¶ ತಂದೆಯು ಯಾಕೋಬನಿಗೆ ಮಾಡಿದ ಆಶೀರ್ವಾದದ ನಿಮಿತ್ತ ಏಸಾವನು ಯಾಕೋಬನನ್ನು ಹಗೆಮಾಡಿ ತನ್ನ ಮನಸ್ಸಿನೊಳಗೆ, “ತಂದೆಗೋಸ್ಕರ ದುಃಖಿಸುವ ಕಾಲ ಸಮೀಪಿಸಿತು. ತರುವಾಯ ನನ್ನ ತಮ್ಮನಾದ ಯಾಕೋಬನನ್ನು ಕೊಲ್ಲುವೆನು” ಎಂದುಕೊಂಡನು.
TSK
TSK · ಆದಿಕಾಂಡ 32:11
مراجع Treasury of Scripture Knowledge في ಕನ್ನಡ IRV.
ಆಗ ಅವರು ಯೆಹೋವನಿಗೆ, ‘ನಾವು ಯೆಹೋವನಾದ ನಿನ್ನನ್ನು ಬಿಟ್ಟು ಬಾಳ್, ಅಷ್ಟೋರೆತ್ ಎಂಬ ದೇವತೆಗಳನ್ನು ಪೂಜಿಸಿ ಪಾಪಮಾಡಿದ್ದೇವೆ. ಈಗ ಕೃಪೆಮಾಡಿ ನಮ್ಮನ್ನು ಶತ್ರುಗಳ ಕೈಯಿಂದ ಬಿಡಿಸು; ನಾವು ಇನ್ನು ಮುಂದೆ ನಿನ್ನನ್ನೇ ಸೇವಿಸುವೆವು’ ಎಂದು ಮೊರೆಯಿಟ್ಟರು.
¶ ಅನಂತರ ದಾವೀದನು ಹೋಗಿ ಯೆಹೋವನ ಸನ್ನಿಧಿಯಲ್ಲಿ ಕುಳಿತುಕೊಂಡು, “ಕರ್ತನಾದ, ಯೆಹೋವನೇ, ನಾನೆಷ್ಟರವನು? ನನ್ನ ಮನೆ ಎಷ್ಟರದು? ನೀನು ನನ್ನನ್ನು ಇಲ್ಲಿಯವರೆಗೂ ತಂದಿದ್ದಿಯಲ್ಲಾ.
ನನ್ನ ಪ್ರಾಣವನ್ನು ಕಾಪಾಡಿ ಉಳಿಸು; ನಿನ್ನನ್ನೇ ಆಶ್ರಯಿಸಿಕೊಂಡಿದ್ದೇನೆ, ನನಗೆ ಆಶಾಭಂಗವಾಗಬಾರದು.
ದೇವರೇ, ನ್ಯಾಯವನ್ನು ತೀರಿಸು; ನನಗೋಸ್ಕರ ವ್ಯಾಜ್ಯವನ್ನು ನಡೆಸಿ ಭಕ್ತಿ ಇಲ್ಲದ ಜನಾಂಗದಿಂದ ತಪ್ಪಿಸು, ದುರಾಚಾರಿಗಳಾದ ಮೋಸಗಾರರಿಂದ ನನ್ನನ್ನು ಬಿಡಿಸು.
ನರ ಮನುಷ್ಯರ ಬಲಾತ್ಕಾರದಿಂದ ನನ್ನನ್ನು ಬಿಡಿಸು, ಆಗ ನಿನ್ನ ನಿಯಮಗಳನ್ನು ಕೈಗೊಳ್ಳುವೆನು.
ಬಲವಾದ ಪಟ್ಟಣವನ್ನು ಗೆಲ್ಲುವುದಕ್ಕಿಂತ ಅನ್ಯಾಯಹೊಂದಿದ ಸಹೋದರನನ್ನು ಗೆಲ್ಲುವುದು ಅಸಾಧ್ಯ, ಕೋಟೆಯ ಅಗುಳಿಗಳಂತೆ ಜಗಳಗಳು ಜನರನ್ನು ಅಗಲಿಸುತ್ತವೆ.
ಹೀಗಿರಲು ನಿಮ್ಮ ಕುಲಗಳವರಿಗೆ ವಿರುದ್ಧವಾಗಿ ಯುದ್ಧಘೋಷವು ಮೊಳಗುವುದು. ಕಾಳಗದ ದಿನದಲ್ಲಿ ಶಲ್ಮಾನನು ತಾಯಿ ಮತ್ತು ಮಕ್ಕಳನ್ನು ಒಟ್ಟಿಗೆ ಬಂಡೆಗೆ ಅಪ್ಪಳಿಸಲ್ಪಡುವುದು. ಬೇತ್ ಅರ್ಬೇಲ್ ಪಟ್ಟಣವನ್ನು ಸೂರೆಮಾಡಿದಂತೆ ನಿಮ್ಮ ಎಲ್ಲಾ ಕೋಟೆಗಳು ಸೂರೆಮಾಡಲ್ಪಡುವವು.