TSK

TSK · ಆದಿಕಾಂಡ 31:29

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಅದಕ್ಕೆ ಲಾಬಾನನೂ, ಬೆತೂವೇಲನೂ, “ಈ ಕಾರ್ಯವು ಯೆಹೋವನಿಂದಲೇ ಉಂಟಾಯಿತು; ನಾವಂತೂ ಹೌದೆಂದೂ, ಅಲ್ಲವೆಂದೂ ಹೇಳಲಾರೆವು. ರೆಬೆಕ್ಕಳನ್ನು ನಿನ್ನ ವಶಕ್ಕೆ ಕೊಡುತ್ತೇವೆ;

ಆದರೆ ರಾತ್ರಿಯಲ್ಲಿ ದೇವರು ಅರಾಮ್ಯನಾದ ಲಾಬಾನನ ಕನಸಿನಲ್ಲಿ ಬಂದು, “ನೀನು ಯಾಕೋಬನ ಸಂಗಡ ಒಳ್ಳೆಯದನ್ನಾಗಲಿ ಕೆಟ್ಟದ್ದನ್ನಾಗಲಿ ಮಾತನಾಡದಂತೆ ಎಚ್ಚರಿಕೆಯಾಗಿರು” ಎಂದನು.

ಅಬ್ರಹಾಮನ ದೇವರು, ನಾಹೋರನ ದೇವರು, ಅವರ ತಂದೆಯ ದೇವರು ನಿನಗೂ ನನಗೂ ನ್ಯಾಯತೀರಿಸಲಿ” ಎಂದನು. ಅದೇ ಪ್ರಕಾರ ಯಾಕೋಬನು ತನ್ನ ತಂದೆಯಾದ ಇಸಾಕನು ಭಯಭಕ್ತಿಯಿಂದ ಆರಾಧಿಸುವ ದೇವರ ಮೇಲೆ ಆಣೆಯಿಟ್ಟು ಪ್ರಮಾಣ ಮಾಡಿದನು.

ಅಬ್ಷಾಲೋಮನು ಅಮ್ನೋನನ ಸಂಗಡ ಒಳ್ಳೆಯ ಮಾತುಗಳನ್ನಾಗಲಿ ಕೆಟ್ಟ ಮಾತುಗಳನ್ನಾಗಲಿ ಆಡಲಿಲ್ಲ. ತನ್ನ ತಂಗಿಯಾದ ತಾಮಾರಳನ್ನು ಕೆಡಿಸಿದ್ದಕ್ಕಾಗಿ ಅವನು ಅಮ್ನೋನನನ್ನು ದ್ವೇಷಿಸಿದನು.

ಪರಾಕ್ರಮಿಯೇ, ನೀನು ಕೆಡುಕುಮಾಡಿ ಹಿಗ್ಗುವುದೇನು? ದೇವರ ಕೃಪೆಯು ಯಾವಾಗಲೂ ಇರುವುದು.

¶ ಆಗ ನೆಬೂಕದ್ನೆಚ್ಚರನು, “ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರ ದೇವರಿಗೆ ಸ್ತೋತ್ರವಾಗಲಿ! ಆತನು ತನ್ನ ದೂತನನ್ನು ಕಳುಹಿಸಿ ತನ್ನಲ್ಲಿ ಭರವಸವಿಟ್ಟು ರಾಜಾಜ್ಞೆಯನ್ನು ಜಯಿಸಿ ತನ್ನನ್ನೇ ಹೊರತು ಇನ್ನಾವ ದೇವರನ್ನೂ ಸೇವಿಸಿ ಪೂಜಿಸಬಾರದೆಂದು ಸ್ವದೇಹಗಳನ್ನು ಮರಣಕ್ಕೆ ಒಪ್ಪಿಸಿದ ತನ್ನ ಸೇವಕರನ್ನು ಉದ್ಧರಿಸಿದ್ದಾನಲ್ಲವೇ.

¶ “ನಾನು ಆಳುವ ರಾಜ್ಯದವರೆಲ್ಲರೂ ದಾನಿಯೇಲನ ದೇವರಿಗೆ ಭಯಭಕ್ತಿಯಿಂದ ನಡೆದುಕೊಳ್ಳಬೇಕೆಂದು ಆಜ್ಞಾಪಿಸುತ್ತೇನೆ; ಆತನೇ ಜೀವಸ್ವರೂಪನಾದ ಸನಾತನ ದೇವರು, ಆತನ ರಾಜ್ಯವು ಎಂದಿಗೂ ಅಳಿಯದು, ಆತನ ಆಳ್ವಿಕೆಯು ಶಾಶ್ವತವಾಗಿರುವುದು;

ಹೀಗಿರುವುದರಿಂದ ನಾನು ನಿಮಗೆ ಹೇಳುವುದೇನಂದರೆ ನೀವು ಆ ಮನುಷ್ಯರ ಗೊಡವೆಗೆ ಹೋಗಬೇಡಿರಿ, ಅವರನ್ನು ಬಿಡಿರಿ. ಏಕೆಂದರೆ ಈ ಯೋಚನೆಯು ಅಥವಾ ಈ ಕೆಲಸವು ಮನುಷ್ಯರಿಂದಾಗಿದ್ದರೆ ತಾನೇ ಕೆಡುವುದು;