TSK

TSK · ಆದಿಕಾಂಡ 34:2

مراجع Treasury of Scripture Knowledge في ಕನ್ನಡ IRV.

العودة إلى المقطع

ಸೌಂದರ್ಯವುಳ್ಳವರಾಗಿರುವುದನ್ನು ನೋಡಿ ದೇವಪುತ್ರರು ತಮಗೆ ಇಷ್ಟವಾದವರನ್ನು ಹೆಂಡತಿಯರನ್ನಾಗಿ ಮಾಡಿಕೊಂಡರು.

ಅವನು ತನ್ನ ಹೆಂಡತಿಯಾದ ಸಾರಳನ್ನು ತಂಗಿಯೆಂದು ಹೇಳಿಕೊಂಡದ್ದರಿಂದ, ಗೆರಾರಿನ ಅರಸನಾದ ಅಬೀಮೆಲೆಕನು ಆಕೆಯನ್ನು ಕರೆಸಿ ತನ್ನ ಮನೆಯಲ್ಲಿ ಇರಿಸಿಕೊಂಡನು.

ಅವರು ಹತವಾದ ನಂತರ ಯಾಕೋಬನ ಮಕ್ಕಳು ಬಂದು, ಇವರು ನಮ್ಮ ತಂಗಿಯನ್ನು ಮಾನಭಂಗಪಡಿಸಿದ್ದಾರೆ ಎಂದು ಹೇಳಿ ಊರನ್ನು ಸೂರೆಮಾಡಿಬಿಟ್ಟರು.

ತರುವಾಯ ಅವಳು ಅವನಿಗೆ ಇಷ್ಟವಾಗದೆಹೋದರೆ ಅವನು ಅವಳನ್ನು ಅವಳ ಮನಸ್ಸು ಬಂದಲ್ಲಿಗೆ ಕಳುಹಿಸಿಬಿಡಬೇಕು. ಅವಳನ್ನು ಸಂಗಮಿಸಿದ್ದರಿಂದ ಹಣ ಕೊಟ್ಟು ದಾಸತ್ವಕ್ಕೆ ಮಾರಲೂ ಬಾರದು, ದಾಸಿಯಂತೆ ನಡಿಸಲೂ ಬಾರದು.

ಅವನು ಅವಳನ್ನು ಮಾನಭಂಗಪಡಿಸಿದ್ದರಿಂದ, ಅವಳ ತಂದೆಗೆ ಐವತ್ತು ಶೆಕೆಲ್ ಬೆಳ್ಳಿಯನ್ನು ಕೊಟ್ಟು ಅವಳನ್ನು ಹೆಂಡತಿಯನ್ನಾಗಿ ಮಾಡಿಕೊಳ್ಳಬೇಕು. ಅವನು ಬದುಕುವ ತನಕ ಅವಳನ್ನು ಪರಿತ್ಯಾಗಮಾಡುವುದಕ್ಕೆ ಅವನಿಗೆ ಅಧಿಕಾರವಿರುವುದಿಲ್ಲ.

¶ ಸಂಸೋನನು ಗಟ್ಟಾ ಇಳಿದು ತಿಮ್ನಾ ಊರಿಗೆ ಹೋಗಿ ಅಲ್ಲಿನ ಫಿಲಿಷ್ಟಿಯರ ಹೆಣ್ಣುಗಳಲ್ಲಿ ಒಬ್ಬಳನ್ನು ನೋಡಿ, ತಿರುಗಿ ತಂದೆತಾಯಿಗಳ ಬಳಿಗೆ ಬಂದು

¶ ಅವನು ಒಂದು ದಿನ ಸಂಜೆ ಹೊತ್ತಿನಲ್ಲಿ ಅರಮನೆಯ ಮಾಳಿಗೆಯ ಮೇಲೆ ತಿರುಗಾಡುತ್ತಿದ್ದನು. ಅವನು ಅಲ್ಲಿಂದ ಬಹು ಸುಂದರಿಯಾದ ಒಬ್ಬ ಸ್ತ್ರೀ ಸ್ನಾನಮಾಡುವುದನ್ನು ಕಂಡನು.

ಆದರೆ ಅವನು ಆಕೆಗಿಂತಲೂ ಬಲಶಾಲಿಯಾಗಿದ್ದರಿಂದ ಆಕೆಯ ಮಾತನ್ನು ಕೇಳದೆ ಬಲಾತ್ಕಾರದಿಂದ ಆಕೆಯನ್ನು ಕೆಡಿಸಿದನು.

ಒಂದು ವೇಳೆ ನನ್ನ ಹೃದಯವು ಪರಸ್ತ್ರೀಯಲ್ಲಿ ಮೋಹಗೊಂಡು, ನಾನು ನೆರೆಯವನ ಬಾಗಿಲಲ್ಲಿ ಹೊಂಚು ಹಾಕಿದ್ದರೆ,

ನಿನ್ನವರು ತಂದೆಗೆ ಮಾನಭಂಗ ಮಾಡಿದ್ದಾರೆ; ನಿನ್ನಲ್ಲಿ ಮುಟ್ಟಿನಿಂದ ಅಶುದ್ಧಳಾದವಳನ್ನು ಕೂಡಿದ್ದಾರೆ.