TSK

TSK · ಆದಿಕಾಂಡ 33:19

مراجع Treasury of Scripture Knowledge في ಕನ್ನಡ IRV.

العودة إلى المقطع

ಎಫ್ರೋನನಿಗೆ, “ಕೊಡಲಿಕ್ಕೆ ಮನಸ್ಸಿದ್ದರೆ ದಯವಿಟ್ಟು ನಾನು ಅರಿಕೆಮಾಡುವುದನ್ನು ಕೇಳು; ಆ ಭೂಮಿಗೆ ಕ್ರಯವನ್ನು ಕೊಡುತ್ತೇನೆ. ನನ್ನಿಂದ ಕ್ರಯ ತೆಗೆದುಕೊಂಡರೆ ಅದರಲ್ಲಿ ನನ್ನ ಪತ್ನಿಗೆ ಸಮಾಧಿ ಮಾಡುವೆನು” ಎಂದು ಹೇಳಿದನು.

ಹೀಗೆ ಮಮ್ರೆಗೆ ಎದುರಾಗಿರುವ ಮಕ್ಪೇಲಕ್ಕೆ ಸೇರಿದ ಎಫ್ರೋನನ ಭೂಮಿಯು, ಅದಕ್ಕೆ ಸೇರಿದ ಗವಿಯು ಅದರಲ್ಲಿ ಮತ್ತು ಅದರ ಸುತ್ತಣ ಅಂಚಿನಲ್ಲಿ ಇದ್ದ ಮರಗಳ ಸಹಿತವಾಗಿ,

ಆ ಗವಿಯು ಕಾನಾನ್ ದೇಶದ ಮಮ್ರೆಗೆದುರಾಗಿರುವ ಮಕ್ಪೇಲ ಎಂಬ ಬಯಲಿನಲ್ಲಿ ಇದೆ. ಅದನ್ನು ಅಬ್ರಹಾಮನು ಅದರ ಸುತ್ತಲಿರುವ ಭೂಮಿ ಸಹಿತವಾಗಿ ಹಿತ್ತಿಯನಾದ ಎಫ್ರೋನನಿಂದ ಸ್ವಂತ ಸ್ಮಶಾನ ಭೂಮಿಗಾಗಿ ಕೊಂಡುಕೊಂಡನು.

ಎಬೆದನ ಮಗನಾದ ಗಾಳನೂ ಅವರ ಸಂಗಡ ಕೂಡಿಕೊಂಡು, “ಅಬೀಮೆಲೆಕನು ಎಷ್ಟರವನು? ಶೆಕೆಮಿನವರಾದ ನಾವು ಎಷ್ಟರವರು? ನಾವು ಅಬೀಮೆಲೆಕನನ್ನು ಯಾಕೆ ಸೇವಿಸಬೇಕು? ಅವನು ಯೆರುಬ್ಬಾಳನ ಮಗನಲ್ಲವೋ? ಅವನ ಪುರಾಧಿಕಾರಿಯು ಜೆಬುಲನಲ್ಲವೋ? ನಾವು ಅವನನ್ನು ಯಾಕೆ ಸೇವಿಸಬೇಕು? ಶೆಕೆಮನ ತಂದೆಯಾದ ಹಮೋರನ ವಂಶದವರ ಸೇವೆಯನ್ನು ಮಾಡಲಿ.

ಅವರನ್ನು ಶೇಕೆಮಿಗೆ ತೆಗೆದುಕೊಂಡು ಹೋಗಿ ಅಲ್ಲಿ ಹಮೋರನ ಮಕ್ಕಳಿಂದ ಅಬ್ರಹಾಮನು ಬೆಳ್ಳಿಯನ್ನು ಕೊಟ್ಟು ಕೊಂಡುಕೊಂಡಿದ್ದ ಸಮಾಧಿಯೊಳಗೆ ಇಟ್ಟರು.