TSK

TSK · ಆದಿಕಾಂಡ 32:5

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಮತ್ತು ಯೆಹೋವನು ಯಾಕೋಬನಿಗೆ, “ನೀನು ನಿನ್ನ ತಂದೆಯ ದೇಶಕ್ಕೂ ನಿನ್ನ ಬಂಧುಗಳ ಬಳಿಗೂ ಹಿಂತಿರುಗಿ ಹೋಗು, ನಾನು ನಿನ್ನೊಂದಿಗೆ ಇರುವೆನು” ಎಂದು ಹೇಳಿದನು.

¶ ಏಸಾವನು, “ನಾನು ದಾರಿಯಲ್ಲಿ ಕಂಡ ಆ ಪಶುಗಳು ಯಾತಕ್ಕೆ?” ಎಂದು ಕೇಳಲು ಯಾಕೋಬನು, “ಸ್ವಾಮಿಯವರ ದಯೆ ನನಗೆ ದೊರಕಬೇಕೆಂದು ನಾನು ತಮಗೆ ಅವುಗಳನ್ನು ಕಳುಹಿಸಿಕೊಟ್ಟೆನು” ಎಂದನು.

¶ ಏಸಾವನು, “ನನ್ನ ಆಳುಗಳಲ್ಲಿ ಕೆಲವರನ್ನು ನಿನ್ನ ಸಂಗಡ ಬಿಟ್ಟು ಹೋಗುತ್ತೇನೆ” ಎನ್ನಲು ಯಾಕೋಬನು, “ಅದರ ಅಗತ್ಯವೇನು? ಒಡೆಯನೇ, ತಮ್ಮ ದಯೆ ನನ್ನ ಮೇಲಿದ್ದರೆ ಸಾಕು” ಎಂದು ಹೇಳಿದನು.

ಮೋವಾಬ್ಯಳಾದ ರೂತಳು ನವೊಮಿಗೆ, “ನಾನು ಹೋಗಿ, ಹಕ್ಕಲ ತೆನೆಗಳನ್ನು ಆಯ್ದುಕೊಳ್ಳಲು ಅವಕಾಶ ಮಾಡಿಕೊಡುವವರ ಹೊಲದಿಂದ ತೆನೆಗಳನ್ನು ಸಂಗ್ರಹಿಸಿಕೊಂಡು ಬರುತ್ತೇನೆ” ಅಂದಳು. ಅದಕ್ಕೆ ನವೊಮಿ “ಹೋಗಿ ಬಾ ಮಗಳೆ” ಅಂದಳು.

ಆಗ ಅರಸನು ಅವನಿಗೆ, “ಮೆಫೀಬೋಶೆತನ ಆಸ್ತಿಯೆಲ್ಲಾ ನಿನ್ನದೇ” ಎಂದು ಹೇಳಲು ಅವನು, “ಅರಸನೇ ನಿನಗೆ ಸಾಷ್ಟಾಂಗ ನಮಸ್ಕಾರ ಮಾಡುತ್ತೇನೆ. ನನ್ನ ಒಡೆಯನೇ, ನಿನ್ನ ದೃಷ್ಟಿಯಲ್ಲಿ ನನಗೆ ದಯೆ ದೊರಕಲಿ” ಎಂದನು.