TSK

TSK · ಆದಿಕಾಂಡ 31:12

مراجع Treasury of Scripture Knowledge في ಕನ್ನಡ IRV.

العودة إلى المقطع

ಹೀಗಾಗಿ ಬಲಹೀನವಾದ ಹಿಂಡು ಲಾಬಾನನ ಪಾಲಿಗೆ ಬಂದವು, ಬಲಿಷ್ಠವಾದವುಗಳು ಯಾಕೋಬನು ಪಾಲಿಗೆ ಬಂದವು.

¶ ಆಗ ಯೆಹೋವನು, “ಐಗುಪ್ತ ದೇಶದಲ್ಲಿರುವ ನನ್ನ ಜನರ ದುರವಸ್ಥೆಯನ್ನು ನಿಶ್ಚಯವಾಗಿ ನೋಡಿದ್ದೇನೆ. ಬಿಟ್ಟೀ ಕೆಲಸ ಮಾಡುವ ವಿಷಯದಲ್ಲಿ, ಅವರು ಇಟ್ಟ ಮೊರೆಯು ನನಗೆ ಕೇಳಿಸಿತು. ಅವರ ದುಃಖವನ್ನೆಲ್ಲಾ ನಾನು ಬಲ್ಲೆನು.

¶ “‘ಮತ್ತೊಬ್ಬನನ್ನು ಬಲಾತ್ಕರಿಸಬಾರದು ಅಥವಾ ಅವನ ಸೊತ್ತನ್ನು ಅಪಹರಿಸಬಾರದು. ಅವನ ಕೂಲಿಯನ್ನು ಮರುದಿನದ ವರೆಗೆ ನಿಮ್ಮ ಬಳಿಯಲ್ಲಿ ಇಟ್ಟುಕೊಳ್ಳಬಾರದು.

ನೀನು ಅವರ ಅನ್ಯಾಯ ಹಾಗು ಬಲಾತ್ಕಾರಗಳನ್ನು ನೋಡಿದ್ದಿ; ಅವುಗಳನ್ನು ವಿಚಾರಿಸುತ್ತೀ, ಗತಿಯಿಲ್ಲದವನು ತನ್ನನ್ನು ನಿನಗೇ ಒಪ್ಪಿಸುವನು; ದಿಕ್ಕಿಲ್ಲದವನಿಗೆ ನೀನೇ ದಿಕ್ಕು.

ನಾನು ನಡೆಯುವುದನ್ನು, ಮಲಗುವುದನ್ನು ಶೋಧಿಸಿ ಗ್ರಹಿಸಿಕೊಳ್ಳುತ್ತಿ, ನನ್ನ ನಡತೆಯೆಲ್ಲಾ ನಿನಗೆ ಗೋಚರವಾಗಿದೆ.

ಐಗುಪ್ತದೇಶದಲ್ಲಿರುವ ನನ್ನ ಜನರ ದುರವಸ್ಥೆಯನ್ನು ನೋಡೇ ನೋಡಿದ್ದೇನೆ; ಅವರ ಮೊರೆಯನ್ನು ಕೇಳಿ ಅವರನ್ನು ಬಿಡಿಸುವುದಕ್ಕೆ ಇಳಿದುಬಂದಿದ್ದೇನೆ; ಈಗ ನಿನ್ನನ್ನು ಐಗುಪ್ತದೇಶಕ್ಕೆ ಕಳುಹಿಸುತ್ತೇನೆ, ಬಾ’ ಎಂದು ಹೇಳಿದನು.