“ಆಕಾಶದ ಕಡೆಗೆ ನೋಡು, ನಕ್ಷತ್ರಗಳನ್ನು ಲೆಕ್ಕಿಸುವುದು ನಿನ್ನಿಂದಾದರೆ ಲೆಕ್ಕಿಸು.” ನಂತರ ಯೆಹೋವನು ಅಬ್ರಾಮನಿಗೆ, “ನಿನ್ನ ಸಂತಾನವು ನಕ್ಷತ್ರಗಳಷ್ಟಾಗುವುದು” ಎಂದು ಹೇಳಿದನು.
TSK
TSK · ಆದಿಕಾಂಡ 32:13
مراجع Treasury of Scripture Knowledge في ಕನ್ನಡ IRV.
ನಾನು ನಿನ್ನನ್ನು ಆಶೀರ್ವದಿಸಿಯೇ ಆಶೀರ್ವದಿಸುವೆನು; ನಿನ್ನ ಸಂತತಿಯನ್ನು ಅಧಿಕವಾಗಿ ಹೆಚ್ಚಿಸುವೆನು, ಅದನ್ನು ಆಕಾಶದ ನಕ್ಷತ್ರಗಳಂತೆಯೂ, ಸಮುದ್ರ ತೀರದಲ್ಲಿರುವ ಮರಳಿನಂತೆಯೂ ಅಸಂಖ್ಯವಾಗುವಂತೆ ಮಾಡುವೆನು; ಅವರು ಶತ್ರುಗಳ ಪಟ್ಟಣಗಳನ್ನು ಸ್ವತ್ತಾಗಿ ಮಾಡಿಕೊಳ್ಳುವರು.
¶ ಯಾಕೋಬನು, “ಹಾಗಲ್ಲ, ನಿನಗೆ ನನ್ನ ಮೇಲೆ ದಯೆಯಿದ್ದರೆ, ನಾನು ಸಮರ್ಪಿಸುವ ಕಾಣಿಕೆಯನ್ನು ಅಂಗೀಕರಿಸಬೇಕು. ನಿನ್ನನ್ನು ನೋಡಿದ್ದು ದೇವರನ್ನು ನೋಡಿದ ಹಾಗಾಯಿತು, ನನ್ನನ್ನು ಪ್ರೀತಿಯಿಂದ ಅಂಗೀಕರಿಸಿದ್ದೇ ವಿಶೇಷ ಸಂಗತಿಯಾಗಿದೆ.
¶ ಅದಕ್ಕೆ ಅವರ ತಂದೆಯಾದ ಇಸ್ರಾಯೇಲನು ಅವರಿಗೆ, “ಹಾಗಿದ್ದರೆ, ನೀವು ಹೀಗೆ ಮಾಡಿರಿ. ಈ ದೇಶದಲ್ಲಿ ದೊರಕುವ ಶ್ರೇಷ್ಠವಾದ ವಸ್ತುಗಳಲ್ಲಿ ಕೆಲವನ್ನು ನಿಮ್ಮ ಚೀಲದಲ್ಲಿ ಇಟ್ಟುಕೊಂಡು ಆ ಮನುಷ್ಯನಿಗೆ ಕಾಣಿಕೆಯಾಗಿ ತೆಗೆದುಕೊಂಡು ಹೋಗಿರಿ. ಸ್ವಲ್ಪ ತೈಲ, ಜೇನು, ಸುಗಂಧದ್ರವ್ಯ, ಕಾಕಂಬಿ, ಹಾಲುಮಡ್ಡಿ, ರಕ್ತಬೋಳ, ಗೋಡಂಬಿ, ಬಾದಾಮಿ ಇವುಗಳನ್ನು ತೆಗೆದುಕೊಂಡು ಹೋಗಿರಿ.
ನಿನ್ನ ಆಳುಗಳನ್ನು ಕೇಳು, ಅವರೇ ಹೇಳುವರು. ಹೀಗಿರುವುದರಿಂದ ಶುಭಕಾಲದಲ್ಲಿ ನಿನ್ನ ಬಳಿಗೆ ಬಂದಿರುವ ನನ್ನ ಸೇವಕರಿಗೆ ನಿನ್ನ ದೃಷ್ಟಿಯಲ್ಲಿ ದಯೆದೊರಕಲಿ. ಕೃಪೆಮಾಡಿ ನಿನ್ನ ಸೇವಕರಿಗೂ ಮಗನಾದ ದಾವೀದನಿಗೂ ನಿನಗಿರುವುದರಲ್ಲಿ ಕೊಡು’ ಎಂದು ಹೇಳಿರಿ” ಎಂದು ಅವರನ್ನು ಕಳುಹಿಸಿದನು.
ಆಗ ನಾನು ಜನರಿಗೆ ಕತ್ತಿ, ಬಿಲ್ಲು, ಬರ್ಜಿಗಳನ್ನು ಹಿಡಿದುಕೊಂಡು ಗೋಡೆಯ ಹಿಂದಣ ತಗ್ಗಾದ ಬಯಲುಗಳಲ್ಲಿ ಗೋತ್ರಗೋತ್ರಗಳಾಗಿ ನಿಲ್ಲಬೇಕೆಂದು ಆಜ್ಞಾಪಿಸಿದೆನು.
ಕಾಣಿಕೆಯು ಅನುಕೂಲತೆಗೂ, ಶ್ರೀಮಂತರ ಸಾನ್ನಿಧ್ಯ ಪ್ರವೇಶಕ್ಕೂ ಸಾಧನ.
ಗುಪ್ತ ಬಹುಮಾನವು ಕೋಪವನ್ನಾರಿಸುವುದು, ಮಡಲಲ್ಲಿಟ್ಟ ಲಂಚವು ಕ್ರೋಧವನ್ನು ಅಣಗಿಸುವುದು.