ಆದಾಮನು ಒಟ್ಟು ಒಂಭೈನೂರ ಮೂವತ್ತು ವರ್ಷ ಬದುಕಿ ನಂತರ ಸತ್ತನು.
TSK
TSK · ಆದಿಕಾಂಡ 3:19
مراجع Treasury of Scripture Knowledge في ಕನ್ನಡ IRV.
“ನಾನು ನಿಮ್ಮಲ್ಲಿ ಪರದೇಶದವನೂ, ಪ್ರವಾಸಿಯೂ ಆಗಿದ್ದೇನೆ. ಈಗ ಮರಣಹೊಂದಿರುವ ನನ್ನ ಪತ್ನಿಯ ಸಮಾಧಿಗೋಸ್ಕರ ಸ್ವಲ್ಪ ಭೂಮಿಯನ್ನು ನನ್ನ ಸ್ವಂತಕ್ಕೆ ಕೊಡಿ” ಎಂದು ಕೇಳಿಕೊಂಡನು.
ನೀನು ನನ್ನನ್ನು ಜೇಡಿಮಣ್ಣಿನಿಂದಲೇ ರೂಪಿಸಿದ್ದೀಯೆಂದು ಕೃಪೆಮಾಡಿ ನೆನಸಿಕೋ. ನನ್ನನ್ನು ತಿರುಗಿ ಮಣ್ಣಾಗುವಂತೆ ಮಾಡುವೆಯಾ?
ನನ್ನ ಚರ್ಮವು ಹೀಗೆ ಬಿರಿದು ಹಾಳಾದ ಬಳಿಕ, ದೇಹಧಾರಿಯಾಗಿ ದೇವರನ್ನು ನೋಡುವೆನು.
ಸಮಸ್ತ ಜನರು ಒಟ್ಟಾಗಿ ಅಳಿದುಹೋಗುವರು, ಪುನಃ ಮನುಷ್ಯರು ಧೂಳೇ ಆಗುವರು.
ಭೂಲೋಕದಲ್ಲಿರುವ ಪುಷ್ಟರೆಲ್ಲರೂ ಆರಾಧಿಸುವರು; ತಮ್ಮ ಜೀವವನ್ನು ಉಳಿಸಿಕೊಳ್ಳಲಾರದೆ ಮಣ್ಣು ಪಾಲಾಗುವವರೆಲ್ಲರೂ ಆತನಿಗೆ ಅಡ್ಡಬೀಳುವರು.
ನಾವು ರೂಪಗೊಂಡಿದ್ದನ್ನು ಆತನು ಬಲ್ಲನು; ನಾವು ಧೂಳಾಗಿದ್ದೇವೆ ಎಂಬುವುದನ್ನು ನೆನಪುಮಾಡಿಕೊಳ್ಳುತ್ತಾನೆ.
ಜ್ಞಾನಮಾರ್ಗದಿಂದ ತಪ್ಪಿದವನಿಗೆ, ಪ್ರೇತಸಮೂಹವೇ ವಿಶ್ರಾಂತಿಸ್ಥಾನ.
ಆಕಾಶದ ಕೆಳಗಡೆ ನಡೆಯುವ ಎಲ್ಲಾ ಕೆಲಸಗಳನ್ನು ಜ್ಞಾನದಿಂದ ವಿಚಾರಿಸಿ ವಿಮರ್ಶಿಸುವುದಕ್ಕೆ ನನ್ನ ಮನಸ್ಸನ್ನು ಇಟ್ಟೆನು. ದೇವರು ಮನುಷ್ಯರ ಮೇಲೆ ನೇಮಿಸಿರುವ ಕೆಲಸವೆಲ್ಲಾ ಬಹು ಪ್ರಯಾಸವೇ.
ತಾಯಿಯ ಗರ್ಭದಿಂದ ಹೇಗೆ ಬಂದನೋ ಹಾಗೆಯೇ ಏನೂ ಇಲ್ಲದವನಾಗಿ ಗತಿಸಿ ಹೋಗುವನು. ಅವನು ಪ್ರಯಾಸಪಟ್ಟರೂ, ತನ್ನ ಕೈಯಲ್ಲಿ ಏನೂ ತೆಗೆದುಕೊಂಡು ಹೋಗುವುದಿಲ್ಲ.
ಸತ್ತು ಧೂಳಿನ ನೆಲದೊಳಗೆ ದೀರ್ಘ ನಿದ್ರೆಮಾಡುವವರಲ್ಲಿ ಅನೇಕರು ಎಚ್ಚೆತ್ತು ಕೆಲವರು ನಿತ್ಯಜೀವವನ್ನು, ಕೆಲವರು ನಿಂದನೆ ಮತ್ತು ನಿತ್ಯತಿರಸ್ಕಾರಗಳನ್ನು ಅನುಭವಿಸುವರು.
ಮನುಷ್ಯನ ಮೂಲಕ ಮರಣ ಉಂಟಾದ ಕಾರಣ, ಮನುಷ್ಯನ ಮೂಲಕವೇ ಸತ್ತವರಿಗೆ ಪುನರುತ್ಥಾನವುಂಟಾಗಿದೆ.
¶ ಸಹೋದರರೇ, ನಾವು ನಿಮ್ಮಲ್ಲಿ ಯಾರಿಗೂ ಹೊರೆಯಾಗಬಾರದೆಂದು ಹಗಲಿರುಳು ದುಡಿಯುತ್ತಾ ದೇವರ ಸುವಾರ್ತೆಯನ್ನು ನಿಮಗೆ ಸಾರಿದೆವು. ಆ ನಮ್ಮ ಕಷ್ಟವೂ ಪ್ರಯಾಸಗಳು ನಿಮ್ಮ ನೆನಪಿನಲ್ಲಿರಲಿ.