¶ ಅದಕ್ಕೆ ಅವನು, “ನೀನು ತೋಟದಲ್ಲಿ ಸಂಚರಿಸುವ ಸಪ್ಪಳವನ್ನು ನಾನು ಕೇಳಿ, ಬೆತ್ತಲೆಯಾಗಿರುವುದರಿಂದ ಹೆದರಿ ಅಡಗಿಕೊಂಡೆನು” ಎಂದನು.
TSK
TSK · ಆದಿಕಾಂಡ 3:8
مراجع Treasury of Scripture Knowledge في ಕನ್ನಡ IRV.
ಆದರೂ ಈ ಘೋರವಾದ ಅಗ್ನಿಜ್ವಾಲೆಯು ನಮ್ಮನ್ನು ದಹಿಸಿ ಬಿಟ್ಟಿತು, ಮತ್ತು ನಮ್ಮ ದೇವರಾದ ಯೆಹೋವನ ಸ್ವರವನ್ನು ನಾವು ಪುನಃ ಕೇಳಿದರೆ ಸತ್ತೇವು.
ದಟ್ಟವಾದ ಮೋಡಗಳು ಆತನಿಗೆ ಪರದೆಯ ಹಾಗಿರುವುದರಿಂದ ನೋಡಲಾರನು; ಆಕಾಶಮಂಡಲದ ಮೇಲೆ ನಡೆದಾಡುತ್ತಾನೆ’ ಎಂದು ಹೇಳಿಕೊಂಡೆಯಲ್ಲವೇ.
ಆತನು ಮನುಷ್ಯನ ಮಾರ್ಗಗಳ ಮೇಲೆ ಕಣ್ಣಿಟ್ಟು, ಅವನ ಹೆಜ್ಜೆಗಳನ್ನೆಲ್ಲಾ ನೋಡುವನು.
ಯೆಹೋವನೇ, ನೀನು ನನ್ನನ್ನು ಪರೀಕ್ಷಿಸಿ ತಿಳಿದುಕೊಂಡಿದ್ದೀ;
ದೂರದಲ್ಲಿಯೂ ಇರುವವನಲ್ಲವೋ? ನನ್ನ ಕಣ್ಣಿಗೆ ಬೀಳದಂತೆ ಯಾರಾದರೂ ಗುಪ್ತಸ್ಥಳಗಳಲ್ಲಿ ತನ್ನನ್ನು ತಾನೇ ಮರೆಮಾಡಿಕೊಂಡಾನೇ? ನಾನು ಭೂಮ್ಯಾಕಾಶಗಳಲ್ಲಿಯೂ ವ್ಯಾಪಿಸಿರುವವನಲ್ಲವೆ.”
ಆದರೆ ಯೋನನು ಯೆಹೋವನ ಸನ್ನಿಧಿಯಿಂದ ತಪ್ಪಿಸಿಕೊಳ್ಳಲು ತಾರ್ಷೀಷಿಗೆ ಓಡಿಹೋಗಬೇಕೆಂದು ಯೋಚಿಸಿ ಹೊರಟು ಯೊಪ್ಪ ಎಂಬ ಊರಿಗೆ ಬಂದು ಅಲ್ಲಿ ತಾರ್ಷೀಷಿಗೆ ಹೊರಡುವ ಹಡಗನ್ನು ಕಂಡು ಪ್ರಯಾಣದ ದರವನ್ನು ಕೊಟ್ಟು ತಾರ್ಷೀಷಿಗೆ ಪ್ರಯಾಣಮಾಡುತ್ತಿದ್ದ ಹಡಗಿನವರೊಡನೆ ಅದನ್ನು ಹತ್ತಿದನು.
ಇದರಿಂದ ಅವರು ಧರ್ಮಶಾಸ್ತ್ರದ ಮುಖ್ಯ ತಾತ್ಪರ್ಯ ತಮ್ಮ ಹೃದಯದಲ್ಲಿ ಬರೆದಿದೆ ಎಂಬುದನ್ನು ತೋರ್ಪಡಿಸುತ್ತಾರೆ. ಇದಕ್ಕೆ ಅವರ ಮನಸ್ಸು ಸಹ ಸಾಕ್ಷಿ ನುಡಿಯುತ್ತದೆ; ಅವರ ಆಲೋಚನೆಗಳು ವಾದಿಪ್ರತಿವಾದಿಗಳಂತೆ, ಇದು ತಪ್ಪೆಂದು ಅದು ತಪ್ಪಲ್ಲವೆಂದು ಹೇಳುತ್ತದೆ.