TSK

TSK · ಆದಿಕಾಂಡ 29:25

مراجع Treasury of Scripture Knowledge في ಕನ್ನಡ IRV.

العودة إلى المقطع

¶ “ನಿನ್ನ ತಮ್ಮನು ಮೋಸದಿಂದ ಬಂದು ನಿನಗಾಗಬೇಕಾಗಿದ್ದ ಆಶೀರ್ವಾದವನ್ನು ಪಡೆದುಕೊಂಡನು” ಎಂದನು.

ಲಾಬಾನನು ಯಾಕೋಬನಿಗೆ, “ಇದೇನು ನೀನು ಮಾಡಿದ್ದು? ನೀನು ನನ್ನ ಹೆಣ್ಣುಮಕ್ಕಳನ್ನು ಯುದ್ಧದಲ್ಲಿ ಸೆರೆಹಿಡಿದವರಂತೆ ತೆಗೆದುಕೊಂಡು ನನಗೆ ಏನೂ ಹೇಳದೆ ಹೊರಟುಬಂದೆಯಲ್ಲಾ.

ಶಿಷ್ಟನು ಭೂಮಿಯಲ್ಲಿ ತನ್ನ ಕ್ರಿಯಾಫಲವನ್ನು ಅನುಭವಿಸುವಲ್ಲಿ, ದುಷ್ಟನೂ, ಪಾಪಿಯೂ ದಂಡನೆಯನ್ನು ಅನುಭವಿಸುವರು ಎಂದು ಹೇಳಬೇಕಾಗಿಲ್ಲ.

‹ಅಂತು ಜನರು ನಿಮಗೆ ಏನೇನು ಮಾಡಬೇಕೆಂದು ಅಪೇಕ್ಷಿಸುತ್ತೀರೋ ಅದನ್ನೇ ನೀವು ಅವರಿಗೆ ಮಾಡಿರಿ. ಧರ್ಮಶಾಸ್ತ್ರದ ಮತ್ತು ಪ್ರವಾದಿಗಳ ತಾತ್ಪರ್ಯ ಇದೇ ಆಗಿದೆ.›

ಅವನವನ ಕೆಲಸವು ಪ್ರಕಟವಾಗುವುದು. ಕ್ರಿಸ್ತನು ಬರುವ ದಿನವು ಬೆಂಕಿಯೊಡನೆ ಉದಯವಾಗಿ ಆ ಕೆಲಸವನ್ನು ಸ್ಪಷ್ಟವಾಗಿ ತೋರಿಸುವುದು. ಅವನವನ ಕೆಲಸವೆಂಥದೆಂಬುದನ್ನು ಆ ಬೆಂಕಿ ಶೋಧಿಸುವುದು.