ಇದಲ್ಲದೆ ಯೆಹೋವನಾದ ದೇವರು ಮೂಡಣ ದಿಕ್ಕಿನಲ್ಲಿರುವ ಏದೆನ್ ಸೀಮೆಯಲ್ಲಿ ಒಂದು ಉದ್ಯಾನವನವನ್ನು ಸೃಷ್ಟಿಸಿ ತಾನು ಉಂಟುಮಾಡಿದ ಮನುಷ್ಯನನ್ನು ಅದರಲ್ಲಿ ತಂಗುವಂತೆ ಮಾಡಿದನು.
TSK
TSK · ಆದಿಕಾಂಡ 3:24
مراجع Treasury of Scripture Knowledge في ಕನ್ನಡ IRV.
ಕೃಪಾಸನದ ಎರಡು ಕೊನೆಗಳಲ್ಲಿ ಎರಡು ಬಂಗಾರದ ಕೆರೂಬಿಗಳನ್ನು ಕೆತ್ತನೆ ಕೆಲಸದಿಂದ ಮಾಡಿಸಬೇಕು.
¶ ಯೆಹೋಶುವನು ಯೆರಿಕೋವಿನ ಹತ್ತಿರದಲ್ಲಿ ಇದ್ದಾಗ ಒಮ್ಮೆ ತನ್ನ ಕಣ್ಣೆತ್ತಿ ನೋಡಲು ಒಬ್ಬ ಮನುಷ್ಯನು ಹಿರಿದ ಕತ್ತಿಯನ್ನು ಕೈಯಲ್ಲಿ ಹಿಡಿದು ತನ್ನೆದುರಿನಲ್ಲಿ ನಿಂತಿರುವುದನ್ನು ಕಂಡನು. ಯೆಹೋಶುವನು ಅವನ ಸಮೀಪಕ್ಕೆ ಹೋಗಿ “ನೀನು ನಮ್ಮವನೋ ಅಥವಾ ಶತ್ರು ಪಕ್ಷದವನೋ?” ಎಂದು ಕೇಳಲು
ಇನ್ನೊಂದು ಕೆರೂಬಿಯ ರೆಕ್ಕೆಗಳ ಅಂತರವು ಹತ್ತು ಮೊಳವಾಗಿತ್ತು. ಎರಡೂ ಕೆರೂಬಿಗಳ ಅಳತೆಯೂ ಆಕಾರವೂ ಒಂದೇಯಾಗಿದ್ದವು.
ಇಸ್ರಾಯೇಲರನ್ನು ಕಾಯುವ ಕುರುಬನೇ, ಕಿವಿಗೊಡು; ಯೋಸೇಫನ ವಂಶದವರನ್ನು ಕುರಿಹಿಂಡಿನಂತೆ ಕರೆತಂದವನೇ, ಕೆರೂಬಿಯರ ಮಧ್ಯದಲ್ಲಿ ಆಸೀನನಾಗಿರುವಾತನೇ, ಪ್ರಕಾಶಿಸು.
ಗಾಳಿಯನ್ನು ನಿನ್ನ ದೂತರನ್ನಾಗಿಯೂ, ಅಗ್ನಿಜ್ವಾಲೆಯನ್ನು ಸೇವಕರನ್ನಾಗಿಯೂ ಮಾಡಿಕೊಳ್ಳುತ್ತೀ.
ಯೇಸು ಅವನಿಗೆ, ‹“ನಾನೇ ಮಾರ್ಗವೂ, ಸತ್ಯವೂ ಮತ್ತು›‹ಜೀವವೂ ಆಗಿದ್ದೇನೆ. ನನ್ನ ಮೂಲಕವಲ್ಲದೆ ಯಾರೂ ತಂದೆಯ ಬಳಿಗೆ ಬರಲಾರರು.›
ಪಾಪ ಕ್ಷಮಾಪಣೆಯಾದಲ್ಲಿ ಇನ್ನೂ ಅವುಗಳ ವಿಷಯದಲ್ಲಿ ಯಜ್ಞಗಳನ್ನು ಸಮರ್ಪಣೆಮಾಡುವಂಥ ಅವಶ್ಯಕತೆ ಇಲ್ಲ.