¶ ಈ ಕಾರಣದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು. ಅವರಿಬ್ಬರು ಒಂದೇ ಶರೀರವಾಗಿರುವರು.
TSK
TSK · ಆದಿಕಾಂಡ 31:26
مراجع Treasury of Scripture Knowledge في ಕನ್ನಡ IRV.
¶ ಅದಕ್ಕೆ ಯೆಹೋವನು, “ನೀನು ಏನು ಮಾಡಿದೆ? ನಿನ್ನ ತಮ್ಮನ ರಕ್ತವು ಭೂಮಿಯ ಕಡೆಯಿಂದ ಕೂಗಿ ನನಗೆ ಮೊರೆಯಿಡುತ್ತಿದೆ.
ಅಬೀಮೆಲೆಕನು ಅಬ್ರಹಾಮನನ್ನು ಕರೆದು, “ನೀನು ನಮಗೆ ಮಾಡಿದ್ದೇನು? ನಾನು ಯಾವ ಪಾಪ ಮಾಡಿದ್ದರಿಂದ ನೀನು ನನ್ನನ್ನೂ ನನ್ನ ರಾಜ್ಯವನ್ನೂ ಮಹಾಪಾತಕಕ್ಕೆ ಒಳಪಡಿಸಿದಿ? ನೀನು ಮಾಡಬಾರದ ಕಾರ್ಯಗಳನ್ನು ಮಾಡಲು ನಾನು ನಿನಗೇನು ಮಾಡಿದೆ” ಎಂದು ಹೇಳಿ,
¶ ಬೆಳಗ್ಗೆ ಆಕೆ ಲೇಯಳೆಂದು ಯಾಕೋಬನಿಗೆ ತಿಳಿದು ಬರಲು ಅವನು ಲಾಬಾನನಿಗೆ, “ಇದೇನು ನೀನು ನನಗೆ ಮಾಡಿದ್ದು? ರಾಹೇಲಳಿಗೋಸ್ಕರ ನಿನಗೆ ಸೇವೆಮಾಡಿದೆನಲ್ಲಾ; ಯಾಕೆ ನನಗೆ ಮೋಸ ಮಾಡಿದೆ” ಎಂದು ಕೇಳಿದ್ದಕ್ಕೆ,
¶ ಆಗ ಯಾಕೋಬನು ಕೋಪಗೊಂಡು ಲಾಬಾನನನ್ನು ಗದರಿಸಿ, “ನೀನು ಇಷ್ಟು ಆತುರ ಪಟ್ಟು ನನ್ನನ್ನು ಹಿಂದಟ್ಟಿ ಬರುವಂತೆ ನಾನೇನು ದ್ರೋಹ ಮಾಡಿದೆನು?
ಆಗ ಯೆಹೋಶುವನು ಆಕಾನನಿಗೆ “ನನ್ನ ಮಗನೇ, ನೀನು ಇಸ್ರಾಯೇಲರ ದೇವರಾದ ಯೆಹೋವನನ್ನು ಘನಪಡಿಸಿ ಆತನಿಗೆ ಸ್ತೋತ್ರ ಸಲ್ಲಿಸು. ನೀನು ಮಾಡಿದ್ದನ್ನು ನನಗೆ ಹೇಳು, ಯಾವುದನ್ನೂ ಮುಚ್ಚಿಡಬೇಡ” ಅಂದನು.
ಆಗ ದಾವೀದನು, “ನಾನೇನು ತಪ್ಪು ಮಾಡಿದೆನು? ಸುಮ್ಮನೆ ಮಾತನಾಡಿದೆನಷ್ಟೆ” ಎಂದು ಹೇಳಿ
ಪಿಲಾತನು, “ನಾನೇನು ಯೆಹೂದ್ಯನೋ? ನಿನ್ನ ಸ್ವಂತ ಜನಾಂಗವೂ, ಮುಖ್ಯಯಾಜಕರೂ ನಿನ್ನನ್ನು ನನಗೆ ಒಪ್ಪಿಸಿದ್ದಾರೆ. ನೀನು ಏನು ಮಾಡಿದ್ದೀಯಾ?” ಎಂದು ಕೇಳಿದ್ದಕ್ಕೆ,