TSK

TSK · ಆದಿಕಾಂಡ 33:9

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಅವನ ತಂದೆಯಾದ ಇಸಾಕನು ಅವನಿಗೆ, “ಸಾರವುಳ್ಳ ಭೂಮಿಯೂ ಮೇಲಿನಿಂದ ಬೀಳುವ ಆಕಾಶದ ಮಂಜು ಇರುವ ಸ್ಥಳದಲ್ಲಿ ನಿನ್ನ ನಿವಾಸವಿರುವುದು.

¶ ಇಸ್ರಾಯೇಲ್ಯರು ಹೋಗಿ ಯೆಹೋವನ ಮುಂದೆ ಅಳುತ್ತಾ, “ನಾವು ತಿರುಗಿ ನಮ್ಮ ಬಂಧುಗಳಾದ ಬೆನ್ಯಾಮೀನ್ಯರೊಡನೆ ಯುದ್ಧಮಾಡಬೇಕೋ?” ಎಂದು ಕೇಳಲು, ಆತನು, “ಹೋಗಿ ಯುದ್ಧಮಾಡಿರಿ” ಅಂದನು.

ಕೊಡು, ಕೊಡು ಅನ್ನುವ ಎರಡು ಹೆಣ್ಣು ಮಕ್ಕಳು ಜಿಗಣೆಗೆ ಉಂಟು. ತೃಪ್ತಿಪಡದವುಗಳು ಮೂರು ಉಂಟು, ಹೌದು, ಸಾಕೆನ್ನದವುಗಳು ನಾಲ್ಕು ಉಂಟು.

ಆಗ ಅನನೀಯನು ಹೊರಟು ಆ ಮನೆಯೊಳಗೆ ಹೋಗಿ ಅವನ ಮೇಲೆ ತನ್ನ ಕೈಗಳನ್ನಿಟ್ಟು, “ಸಹೋದರನಾದ ಸೌಲನೇ, ನೀನು ಬಂದ ದಾರಿಯಲ್ಲಿ ನಿನಗೆ ಕಾಣಿಸಿಕೊಂಡ ಕರ್ತನಾದ ಯೇಸು ನಿನಗೆ ಕಣ್ಣು ಕಾಣುವಂತೆಯೂ, ನೀನು ಪವಿತ್ರಾತ್ಮಭರಿತನಾಗುವಂತೆಯೂ ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆ” ಎಂದು ಹೇಳಿದನು.

ಸಹೋದರನೇ, ನಿನ್ನ ಮೂಲಕ ದೇವಜನರ ಹೃದಯಗಳಿಗೆ ಪ್ರೋತ್ಸಾಹವೂ, ಪ್ರೇರಣೆಯೂ ಉಂಟಾದುದರಿಂದ ಅವರ ಬಗ್ಗೆ ಇರುವ ಪ್ರೀತಿಯಿಂದ ನನಗೆ ಬಹಳ ಆನಂದವೂ, ಸಮಾಧಾನವೂ ಉಂಟಾಯಿತು.