ಬೆತೂವೇಲನು ರೆಬೆಕ್ಕಳನ್ನು ಪಡೆದನು. ಈ ಎಂಟು ಮಂದಿಯನ್ನು ಮಿಲ್ಕಳು ಅಬ್ರಹಾಮನ ತಮ್ಮನಾದ ನಾಹೋರನಿಂದ ಪಡೆದಳು.
TSK
TSK · ಆದಿಕಾಂಡ 28:2
مراجع Treasury of Scripture Knowledge في ಕನ್ನಡ IRV.
¶ ತರುವಾಯ ಆ ಸೇವಕನು ತನ್ನ ದಣಿಯ ಒಂಟೆಗಳಲ್ಲಿ ಹತ್ತು ಒಂಟೆಗಳನ್ನು ಸಿದ್ಧಮಾಡಿ, ದಣಿಯ ಬಳಿಯಿದ್ದ ಶ್ರೇಷ್ಠವಾದ ಒಡವೆಗಳನ್ನು ತನ್ನ ವಶಕ್ಕೆ ತೆಗೆದುಕೊಂಡು ಹೊರಟು, ಅರಾಮ್ ನಾಹಾರಾಯಿಮ್ ಸೀಮೆಗೆ ಸೇರಿದ ನಾಹೋರನು ವಾಸಿಸಿದ ಊರನ್ನು ಮುಟ್ಟಿದನು.
ರೆಬೆಕ್ಕಳಿಗೆ ಲಾಬಾನನೆಂಬ ಅಣ್ಣನಿದ್ದನು. ಅವನು ಬುಗ್ಗೆಯ ಹತ್ತಿರ ಒಂಟೆಗಳ ಬಳಿಯಲ್ಲಿ ನಿಂತಿದ್ದ ಆ ಮನುಷ್ಯನ ಬಳಿಗೆ ಓಡಿಬಂದನು.
ಅಬ್ರಹಾಮನು ಇಸಾಕನನ್ನು ಪಡೆದನು. ಇಸಾಕನು ನಲವತ್ತು ವರ್ಷದವನಾದಾಗ ಅರಾಮ್ಯನಾದ ಬೆತೂವೇಲನ ಮಗಳೂ ಅರಾಮ್ಯನಾದ ಲಾಬಾನನ ತಂಗಿಯೂ ಆಗಿದ್ದ ರೆಬೆಕ್ಕಳನ್ನು ಪದ್ದನ್ ಅರಾಮಿನಿಂದ ಕರೆದುತಂದು ಹೆಂಡತಿಯನ್ನಾಗಿ ಮಾಡಿಕೊಂಡನು.
¶ ಆಗ ಯಾಕೋಬನು ಪ್ರಯಾಣ ಮಾಡಿ ಪೂರ್ವ ದಿಕ್ಕಿನ ಜನರ ಸೀಮೆಗೆ ಬಂದನು.
ನೀನು ನಿನ್ನ ದಾಸನಾದ ನನ್ನ ಮೇಲೆ ಎಷ್ಟೋ ನಂಬಿಕೆಯನ್ನಿಟ್ಟು ನಿನ್ನ ವಾಗ್ದಾನವನ್ನು ನೆರವೇರಿಸಿದ್ದೀಯಲ್ಲಾ. ನಾನು ಅದಕ್ಕೆ ಕೇವಲ ಅಯೋಗ್ಯನು. ನಾನು ಮೊದಲು ಈ ಯೊರ್ದನ್ ನದಿಯನ್ನು ದಾಟಿದಾಗ ನನ್ನ ಬಳಿಯಲ್ಲಿ ಒಂದು ಕೋಲು ಮಾತ್ರವೇ ಇತ್ತು. ಈಗ ಎರಡು ಗುಂಪುಗಳಿಗೆ ಒಡೆಯನಾಗಿದ್ದೇನೆ.
ಇವರೆಲ್ಲರು ಲೇಯಳ ಸಂತತಿಯವರು. ಆಕೆಯು ಯಾಕೋಬನಿಗೆ ಇವರನ್ನೂ, ದೀನಳೆಂಬ ಹೆಣ್ಣು ಮಗಳನ್ನೂ ಪದ್ದನ್ ಅರಾಮಿನಲ್ಲಿ ಪಡೆದಳು. ಆಕೆಯಿಂದ ಹುಟ್ಟಿದ ಗಂಡು ಹೆಣ್ಣು ಮಕ್ಕಳು ಮೂವತ್ತು ಮೂರು ಮಂದಿ.
ಯೆಹೋವನು ಇಸ್ರಾಯೇಲನ್ನು ಪ್ರವಾದಿಯ ಮುಖಾಂತರ ಐಗುಪ್ತದೊಳಗಿಂದ ಪಾರುಮಾಡಿದನು; ಪ್ರವಾದಿಯ ಮೂಲಕ ಅದು ರಕ್ಷಿಸಲ್ಪಟ್ಟಿತು.