ಆದಿಕಾಂಡ 24:29
TSK
ರೆಬೆಕ್ಕಳಿಗೆ ಲಾಬಾನನೆಂಬ ಅಣ್ಣನಿದ್ದನು. ಅವನು ಬುಗ್ಗೆಯ ಹತ್ತಿರ ಒಂಟೆಗಳ ಬಳಿಯಲ್ಲಿ ನಿಂತಿದ್ದ ಆ ಮನುಷ್ಯನ ಬಳಿಗೆ ಓಡಿಬಂದನು.
TSK
مراجع Treasury of Scripture Knowledge في ಕನ್ನಡ IRV.
ರೆಬೆಕ್ಕಳಿಗೆ ಲಾಬಾನನೆಂಬ ಅಣ್ಣನಿದ್ದನು. ಅವನು ಬುಗ್ಗೆಯ ಹತ್ತಿರ ಒಂಟೆಗಳ ಬಳಿಯಲ್ಲಿ ನಿಂತಿದ್ದ ಆ ಮನುಷ್ಯನ ಬಳಿಗೆ ಓಡಿಬಂದನು.
ಇದಲ್ಲದೆ ಅವನು ತನ್ನ ಅಣ್ಣಂದಿರಲ್ಲಿ ಪ್ರತಿಯೊಬ್ಬನಿಗೂ ಮುದ್ದಿಟ್ಟು ಅವರನ್ನು ಅಪ್ಪಿಕೊಂಡು ಅತ್ತನು. ತರುವಾಯ ಅವರು ಅವನ ಸಂಗಡ ಮಾತನಾಡಿದರು.
ಮೋಶೆಯು ತನ್ನ ಮಾವನನ್ನು ಎದುರುಗೊಳ್ಳುವುದಕ್ಕೆ ಹೊರಟು ಆತನನ್ನು ವಂದಿಸಿ ಮುದ್ದಿಟ್ಟನು. ಅವರು ಪರಸ್ಪರ ಯೋಗಕ್ಷೇಮವನ್ನು ವಿಚಾರಿಸಿದ ಮೇಲೆ ಡೇರೆಯೊಳಗೆ ಹೋದರು.
‹ನೀನು ನನಗೆ ಮುದ್ದಿಡಲಿಲ್ಲ; ಇವಳಾದರೋ ನಾನು ಒಳಗೆ ಬಂದಾಗಿನಿಂದ ನನ್ನ ಕಾಲಿಗೆ ಮುದ್ದಿಡುವುದನ್ನು ಬಿಟ್ಟಿಲ್ಲ.›
ಪವಿತ್ರವಾದ ಮುದ್ದಿಟ್ಟು ಒಬ್ಬರನ್ನೊಬ್ಬರು ವಂದಿಸಿರಿ. ಕ್ರಿಸ್ತನ ಸಭೆಗಳಲ್ಲಿರುವವರೆಲ್ಲರೂ ನಿಮ್ಮನ್ನು ವಂದಿಸುತ್ತಿದ್ದಾರೆ.