TSK

TSK · ಆದಿಕಾಂಡ 33:10

مراجع Treasury of Scripture Knowledge في ಕನ್ನಡ IRV.

العودة إلى المقطع

ನೀನು ನಿನ್ನ ದಾಸನ ಮೇಲೆ ದಯೆ ಇಟ್ಟು ನನ್ನ ಪ್ರಾಣವನ್ನು ಉಳಿಸಿದ್ದು ಬಹು ವಿಶೇಷವಾದ ಉಪಕಾರವೇ; ಆದರೆ ಬೆಟ್ಟಕ್ಕೆ ಓಡಿ ಹೋಗಲಾರೆನು; ನಾನು ಹೋಗುತ್ತಿರುವಾಗ ಆ ವಿಪತ್ತು ನನಗೂ ಉಂಟಾಗಿ ಸತ್ತೇನು.

¶ ಅದಕ್ಕೆ ಯೆಹೂದನು ತನ್ನ ತಂದೆಗೆ ಹೇಳಿದ್ದೇನಂದರೆ, “ಆ ಮನುಷ್ಯನು ನಮಗೆ ‘ನಿಮ್ಮ ತಮ್ಮನನ್ನು ಕರೆದುಕೊಂಡು ಬಂದ ಹೊರತು ನನ್ನ ಮುಖವನ್ನು ನೋಡಬಾರದು’ ಎಂದು ಖಂಡಿತವಾಗಿ” ಹೇಳಿದ್ದಾನೆ.

¶ ಶೋಕಾಚರಣೆಯು ಮುಗಿದ ನಂತರ ಯೋಸೇಫನು ಫರೋಹನ ಪರಿವಾರದವರಿಗೆ, “ದಯವಿಟ್ಟು ನೀವು ಫರೋಹನ ಬಳಿಗೆ ಹೋಗಿ ಈ ವಿಷಯವನ್ನು ಮನಮುಟ್ಟುವಂತೆ ಮಾಡಿ,

ರೂತಳು ಅವನಿಗೆ ಸಾಷ್ಟಾಂಗನಮಸ್ಕಾರ ಮಾಡಿ “ಪರದೇಶಿಯಾದ ನನ್ನ ಮೇಲೆ ಇಷ್ಟು ಕಟಾಕ್ಷವಿಟ್ಟು ದಯೆ ತೋರಿಸಲು ಕಾರಣವೇನು?” ಎಂದು ಕೇಳಿದಳು.

ಅದಕ್ಕೆ ದಾವೀದನು, “ಒಳ್ಳೆಯದು, ನಿನ್ನ ಸಂಗಡ ಒಡಂಬಡಿಕೆ ಮಾಡಿಕೊಳ್ಳುತ್ತೇನೆ. ಆದರೆ ನಿನ್ನಿಂದ ನನಗೆ ಒಂದು ಸಹಾಯ ಬೇಕು. ನನ್ನನ್ನು ನೋಡುವುದಕ್ಕೆ ಬರುವಾಗ ಸೌಲನ ಮಗಳಾದ ಮೀಕಲಳನ್ನು ಕರೆದುಕೊಂಡು ಬರಬೇಕು. ಹಾಗೆ ಕರೆದುಕೊಂಡು ಬಾರದಿದ್ದರೆ, ನೀನು ನನ್ನ ಮುಖವನ್ನು ನೋಡಕೂಡದು” ಎಂದು ಉತ್ತರಕೊಟ್ಟನು.

¶ ಅಬ್ಷಾಲೋಮನು ಅರಸನ ಮೋರೆಯನ್ನು ನೋಡದೆ ಎರಡು ವರ್ಷ ಯೆರೂಸಲೇಮಿನಲ್ಲೇ ವಾಸವಾಗಿದ್ದನು.

ಅವನು ದೇವರನ್ನು ಪ್ರಾರ್ಥಿಸಿ ಆತನ ಒಲುಮೆಗೆ ಪಾತ್ರನಾಗಿ, ಆತನ ದರ್ಶನ ಮಾಡಿ ಉತ್ಸಾಹದಿಂದ ಧ್ವನಿಗೈದು, ತಿರುಗಿ ಆತನಿಂದ ನೀತಿವಂತನೆಂದು ಎನ್ನಿಸಿಕೊಳ್ಳುವನು.

ಕರ್ತನಾದ ಯೆಹೋವನು, “ಖಡ್ಗಕ್ಕೆ ಹತರಾಗದೆ ಉಳಿದ ಜನಕ್ಕೆ ಅರಣ್ಯದಲ್ಲಿ ದಯೆ ದೊರೆಯುವುದು; ಇಸ್ರಾಯೇಲ್ ವಿಶ್ರಾಂತಿಯನ್ನು ಹುಡುಕುವುದಕ್ಕೆ ಹೋಗುವಾಗ ಯೆಹೋವನು ದೂರದಿಂದ ಬಂದು ಅದಕ್ಕೆ ದರ್ಶನಕೊಟ್ಟು,

ಅವರು ಆತನ ಮುಖವನ್ನು ನೋಡುವರು. ಅವರ ಹಣೆಯ ಮೇಲೆ ಆತನ ಹೆಸರು ಇರುವುದು.