ಈ ಪ್ರಕಾರ ಯಾಕೋಬನು ರಾಹೇಲಳಿಗೋಸ್ಕರ ಏಳು ವರ್ಷ ಸೇವೆ ಮಾಡಿದನು. ಅವನು ಆಕೆಯನ್ನು ಬಹಳವಾಗಿ ಪ್ರೀತಿಸಿದ್ದರಿಂದ ಅದು ಅವನಿಗೆ ಸ್ವಲ್ಪ ಕಾಲದಂತೆ ಕಾಣಿಸಿತು.
TSK
TSK · ಆದಿಕಾಂಡ 29:30
مراجع Treasury of Scripture Knowledge في ಕನ್ನಡ IRV.
¶ ರಾಹೇಲಳು ಯೋಸೇಫನನ್ನು ಹೆತ್ತ ನಂತರ ಯಾಕೋಬನು ಲಾಬಾನನಿಗೆ, “ನಾನು ನನ್ನ ದೇಶದಲ್ಲಿರುವ ಸ್ವಂತ ಊರಿಗೆ ಹೋಗಲು ನನಗೆ ಅಪ್ಪಣೆಯಾಗಬೇಕು.
ಇಪ್ಪತ್ತು ವರ್ಷ ನಿನ್ನ ಮನೆಯಲ್ಲಿದ್ದೆನು. ನಿನ್ನ ಇಬ್ಬರು ಹೆಣ್ಣು ಮಕ್ಕಳಿಗೋಸ್ಕರ ಹದಿನಾಲ್ಕು ವರ್ಷವೂ ನಿನ್ನ ಆಡು ಕುರಿಗಳಿಗೋಸ್ಕರ ಆರು ವರ್ಷವೂ ಸೇವೆಮಾಡಿದೆನು. ಆದರೆ ನೀನು ನನ್ನ ಸಂಬಳವನ್ನು ಹತ್ತು ಸಾರಿ ಬದಲಾಯಿಸಿದೆ.
ಅದಕ್ಕೆ ನಿನ್ನ ಸೇವಕನಾದ, ನಮ್ಮ ತಂದೆಯು, ‘ನನ್ನ ಪತ್ನಿಯಲ್ಲಿ ನನಗೆ ಇಬ್ಬರು ಗಂಡು ಮಕ್ಕಳು ಹುಟ್ಟಿರುವುದು ನಿಮಗೆ ತಿಳಿದೇ ಇದೆ.
¶ ಒಂದು ದಿನ ಸೌಲನು, ಇವನು ನನ್ನ ಕೈಯಿಂದಲ್ಲ ಫಿಲಿಷ್ಟಿಯರ ಕೈಯಿಂದ ಸಾಯಲಿ ಎಂದು ಆಲೋಚಿಸಿಕೊಂಡು ದಾವೀದನಿಗೆ, “ನನ್ನ ವೀರನಾಗಿ ಹೋಗಿ ಯೆಹೋವನ ಯುದ್ಧಗಳನ್ನು ನಡಿಸು. ನಾನು ನನ್ನ ಹಿರೀ ಮಗಳಾದ ಮೇರಬಳನ್ನು ನಿನಗೆ ಮದುವೆ ಮಾಡಿಕೊಡುತ್ತೇನೆ” ಅಂದನು.
¶ ‹“ಯಾರೊಬ್ಬನೂ ಇಬ್ಬರು ಯಜಮಾನರಿಗೆ ಸೇವೆಮಾಡಲಾರನು. ಅವನು ಒಬ್ಬನನ್ನು›‹ದ್ವೇಷಿಸಿ ಮತ್ತೊಬ್ಬನನ್ನು ಪ್ರೀತಿಸುವನು; ಇಲ್ಲವೆ ಒಬ್ಬನಿಗೆ ಶ್ರದ್ಧೆಯಿಂದ ಸೇವೆಮಾಡಿ ಮತ್ತೊಬ್ಬನನ್ನು ತಾತ್ಸಾರ ಮಾಡಬಹುದು. ನೀವು ದೇವರನ್ನೂ ಐಶ್ವರ್ಯವನ್ನೂ ಒಟ್ಟಾಗಿ ಸೇವಿಸಲಾರಿರಿ.›
‹“ಯಾವನಾದರೂ ನನ್ನ ಬಳಿಗೆ ಬಂದು ತನ್ನ ತಂದೆತಾಯಿ, ಹೆಂಡತಿ, ಮಕ್ಕಳು, ಅಣ್ಣತಮ್ಮಂದಿರು, ಅಕ್ಕತಂಗಿಯರು ಇವರನ್ನೂ ತನ್ನ ಪ್ರಾಣವನ್ನು ಸಹ ಹಗೆಮಾಡದಿದ್ದರೆ ಅವನು ನನ್ನ ಶಿಷ್ಯನಾಗಿರಲಾರನು.›