TSK

TSK · ಆದಿಕಾಂಡ 31:1

مراجع Treasury of Scripture Knowledge في ಕನ್ನಡ IRV.

العودة إلى المقطع

ಐಗುಪ್ತ ದೇಶದಲ್ಲಿ ನನಗಿರುವ ಎಲ್ಲಾ ವೈಭವವನ್ನೂ, ನೀವು ಕಂಡಿದ್ದೆಲ್ಲವನ್ನು ತಂದೆಗೆ ತಿಳಿಸಿ ಬೇಗನೆ ಅವನನ್ನು ಇಲ್ಲಿಗೆ ಕರೆದುಕೊಂಡು ಬರಬೇಕು” ಎಂದು ಹೇಳಿ,

ಒಂದು ವೇಳೆ ನಾನು ಬಂಗಾರದಲ್ಲಿ ಭರವಸವಿಟ್ಟು, ಅಪರಂಜಿಗೆ, ‘ನಿನ್ನನ್ನೇ ನಂಬಿದ್ದೇನೆ’ ಎಂದು ಹೇಳಿದ್ದರೆ,

ಯೆಹೋವನೇ, ಇಹಲೋಕವೇ ತಮ್ಮ ಪಾಲೆಂದು ನಂಬಿದ ನರರಿಗೆ ಸಿಕ್ಕದಂತೆ ನಿನ್ನ ಕೈಯಿಂದ ನನ್ನನ್ನು ತಪ್ಪಿಸು; ನಿನ್ನ ಐಶ್ವರ್ಯದಿಂದ ಅವರ ಹೊಟ್ಟೆಯನ್ನು ತುಂಬಿಸಿದ್ದೀಯಲ್ಲಾ. ಅವರು ಸಂತಾನವೃದ್ಧಿಹೊಂದಿ ಉಳಿದ ಆಸ್ತಿಯನ್ನು ತಮ್ಮ ಮಕ್ಕಳಿಗೆ ಬಿಡುತ್ತಾರೆ.

ನಾನು ಸಿಂಹಗಳಂತಿರುವ ಶತ್ರುಗಳ ಮಧ್ಯದಲ್ಲಿ ಸಿಕ್ಕಿದ್ದೇನೆ; ದುರಾಶೆಯಿಂದ ಕಬಳಿಸುವಂತಹ ಮನುಷ್ಯರ ನಡುವೆ ಬಿದ್ದಿದ್ದೇನೆ. ಅವರ ಹಲ್ಲುಗಳು ಈಟಿ ಮತ್ತು ಬಾಣಗಳಂತಿವೆ, ನಾಲಿಗೆಗಳು ಹದವಾದ ಕತ್ತಿಗಳೇ.

ವಂಚಿಸುವ ನಾಲಿಗೆಯೇ, ದೇವರು ನಿನಗೇನು ಕೊಡಬೇಕು? ಯಾವ ಹೆಚ್ಚಿನ ಶಿಕ್ಷೆಯನ್ನು ಒದಗಿಸಬೇಕು?

ಹೀಗಿರುವುದರಿಂದ ಪಾತಾಳವು ಹೆಚ್ಚು ಆತುರದಿಂದ ಅಗಾಧವಾಗಿ ಬಾಯಿ ತೆರೆಯಲು, ಅವರ ಮಹಿಮೆ, ಕೋಲಾಹಲ, ಗದ್ದಲ, ಉಲ್ಲಾಸ ಇವೆಲ್ಲವುಗಳು ಅದರೊಳಗೆ ಬಿದ್ದುಹೋಗುವವು.

¶ “ಆಹಾ, ಗಾದೆಗಳಲ್ಲಿ ಜಾಣರು ‘ತಾಯಿಯಂತೆ ಮಗಳು’ ಎಂಬ ಗಾದೆಯನ್ನು ನಿನ್ನ ವಿಷಯವಾಗಿ ನುಡಿಯುವರು.

ಅವನು ಅಹಂಭಾವಿಯೂ ಅಜ್ಞಾನಿಯೂ ಆಗಿದ್ದು, ನಿಂದನೆ ವಾಗ್ವಾದಗಳನ್ನುಂಟು ಮಾಡುವ ಭ್ರಾಂತಿಯಲ್ಲಿದ್ದಾನೆ. ಇವುಗಳಿಂದ ಹೊಟ್ಟೆಕಿಚ್ಚು, ಜಗಳ, ದೂಷಣೆ, ದುಸ್ಸಂಶಯ ಮುಂತಾದವುಗಳು ಉಂಟಾಗುತ್ತವೆ.

ಏಕೆಂದರೆ ಪವಿತ್ರಗ್ರಂಥದಲ್ಲಿ ಬರೆದಿರುವಂತೆ: “ನರಜಾತಿಯೆಲ್ಲಾ ಹುಲ್ಲಿನ ಹಾಗಿದೆ. ಅದರ ಮಹಿಮೆಯೆಲ್ಲಾ ಹುಲ್ಲಿನ ಹೂವಿನಂತಿದೆ. ಹುಲ್ಲು ಒಣಗಿ ಹೋಗುವುದು. ಅದರ ಹೂವು ಉದುರಿ ಹೋಗುವುದು.