಅವರು ಉರುಲನ್ನೊಡ್ಡಿದ್ದಾರೆ.

ಅವರ ಕಾಲುಗಳು ಕೇಡನ್ನು ಹಿಂಬಾಲಿಸಿ ಓಡುವವು, ಅವರು ರಕ್ತವನ್ನು ಸುರಿಸಲು ಆತುರಪಡುವರು.

ಬಲವಾದ ಪಟ್ಟಣವನ್ನು ಗೆಲ್ಲುವುದಕ್ಕಿಂತ ಅನ್ಯಾಯಹೊಂದಿದ ಸಹೋದರನನ್ನು ಗೆಲ್ಲುವುದು ಅಸಾಧ್ಯ, ಕೋಟೆಯ ಅಗುಳಿಗಳಂತೆ ಜಗಳಗಳು ಜನರನ್ನು ಅಗಲಿಸುತ್ತವೆ.

¶ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಎದೋಮು ಯೆಹೂದ ವಂಶಕ್ಕೆ ಪ್ರತಿಕಾರಮಾಡಿದೆ; ಮುಯ್ಯಿಗೆ ಮುಯ್ಯಿ ತೀರಿಸಿ ಮಹಾಪರಾಧವನ್ನು ನಡೆಸಿದೆ.”

ಯೆಹೋವನು ಇಂತೆನ್ನುತ್ತಾನೆ: “ಎದೋಮ್ ಬಹಳ ದ್ರೋಹಗಳನ್ನು ಮಾಡಿದ್ದರಿಂದ, ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅವನು ಕತ್ತಿ ಹಿಡಿದು ತನ್ನ ಸಹೋದರರನ್ನು ಹಿಂದಟ್ಟಿದನು, ಕರುಣೆಯನ್ನು ತೋರಿಸಲಿಲ್ಲ. ರೋಷವನ್ನು ಸಾಧಿಸಿದ್ದಾರೆ. ಇದರಿಂದ ಅವನ ಕೋಪವು ಸದಾ ಹರಿಯುತ್ತಿತ್ತು, ಆತನು ರೌದ್ರವನ್ನು ನಿರಂತರವಾಗಿ ಇಟ್ಟುಕೊಂಡನು.

“ಕೋಪಗೊಳ್ಳಬೇಕಾಗಿ ಬಂದರೂ ಪಾಪಮಾಡಬೇಡಿರಿ,” ಸೂರ್ಯನು ಮುಳುಗುವುದಕ್ಕಿಂತ ಮೊದಲೇ ನಿಮ್ಮ ಸಿಟ್ಟು ತೀರಿಹೋಗಲಿ.

ಏಕೆಂದರೆ ನಾವು ಸಹ, ಮೊದಲು ಅವಿವೇಕಿಗಳೂ, ಅವಿಧೇಯರೂ, ಮೋಸಹೋದವರೂ, ನಾನಾ ವಿಧವಾದ ದುರಾಶೆಗಳಿಗೆ ಮತ್ತು ಭೋಗಗಳಿಗೆ ಅಧೀನರೂ, ಕೆಟ್ಟತನ, ಹೊಟ್ಟೆಕಿಚ್ಚುಗಳಲ್ಲಿ ಕಾಲಕಳೆಯುವವರೂ, ಅಸಹ್ಯರೂ, ಒಬ್ಬರನ್ನೊಬ್ಬರು ಹಗೆಮಾಡುವವರೂ ಆಗಿದ್ದೆವು.