TSK

TSK · ಆದಿಕಾಂಡ 28:22

مراجع Treasury of Scripture Knowledge في ಕನ್ನಡ IRV.

العودة إلى المقطع

ಪರಾತ್ಪರನಾದ ದೇವರು ನಿನ್ನ ಶತ್ರುಗಳನ್ನು ನಿನ್ನ ಕೈಗೆ ಒಪ್ಪಿಸಿದ್ದಕ್ಕಾಗಿ ಆತನಿಗೆ ಸ್ತೋತ್ರ” ಎಂದು ಹೇಳಿದನು. ಅಬ್ರಾಮನು ತಾನು ಗೆದ್ದು ತಂದಿದ್ದ ಎಲ್ಲಾ ವಸ್ತುಗಳಲ್ಲಿ ಹತ್ತನೆಯ ಒಂದು ಭಾಗವನ್ನು ಯಾಜಕನಿಗೆ ಕೊಟ್ಟನು.

ಅವನು ಭಯಪಟ್ಟವನಾಗಿ, “ಈ ಸ್ಥಳವು ಪವಿತ್ರವಾದ್ದದು. ಇದು ದೇವರ ಮನೆಯೇ ಹೊರತು ಬೇರೆಯಲ್ಲ, ಇದು ಪರಲೋಕದ ಬಾಗಿಲು” ಎಂದನು.

¶ ದೇವರು ಯಾಕೋಬನಿಗೆ, “ನೀನು ಈ ಸ್ಥಳವನ್ನು ಬಿಟ್ಟು ಗಟ್ಟಾ ಹತ್ತಿ ಬೇತೇಲಿಗೆ ಹೋಗಿ ಅಲ್ಲಿ ವಾಸಮಾಡು. ನೀನು ನಿನ್ನ ಅಣ್ಣನಾದ ಏಸಾವನ ಬಳಿಯಿಂದ ಓಡಿ ಹೋದ ಕಾಲದಲ್ಲಿ ದೇವರು ಅಲ್ಲಿ ನಿನಗೆ ದರ್ಶನಕೊಟ್ಟನಲ್ಲಾ, ಆತನಿಗಾಗಿ ಯಜ್ಞವೇದಿಯನ್ನು ಕಟ್ಟಿಸು” ಎಂದು ಹೇಳಿದನು.

¶ ಯಾಕೋಬನು ತನ್ನ ಸಂಗಡ ದೇವರು ಮಾತನಾಡಿದ ಸ್ಥಳದಲ್ಲಿ ಕಲ್ಲಿನ ಸ್ತಂಭವನ್ನು ನಿಲ್ಲಿಸಿ ಅದರ ಮೇಲೆ ಪಾನಕಾಭಿಷೇಕಮಾಡಿ ಎಣ್ಣೆಯನ್ನು ಹೊಯ್ದನು.

¶ ಬೆಳೆಯಲ್ಲಿ ಐದನೆಯ ಒಂದು ಪಾಲು ಫರೋಹನಿಗೆ ಸಲ್ಲಬೇಕೆಂಬುದನ್ನು ಯೋಸೇಫನು ಐಗುಪ್ತ ದೇಶದಲ್ಲಿ ಕಟ್ಟಳೆಯಾಗಿ ಮಾಡಿದನು. ಈ ದಿನದ ವರೆಗೂ ಅದು ಹಾಗೆಯೇ ಇದೆ. ಪುರೋಹಿತರ ಭೂಮಿ ಮಾತ್ರ ಫರೋಹನಿಗೆ ಸ್ವಾಧೀನವಾಗಲಿಲ್ಲ.

ದನಗಳಾಗಲಿ ಇಲ್ಲವೇ ಹಿಂಡಿನ ಆಡು ಅಥವಾ ಕುರಿಗಳಾಗಲಿ ಕುರುಬನು ಲೆಕ್ಕಮಾಡಿದ ಎಲ್ಲಾ ಪಶುಗಳಲ್ಲಿ ಪ್ರತಿ ಹತ್ತನೆಯದು ಯೆಹೋವನಿಗೆ ಮೀಸಲಾಗಿರಬೇಕು.

ನನ್ನ ಆಲಯವು ಆಹಾರದ ಕೊರತೆಯಿಲ್ಲದಂತೆ ನೀವು ದಶಮಾಂಶವನ್ನು ಯಾವಾಗಲೂ ಭಂಡಾರಕ್ಕೆ ತೆಗೆದುಕೊಂಡು ಬನ್ನಿರಿ; ನಾನು ಪರಲೋಕದ ದ್ವಾರಗಳನ್ನು ತೆರೆದು ನಿಮ್ಮಲ್ಲಿ ಸ್ಥಳಹಿಡಿಯಲಾಗದಷ್ಟು ಸುವರಗಳನ್ನು ಸುರಿಯುವೆನೋ ಇಲ್ಲವೋ ಎಂದು ಯೆಹೋವನಾದ ನನ್ನನ್ನು ಹೀಗೆ ಪರೀಕ್ಷಿಸಿರಿ.